ಬೆನ್ ಸ್ಟೋಕ್ಸ್ ಭರ್ಜರಿ ಶತಕ: ಹಾಲಿ ಚಾಂಪಿಯನ್ನರ ವಿರುದ್ಧ ರಾಜಸ್ಥಾನ್ ಗೆ ಭರ್ಜರಿ ಜಯ
Team Udayavani, Oct 26, 2020, 7:55 AM IST
ಅಬುಧಾಬಿ: ಆಲ್ ರೌಂಡರ್ ಬೆನ್ ಸ್ಟೋಕ್ಸ್ ರ ಭರ್ಜರಿ ಶತಕದ ನೆರವಿನಿಂದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವೀರೋಚಿತ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ರಾಜಸ್ಥಾನ್ ಪ್ಲೇ ಆಫ್ ಕನಸು ಜೀವಂತವಾಗಿದೆ.
ಅಬುಧಾಬಿ ಅಂಗಳದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಪೊಲಾರ್ಡ್ ನಾಯಕತ್ವದ ಮುಂಬೈ ಇಂಡಿಯನ್ಸ್ ಆರಂಭದ ನಿಧಾನಗತಿಯ ಬ್ಯಾಟಿಂಗ್ ಹೊರತಾಗಿಯೂ ಉತ್ತಮ ರನ್ ಕಲೆಹಾಕಿತು. ಇಶಾನ್ ಕಿಶನ್ 37 ರನ್, ಸೂರ್ಯಕುಮಾರ್ ಯಾದವ್ 40, ಸೌರಭ್ ತಿವಾರಿ 34 ರನ್ ಬಾರಿಸಿದರು. ಆದರೆ ಕೊನೆಯಲ್ಲಿ ಆರ್ಭಟಿಸಿದ ಹಾರ್ದಿಕ್ ಪಾಂಡ್ಯ ಕೇವಲ 21 ಎಸೆತಗಳಲ್ಲಿ 60 ರನ್ ಬಾರಿಸಿದರು.
20 ಓವರ್ ಗಳಲ್ಲಿ ಮುಂಬೈ ಐದು ವಿಕೆಟ್ ನಷ್ಟಕ್ಕೆ 195 ರನ್ ಕಲೆ ಹಾಕಿತು. ರಾಯಲ್ಸ್ ಪರ ಆರ್ಚರ್ ಮತ್ತು ಗೋಪಾಲ್ ಎರಡು ವಿಕೆಟ್ ಪಡೆದರು.
ಗುರಿ ಬೆನ್ನತ್ತಿದ ರಾಜಸ್ಥಾ್ನ್ ರಾಬಿನ್ ಉತ್ತಪ್ಪ ಮತ್ತು ಸ್ಮಿತ್ ವಿಕೆಟ್ ಆರಂಭದಲ್ಲಿ ಕಳೆದುಕೊಂಡಿತು. ಆದರೆ ನಂತರ ಜೊತೆಯಾದ ಬೆನ್ ಸ್ಟೋಕ್ಸ್ ಮತ್ತು ಸಂಜು ಸ್ಯಾಮ್ಸನ್ ಅಜೇಯ ಜೊತೆಯಾಟವಾಡಿದರು. ಸ್ಟೋಕ್ಸ್ 60 ಎಸೆತಗಳಲ್ಲಿ 107 ರನ್ ಬಾರಿಸಿದರೆ, ಸಂಜು 54 ರನ್ ಗಳಿಸಿದರು. 18.2 ಓವರ್ ಗಳಲ್ಲಿ ರಾಜಸ್ಥಾನ್ ಗೆಲುವು ಸಾಧಿಸಿತು.
ಈ ಗೆಲುವಿನೊಂದಿಗೆ ರಾಜಸ್ಥಾನ್ 10 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ. ಮುಂಬೈ 14 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿಯೇ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.