ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡುವುದು ‘ಹೆಮ್ಮೆಯ ಕ್ಷಣ’: SRH ಸ್ಪಿನ್ನರ್ ರಶೀದ್ ಖಾನ್
Team Udayavani, Sep 20, 2020, 5:48 PM IST
ಅಬುಧಾಬಿ: ವಿರಾಟ್ ಕೊಹ್ಲಿ ಅವರಿಗೆ ಬೌಲಿಂಗ್ ಮಾಡುವುದು ಹೆಮ್ಮೆಯ ಕ್ಷಣ ಎಂದು ಸನ್ ರೈಸರ್ಸ್ ಹೈದರಬಾದ್ ತಂಡದ ಲೆಗ್ ಸ್ಪಿನ್ನರ್ ರಶೀದ್ ಖಾನ್ ಅಭಿಪ್ರಾಯಪಟ್ಟಿದ್ದಾರೆ. ಡೆತ್ ಓವರ್ ಗಳಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಾರೆ. ಇಂತಹ ಸಂದರ್ಭದಲ್ಲಿ ಬೌಲಿಂಗ್ ಮಾಡುವುದು ಕೂಡ ಸವಾಲಿನ ಕೆಲಸವಾದ್ದರಿಂದ, ಇಲ್ಲಿ ಬೌಲರ್ ಸಾಕಷ್ಟು ಕಲಿಯುತ್ತಾನೆ ಎಂದು ಹೇಳಿದ್ದಾರೆ.
ಸೆ.21 ರಂದು ಹೈದರಬಾದ್ ತಂಡ ತನ್ನ ಮೊದಲ ಪಂದ್ಯದಲ್ಲಿ ಬೆಂಗಳೂರನ್ನು ಎದುರಿಸಲಿದೆ. ಈ ಹಿನ್ನಲೆಯಲ್ಲಿ ಮಾತನಾಡಿದ ರಶೀದ್, ನನ್ನ ಮನಸ್ಸಿನಲ್ಲಿ ಯಾವಾಗಲೂ ಒಂದು ಆಲೋಚನೆಯಿರುತ್ತದೆ. ಇನ್ನಿಂಗ್ಸ್‌ನಲ್ಲಿ ಮೂರು ಅಥವಾ ನಾಲ್ಕು ಓವರ್‌ಗಳು ಉಳಿದಿರುವಾಗಲೆಲ್ಲಾ, ನಾನು ಬ್ಯಾಟ್ ನೊಂದಿಗೆ ಉತ್ತಮ ಪ್ರದರ್ಶನ ನೀಡಬಲ್ಲೆ. ಇದು ಪರಿಸ್ಥಿತಿ ಹೇಗೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ,
ನಾನು ಬ್ಯಾಟ್ ಮಾಡಬಲ್ಲೆ ಎಂಬುದರ ಬಗ್ಗೆ ನಾನು ಹೆಚ್ಚು ಯೋಚಿಸುವುದಿಲ್ಲ. ಬದಲಾಗಿ ಇಡೀ ಪಂದ್ಯದಲ್ಲಿ ನಾನು ಏನು ಮಾಡಬಹುದು ಎಂಬುದರ ಬಗ್ಗೆ ನಾನು ಗಮನ ಹರಿಸುತ್ತೇನೆ, ತಂಡ ಗೆಲ್ಲಲು ನಾನು ನನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಆರ್‌ಸಿಬಿ ವಿರುದ್ಧದ ಮುಂಬರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರನ್ನು ಎದುರಿಸುವ ಕುರಿತಾಗಿ ಮಾತನಾಡಿದ ರಶೀದ್, ಯಾರಿಗಾದರೂ ಬೌಲಿಂಗ್ ಮಾಡುವಾಗ ಒತ್ತಡಕ್ಕೆ ಒಳಗಾಗುವುದು ಸಹಜ. ವಿರಾಟ್ ಮೂರು ಫಾರ್ಮೆಟ್ ನಲ್ಲಿ ವಿಶ್ವ ದರ್ಜೆಯ ಆಟಗಾರ, ನಾನು ಅವರಿಗೆ ಬೌಲಿಂಗ್ ಮಾಡುವುದನ್ನು ಆನಂದಿಸುತ್ತೇನೆ, ಅದು ನನಗೆ ಹೆಮ್ಮೆಯ ಕ್ಷಣವಾಗಿದೆ. ಬೌಲರ್ ಆಗಿ ಅತ್ಯುತ್ತಮವಾಗಿ ಪ್ರದರ್ಶನ ನೀಡಲು ಬಯಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.