ಚೆನ್ನೈ- ರಾಜಸ್ಥಾನ್ ಕಾಳಗ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಧೋನಿಪಡೆ
Team Udayavani, Sep 22, 2020, 7:01 PM IST
ಶಾರ್ಜಾ: ಐಪಿಎಲ್ 13ನೇ ಆವೃತ್ತಿಯ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.
ಮೊದಲ ಪಂದ್ಯ ಗೆದ್ದು ಉತ್ಸಾಹದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ಈ ಆವೃತ್ತಿಯ ತನ್ನ ಮೊದಲ ಪಂದ್ಯವಾಡುತ್ತಿದೆ. ರಾಯಲ್ಸ್ ತಂಡದಲ್ಲಿ ಘಟಾನುಘಟಿ ಆಟಗಾರರು ಅಲಭ್ಯರಾಗಿದ್ದು ಕೊಂಚ ಹಿನ್ನಡೆಯುಂಟುಮಾಡಿದೆ. ಉಳಿದಂತೆ ಮಿದುಳು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ನಾಯಕ ಸ್ಟೀವ್ ಸ್ಮಿತ್ ಗುಣಮುಖರಾಗಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿರುವ ಧೋನಿ ನಾಯಕತ್ವದ ಚೆನ್ನೈ ಸಹಜವಾಗಿಯೇ ಆತ್ಮವಿಶ್ವಾಸದಲ್ಲಿದೆ. ಸುರೇಶ್ ರೈನಾ ಸ್ಥಾನವನ್ನು ಅಂಬಟಿ ರಾಯುಡು ಸಮರ್ಥವಾಗಿ ತುಂಬಿದ್ದು, ಫಾಫ್ ಡು ಪ್ಲೆಸಿಸ್ , ಧೋನಿ ಚೆನ್ನೈನ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ.
ಎರಡು ತಂಡಗಳು 21 ಬಾರಿ ಮುಖಾಮುಖಿಯಾಗಿದ್ದು 14ರಲ್ಲಿ ಚೆನ್ನೈ ಗೆದ್ದರೆ, 7 ರಲ್ಲಿ ರಾಜಸ್ಥಾನ್ ಜಯಗಳಿಸಿದೆ.
ಆಡುವ ಹನ್ನೊಂದರ ಬಳಗ
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ರಾಬಿನ್ ಉತ್ತಪ್ಪ, ಸಂಜು ಸ್ಯಾಮ್ಸನ್ , ಸ್ಟೀವನ್ ಸ್ಮಿತ್ (ನಾಯಕ), ಡೇವಿಡ್ ಮಿಲ್ಲರ್, ರಿಯಾನ್ ಪರಾಗ್, ಶ್ರೇಯಾಸ್ ಗೋಪಾಲ್, ಟಾಮ್ ಕರಾನ್, ರಾಹುಲ್ ತೇವಟಿಯಾ, ಜೋಫ್ರಾ ಆರ್ಚರ್, ಜಯದೇವ್ ಉನಾದ್ಕಟ್
ಚೆನ್ನೈ ಸೂಪರ್ ಕಿಂಗ್ಸ್: ಮುರಳಿ ವಿಜಯ್, ಶೇನ್ ವ್ಯಾಟ್ಸನ್, ಫಾಫ್ ಡು ಪ್ಲೆಸಿಸ್, ರುತುರಾಜ್ ಗಾಯಕ್ ವಾಡ್, ಎಂ.ಎಸ್.ಧೋನಿ (ನಾಯಕ), ಕೇದಾರ್ ಜಾಧವ್, ರವೀಂದ್ರ ಜಡೇಜಾ, ಸ್ಯಾಮ್ ಕರನ್, ದೀಪಕ್ ಚಹರ್, ಪಿಯೂಷ್ ಚಾವ್ಲಾ, ಲುಂಗಿ ಎನ್ ಗಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.