ಹೈದರಾಬಾದ್- ರಾಜಸ್ಥಾನ್ ಹಣಾಹಣಿ: ಟಾಸ್ ಗೆದ್ದ ವಾರ್ನರ್ ಪಡೆ ಬ್ಯಾಟಿಂಗ್ ಆಯ್ಕೆ
Team Udayavani, Oct 11, 2020, 2:59 PM IST
ದುಬೈ: ಕಳೆದ ಪಂದ್ಯವನ್ನು ಭರ್ಜರಿಯಾಗಿ ಗೆದ್ದಿರುವ ಹುಮ್ಮಸ್ಸಿನಲ್ಲಿರುವ ಸನ್ ರೈಸರ್ಸ್ ಹೈದರಾಬಾದ್ ಮತ್ತು ಸತತ ಸೋಲುಗಳಿಂದ ಕಂಗೆಟ್ಟಿರುವ ರಾಜಸ್ಥಾನ ರಾಯಲ್ಸ್ ತಂಡಗಳು ಇಂದಿನ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ಹೈದರಾಬಾದ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ಕಳೆದ ಪಂದ್ಯದಲ್ಲಿ ಪಂಜಾಬ್ ವಿರುದ್ಧ 69 ರನ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿರುವ ವಾರ್ನರ್ ಪಡೆ ಉತ್ಸಾಹದಲ್ಲಿದೆ. ನಾಯಕ ವಾರ್ನರ್, ಕೀಪರ್ ಬೆರಿಸ್ಟೋ, ವಿಲಿಯಮ್ಸನ್ ಉತ್ತಮ ಫಾರ್ಮ್ ನಲ್ಲಿದ್ದಾರೆ. ಬೌಲಿಂಗ್ ವಿಭಾಗವೂ ಸದೃಢವಾಗಿದ್ದು, ರಶೀದ್ ಖಾನ್, ನಟರಾಜನ್, ಸಂದೀಪ್ ಶರ್ಮಾ ಉತ್ತಮ ದಾಳಿ ಸಂಘಟಿಸುತ್ತಿದ್ದಾರೆ.
ಇದನ್ನೂ ಓದಿ:ಟೈಮ್ ಮುಖಪುಟದಲ್ಲಿ ಅಪ್ಪಟ ಭಾರತೀಯ ಪ್ರತಿಭೆ ಮಾನಸಿ ಜೋಷಿ
ಸತತ ಸೋಲಿನಿಂದ ಕಂಗೆಟ್ಟಿರುವ ರಾಜಸ್ಥಾನ ರಾಯಲ್ಸ್ ಇಂದಾದರು ಗೆಲುವು ಕಾಣುವ ನಿರೀಕ್ಷೆಯಲ್ಲಿದೆ. ತಂಡದಲ್ಲಿ ಬೌಲರ್ ಗಳು ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಆದರೆ ಬ್ಯಾಟ್ಸ್ ಮನ್ ಗಳು ವಿಫಲರಾಗುತ್ತಿರುವುದು ನಾಯಕ ಸ್ಮಿತ್ ಗೆ ತಲೆನೋವಾಗಿ ಪರಿಣಮಿಸಿದೆ.
ತಂಡಗಳು
ಹೈದರಾಬಾದ್: ಡೇವಿಡ್ ವಾರ್ನರ್ (ನಾ), ಜಾನಿ ಬೈರ್‌ಸ್ಟೋವ್ (ವಿ.ಕೀ), ಮನೀಷ್ ಪಾಂಡೆ, ಕೇನ್ ವಿಲಿಯಮ್ಸನ್, ಪ್ರಿಯಾಮ್ ಗರ್ಗ್, ಅಭಿಷೇಕ್ ಶರ್ಮಾ, ವಿಜಯ್ ಶಂಕರ್, ರಶೀದ್ ಖಾನ್, ಸಂದೀಪ್ ಶರ್ಮಾ, ಟಿ ನಟರಾಜನ್, ಖಲೀಲ್ ಅಹ್ಮದ್.
ರಾಜಸ್ಥಾನ: ಜೋಸ್ ಬಟ್ಲರ್ (ವಿ.ಕೀ), ಸ್ಟೀವ್ ಸ್ಮಿತ್ (ನಾ), ಸಂಜು ಸ್ಯಾಮ್ಸನ್, ಬೆನ್ ಸ್ಟೋಕ್ಸ್, ರಿಯಾನ್ ಪರಾಗ್, ರಾಬಿನ್ ಉತ್ತಪ್ಪ, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಸ್ ಗೋಪಾಲ್, ಕಾರ್ತಿಕ್ ತ್ಯಾಗಿ, ಜಯದೇವ್ ಉನಾದ್ಕತ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.