Rajyotsava Awards ಸಾಗರಕ್ಕೊಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ
ರಂಗ ನಿರ್ದೇಶಕ ಜಂಬೆಗೆ ಪುರಸ್ಕಾರ
Team Udayavani, Oct 31, 2023, 4:52 PM IST
ಸಾಗರ: ರಾಜ್ಯದ ಎರಡನೇ ಸಾಂಸ್ಕೃತಿಕ ನಗರಿ ಎನಿಸಿಕೊಂಡಿರುವ ಸಾಗರಕ್ಕೆ ಈ ಬಾರಿ ರಂಗಭೂಮಿಗೆ ನೀಡುವ ರಾಜ್ಯೋತ್ಸವ ಪ್ರಶಸ್ತಿಯ ಗರಿಯೊಂದು ದೊರಕಿದೆ. ಈ ಪ್ರಶಸ್ತಿಗೆ ನಾಡಿನ ಹೆಸರಾಂತ ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ ಭಾಜನರಾಗಿದ್ದಾರೆ.
ಜಂಬೆ ತಾಲೂಕಿನ ಅಡ್ಡೇರಿ ಗ್ರಾಮದವರು. ಇಲ್ಲಿನ ಕೆಳದಿಯ ಭಾರತಿ ಕಲಾವಿದರು ಸಂಸ್ಥೆಯ ಸಂಗ್ಯಾ ಬಾಳ್ಯಾ ನಾಟಕದ ಮೂಲಕ ರಂಗಭೂಮಿಯನ್ನು ಪ್ರವೇಶಿಸಿದವರು. ನಂತರ ಅವಕಾಶಗಳನ್ನರಸಿ ಬೆಂಗಳೂರು ಸೇರಿ ಅಲ್ಲಿಂದ ರಾಷ್ಟ್ರೀಯ ನಾಟಕ ಶಾಲೆಯಲ್ಲಿ ರಂಗಭೂಮಿಯ ನಿರ್ದೇಶನದಲ್ಲಿ ಪದವಿ ಪಡೆದರು. ಪ್ರಪಂಚದ ಗ್ರಾಮೀಣ ರಂಗಭೂಮಿ ಎಂಬ ಖ್ಯಾತಿಯ ನೀನಾಸಮ್ ಹೆಗ್ಗೋಡು ರೂವಾರಿ ಕೆ.ವಿ. ಸುಬ್ಬಣ್ಣವರ ಆಣತಿಯ ಮೇರೆಗೆ ನೀನಾಸಮ್ ರಂಗಶಿಕ್ಷಣ ಕೇಂದ್ರದ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದರು. ನಂತರ ಮೈಸೂರಿನ ರಂಗಾಯಣದ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು.
ನಿವೃತ್ತರಾದ ನಂತರ ಸ್ವಂತಂತ್ರ ನಿರ್ದೇಶಕರಾಗಿ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆ, ಭೂಪಾಲ್, ತ್ರಿಷೂರ್ ಹೀಗೆ ದೇಶಾದ್ಯಂತ ಅನೇಕ ರಂಗ ಶಾಲೆಗಳಲ್ಲಿ ಅತಿಥಿ ಉಪನ್ಯಾಸಕರಾಗಿ, ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಸಾಗರದಲ್ಲಿ ಲಾಲ್ ಬಹದ್ದೂರ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಜಿ.ಎಸ್. ಭಟ್ ಅವರ ಗ್ಲಾನಿ ನಾಟಕವನ್ನು ಸಾಗರದಲ್ಲಿ ಉದಯ ಕಲಾವಿದರ ಆಶ್ರಯದಲ್ಲಿ ನಿರ್ದೇಶಿಸುತ್ತಿದ್ದಾರೆ.
ಬಿ.ವಿ. ಕಾರಂತರ ಅತ್ಯಂತ ಆಪ್ತ ಶಿಷ್ಯರಲ್ಲೊಬ್ಬರಾದ ಜಂಬೆ ಅವರ ಗರಡಿಯಲ್ಲಿ ಪಳಗಿದವರು. ನೀನಾಸಮ್ ರಂಗ ಶಿಕ್ಷಣ ಕೇಂದ್ರದ ಹಿರಿಯ ವಿದ್ಯಾರ್ಥಿಗಳಿಂದ ರಂಗಭೂಮಿಯ ದ್ರೋಣಾಚಾರ್ಯ ಎಂದೇ ಕರೆಸಿಕೊಳ್ಳುತ್ತಿರುವ ಇವರು ನೀನಾಸಮ್ ತಿರುಗಾಟಕ್ಕೆ ಚಿರೇಬಂದಿವಾಡೆ, ಮೂವರು ಅಕ್ಕತಂಗಿಯರು, ಚಾಣಕ್ಯ ಪ್ರಪಂಚ, ಪುಂಟಿಲಾ, ಭಾಸಭಾರತ ತಲೆದಂಡ ಮುಂತಾದ ಅನೇಕ ನಾಟಕಗಳನ್ನು ನಿರ್ದೇಶಿಸುವ ಮೂಲಕ ತಿರುಗಾಟಕ್ಕೊಂದು ಘನತೆ ತಂದುಕೊಟ್ಟವರು. ಯಕ್ಷಗಾನವನ್ನು ಬಹುವಾಗಿ ಮೆಚ್ಚಿಕೊಂಡಿರುವ ಇವರ ಯಕ್ಷಗಾನದಲ್ಲಿನ ಸಾಧ್ಯತೆಗಳನ್ನು ನಾಟಕಗಳಲ್ಲಿ ಸಮರ್ಥವಾಗಿ ಬಳಸಿಕೊಂಡವರು.
ಅವರು ಹೇಳಿದರು….
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಅಂದರೆ ಕನ್ನಡದ ನೆಲ ಜಲ ಭಾಷೆ ಮತ್ತು ಸಂಸ್ಕೃತಿಯ ಪ್ರಶಸ್ತಿ ಎಂದು ಭಾವಿಸುತ್ತೇನೆ. ಕನ್ನಡದ ಮನಸ್ಸುಗಳನ್ನು ಒಂದಾಗಿಸಿದ ಮಹಾ ಪರಂಪರೆಯ ಪೂರ್ವ ಸೂರಿಗಳನ್ನ ವಿನಯದಿಂದ ಸ್ಮರಿಸುತ್ತೇನೆ. ಈ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಇಂಥ ಗೌರವವನ್ನು ಸ್ವೀಕರಿಸಲು ಹೆಮ್ಮೆ ಮತ್ತು ಸಂತೋಷವಾಗುತ್ತಿದೆ. ಈ ಪ್ರಶಸ್ತಿಗೆ ಕಾರಣರಾದ ನನ್ನೊಂದಿಗೆ ರಂಗ ಕಾಯಕದಲ್ಲಿ ಭಾಗಿಗಳಾದ, ಒಡನಾಡಿಗಳಾದ ಸಮಸ್ತ ಗೆಳೆಯ, ಗೆಳತಿಯರನ್ನ ಸ್ಮರಿಸುತ್ತೇನೆ. ಇದರ ಶ್ರೇಯಸ್ಸು ಸಹೃದಯರಿಗೇ ಸಲ್ಲುವಂಥದ್ದು.
-ಚಿದಂಬರ ರಾವ್ ಜಂಬೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.