ಜಯದ ವಿಶ್ವಾಸದಲ್ಲಿ RCB-KKR: ಟಾಸ್ ಗೆದ್ದ ಮಾರ್ಗನ್ ಪಡೆ ಬ್ಯಾಟಿಂಗ್ ಆಯ್ಕೆ: ತಂಡ ಇಂತಿದೆ…
Team Udayavani, Oct 21, 2020, 7:00 PM IST
ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ 39ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಮಾರ್ಗನ್ ಪಡೆ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸೂಪರ್ ಓವರ್ ನಲ್ಲಿ ಗೆದ್ದು ಬೀಗಿದ ಕೊಲ್ಕತ್ತಾ, ಇದೀಗ ಬಲಿಷ್ಟ ತಂಡವಾಗಿ ಹೊರಹೊಮ್ಮಿದೆ. ವೇಗದ ಬೌಲರ್ ಲಾಕಿ ಫರ್ಗ್ಯೂಸನ್ ಆಗಮನ ತಂಡದ ಶಕ್ತಿಯನ್ನು ಹೆಚ್ಚಿಸಿದೆ. ಈವರೆಗೂ 5 ಗೆಲುವಿನೊಂದಿಗೆ 10 ಅಂಕಗಳಿಸಿ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಇನ್ನು 6 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಕೊಹ್ಲಿ ನೇತೃತ್ವದ ಬೆಂಗಳೂರು ಫುಲ್ ಫಾರ್ಮ್ ನಲ್ಲಿದೆ. ಕಳೆದ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಗೆದ್ದಿರುವ ಬೆಂಗಳೂರು ಆತ್ಮವಿಶ್ವಾಸದಲ್ಲಿದೆ. ಈ ಆವೃತ್ತಿಯಲ್ಲಿ ಕೆಕೆಆರ್ ವಿರುದ್ಧ ಎರಡನೇ ಬಾರಿ ಎದುರಾಗುತ್ತಿದೆ.
ಇತ್ತಂಡಗಳು 25 ಬಾರಿ ಮುಖಾಮುಖಿಯಾಗಿದ್ದು ಆರ್ ಸಿಬಿ 11 ರಲ್ಲಿ ಮತ್ತು ಕೆಕೆಆರ್ 14ರಲ್ಲಿ ಜಯಗಳಿಸಿದೆ.
ಆಡುವ ಹನ್ನೊಂದರ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೇವದತ್ ಪಡಿಕ್ಕಲ್, ಆರನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ , ಗುರ್ಕೀರತ್ ಸಿಂಗ್ ಮನ್, ವಾಷಿಂಗ್ಟನ್ ಸುಂದರ್, ಕ್ರಿಸ್ ಮೋರಿಸ್, ಮೊಹಮ್ಮದ್ ಸಿರಾಜ್, ಇಸುರು ಉದಾನಾ, ನವದೀಪ್ ಸೈನಿ, ಯುಜ್ವೇಂದ್ರ ಚಹಲ್
ಕೋಲ್ಕತಾ ನೈಟ್ ರೈಡರ್ಸ್: ಶುಭ್ ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯೊನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್, ಟಾಮ್ ಬಾಂಟನ್, ಪ್ಯಾಟ್ ಕಮ್ಮಿನ್ಸ್, ಲಾಕಿ ಫರ್ಗ್ಯೂಸನ್, ಕುಲದೀಪ್ ಯಾದವ್, ಪ್ರಸಿದ್ಧ ಕೃಷ್ಣ, ವರುಣ್ ಚಕ್ರವರ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗ್ರಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.