Bengaluru Kambala: ಸಂಚಾರ ಮಾರ್ಗ ಬದಲು
Team Udayavani, Nov 24, 2023, 8:10 AM IST
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ನ.25 ಮತ್ತು 26 ರಂದು ಬೆಂಗಳೂರು ಕಂಬಳ-ನಮ್ಮ ಕಂಬಳ ಕಾರ್ಯಕ್ರಮ ಆಯೋಜನೆಯಾಗಿದ್ದು, ಈ ಸಂಬಂಧ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಸೇರುವ ಸಾಧ್ಯತೆ ಇದೆ. ಹೀಗಾಗಿ ಅರಮನೆ ಮೈದಾನ ರಸ್ತೆಯಲ್ಲಿ ಕೆಲ ಸಂಚಾರ ಮಾರ್ಪಾಡು ಮತ್ತು ವಾಹನಗಳ ನಿಲುಗಡೆ ಸ್ಥಳ ನಿಯೋಜಿಸಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.
ನಗರದ ಸಿಬಿಡಿ ಪ್ರದೇಶ, ಬಳ್ಳಾರಿ ರಸ್ತೆ ಹೆಬ್ಟಾಳ, ಯಶವಂತಪುರ ಕಡೆಯಿಂದ ಬರುವ ವಾಹನಗಳು ಮೇಖ್ರಿ ಸರ್ಕಲ್ ತಿರುವ ಪಡೆದು ಗೇಟ್ ನಂ-01ರ ಕೃಷ್ಣವಿಹಾರ್‌ರಲ್ಲಿ ಪ್ರವೇಶಿಸಿ, ವಾಹನ ಪಾರ್ಕ್ ಮಾಡಬೇಕು. ಕ್ಯಾಬ್ ಸೇವೆ ಬಳಸಿಕೊಳ್ಳುವವರು ಗೇಟ್ ನಂ.2 ಪ್ರವೇಶಿಸಿ ನಿಗದಿತ ಸ್ಥಳದಲ್ಲಿ ಇಳಿದು ಗೇಟ್ ನಂ.03 ಮೂಲಕ ಕ್ಯಾಬ್‌ಗಳು ನಿರ್ಗಮಿಸಬೇಕು. ವಾಪಸ್ ಹೋಗುವ ವಾಹನಗಳು ಕಡ್ಡಾಯವಾಗಿ ಜಯಮಹಲ್ ರಸ್ತೆಯ ಅಮಾನುಲ್ಲಾ ಖಾನ್ ಗೇಟ್ ಮೂಲಕ ತೆರಳಬೇಕು ಎಂದು ಸಂಚಾರ ಪೊಲೀಸರು ಹೇಳಿದರು.
ಪರ್ಯಾಯ ಮಾರ್ಗ: ಅರಮನೆ ರಸ್ತೆ, ಎಂ.ವಿ. ಜಯರಾಮ್ ರಸ್ತೆ, ಬಳ್ಳಾರಿ ರಸ್ತೆ, ಕನ್ನಿಂಗ್ ಹ್ಯಾಂ ರಸ್ತೆ, ಮಿಲ್ಲರ್ ರಸ್ತೆ, ಜಯಮಹಲ್ ರಸ್ತೆಗಳನ್ನು ಬಳಸದೆ ಬೇರೆ ಮಾರ್ಗದಲ್ಲಿ ಹೋಗಲು ಕೋರಲಾಗಿದೆ. ಹಾಗೆಯೇ ಪ್ಯಾಲೆಸ್ ರಸ್ತೆ, ಎಂ.ವಿ.ಜಯರಾಮ್ ರಸ್ತೆ. ಸಿ.ವಿ ರಾಮನ್ ರಸ್ತೆ, ವಸಂತನಗರ, ಜಯಮಹಲ್ ರಸ್ತೆ, ರಮಣ ಮಹರ್ಷಿ ರಸ್ತೆ, ನಂದಿ ದುರ್ಗ ರಸ್ತೆ, ಬಳ್ಳಾರಿ ರಸ್ತೆ, ತರಳಬಾಳು ರಸ್ತೆ, ಮೌಂಟ್ ಕಾರ್ಮೆಲ್ ಕಾಲೇಜು ರಸ್ತೆಯಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.
ಭಾರೀ ಸರಕು ಸಾಗಣೆ ವಾಹನಗಳ ಸಂಚಾರವನ್ನು ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಮತ್ತು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ನಿಷೇಧಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.