ಬಿಬಿಎಂಪಿ ಬಜೆಟ್‌ ಇಂದು ಮಂಡನೆ

Team Udayavani, Feb 28, 2018, 11:53 AM IST

bbmp.jpg

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿಯ ಆಡಳಿತದ ಮೂರನೇ ಬಜೆಟ್‌ ಬುಧವಾರ ಮಂಡನೆಯಾಗಲಿದ್ದು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್‌ನಲ್ಲಿ ನಗರದ ಬಡ ಹಾಗೂ ಮಧ್ಯಮ ವರ್ಗದ ಹಿತಕಾಯುವ ಸಾಧ್ಯತೆ ಇದೆ.

ಜೆಡಿಎಸ್‌ ಸದಸ್ಯ ಹಾಗೂ ತೆರಿಗೆ ಹಾಗೂ ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಮಹದೇವ್‌, 2018 – 19ನೇ ಸಾಲಿಗೆ 9300 ಕೋಟಿ ರೂ.ಗಳ ಗಾತ್ರದ ಬಜೆಟ್‌ ಮಂಡಿಸಲು ಸಜ್ಜಾಗಿದ್ದು, ಹಲವು ಪ್ರಮುಖ ಯೋಜನೆಗಳು ಘೋಷಣೆಯಾಗುವ ನಿರೀಕ್ಷೆಯಿದೆ.

ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಸಿದ್ಧಗೊಂಡಿರುವ ಬಜೆಟ್‌ನಲ್ಲಿ ಪ್ರಮುಖವಾಗಿ ಹಿರಿಯ ನಾಗರಿಕರಿಗೆ ಮಧ್ಯಾಹ್ನದ ಉಚಿತ ಬಿಸಿಯೂಟ, ನಗರದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬಡವರಿಗೆ ಉಚಿತ ಡಯಾಲಿಸಿಸ್‌ ಸೇವೆ ಯೋಜನೆ ಘೋಷಣೆಯಾಗುವ ಸಾಧ್ಯತೆಯಿದೆ. ಜೊತೆಗೆ ಪರಿಸರ, ಕೆರೆ, ಉದ್ಯಾನಗಳ ಸಂರಕ್ಷಣೆಗೆ ಹೆಚ್ಚು ಆದ್ಯತೆ, ನೀಡಲಾಗಿದ್ದು ಈ ಮೂರು ಕ್ಷೇತ್ರಗಳಿಗೆ ಬಹುಪಾಲು ಅನುದಾನ ಮೀಸಲಿಡಲು ಚಿಂತನೆ ನಡೆಸಲಾಗಿದೆ ಎಂದು ನಿರೀಕ್ಷಿಸಲಾಗಿದೆ.

ಅಲ್ಲದೆ ನಗರದಲ್ಲಿ ಮಾಲಿನ್ಯ ಪ್ರಮಾಣ ಕಡಿಮೆ ಮಾಡಲು ಹೆಚ್ಚು ಆದ್ಯತೆ ನೀಡುವ ಸಲುವಾಗಿ ಎಲೆಕ್ಟ್ರಿಕ್‌ ಬೈಕ್‌ ಹಾಗೂ ಕಾರುಗಳ ಪರಿಚಯ. ಮಾಲಿನ್ಯ ತಪಾಸಣಾ ಮಾಪಕ ಕೇಂದ್ರಗಳ ಸ್ಥಾಪನೆ, ಎರಡು ವಾರಗಳಿಗೊಮ್ಮೆ ಬೈಕ್‌ ಆ್ಯಂಬುಲೆನ್ಸ್‌ ಸೇವೆ, ತುರ್ತು ಸಂದರ್ಭಗಳಲ್ಲಿ ಏರ್‌ ಆ್ಯಂಬುಲೆನ್ಸ್‌ಗಳಿಗೆ 8 ವಲಯಗಳಲ್ಲಿ ಹೆಲಿಪ್ಯಾಡ್‌ಗಳ ನಿರ್ಮಾಣ, ಉಚಿತ ಬೈಸಿಕಲ್‌ ಸೇವೆ, ಮಳೆ ನೀರು ಕೊಯ್ಲು ಯೋಜನೆಗೆ 100 ಕೋಟಿ ರೂ. ಮೀಸಲು. ಒಂಟಿ ಮನೆಗಳ ನಿರ್ಮಾಣಕ್ಕಿದ್ದ ಅನುದಾನದ ಮೊತ್ತವನ್ನು 4ರಿಂದ 5 ಲಕ್ಷಕ್ಕೆ ಏರಿಕೆಸುವ ಕುರಿತು ಆಯವ್ಯಯದಲ್ಲಿ ಸೂಚಿಸುವ ಸಂಭವವಿದೆ.

ಪಾಲಿಕೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸಿದ್ದಯ್ಯ ಮತ್ತು ದಾಸಪ್ಪ ಆಸ್ಪತ್ರೆಗಳಲ್ಲಿ ಉಚಿತ ಐಸಿಯು ಸೇವೆ ಆರಂಭ. ತುರ್ತು ವಾಹನಗಳ ಖರೀದಿ, ಬೈಕ್‌ ರೇಸ್‌ ಪ್ರಿಯರಿಗೆ ಅನುಕೂಲ ವಾಗುವಂತೆ ಬೈಕ್‌ ಟ್ರ್ಯಾಕ್‌ಗಳ ನಿರ್ಮಾಣ ಘೋಷಣೆಯಾಗಲಿದೆ. ಅಷ್ಟೇ ಅಲ್ಲ ಪಾಲಿಕೆ ನೌಕರರ ವೈದ್ಯಕೀಯ ಭತ್ಯೆ ಹೆಚ್ಚಳ, ಪತ್ರಕರ್ತರಿಗೆ ವೈದ್ಯಕೀಯ ವಿಮೆ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣು ಮಕ್ಕಳಿಗೆ 25 ಸಾವಿರ ರೂ. ಮೊತ್ತದ ಭಾಗ್ಯಲಕ್ಷ್ಮೀ ಬಾಂಡ್‌ ನೀಡುವುದು.

ಬಿಬಿಎಂಪಿ ಶಾಲೆಗಳಲ್ಲಿ ಟೆಲಿ ಎಜುಕೇಶನ್‌ ಇಂಗ್ಲಿಷ್‌ ಕಲಿಕಾ ತರಗತಿಗಳನ್ನು ಆರಂಭಿಸುವ ಯೋಜನೆಗಳು ಘೋಷಿಸುವ ಸಾಧ್ಯತೆಯಿದೆ. ಇದಲ್ಲದೆ ಮಹಿಳಾ ಕಾರ್ಪೋರೇಟರ್‌ಗಳ ವಾರ್ಡ್‌ಗಳಿಗೆ ವಿಶೇಷ ಅನುದಾನ, ಮತ್ತಷ್ಟು ರಸ್ತೆಗಳಿಗೆ ವೈಟ್‌ ಟಾಪಿಂಗ್‌ ಭಾಗ್ಯ, ಟೋಟಲ್‌ ಸ್ಟೇಷನ್‌ಗಳ ಅಭಿವೃದ್ಧಿಗೆ ಒತ್ತು, ಹೊಸ ಜಾಹೀರಾತು ಹಾಗೂ ಮಾರುಕಟ್ಟೆ ನೀತಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸರ್ಕಾರ ನೀಡಿರುವ ಅನುದಾನ ಹಾಗೂ ಪಾಲಿಕೆ ಆರ್ಥಿಕ ಸಂಪನ್ಮೂಲಗಳಿಗೆ ಅನುಗುಣವಾಗಿ ಜನಪರ ವಾಸ್ತವಿಕ ಬಜೆಟ್‌ ಮಂಡನೆಯಾಗಲಿದೆ.
-ಶಿವರಾಜು, ಆಡಳಿತ ಪಕ್ಷದ ನಾಯಕ 

ಪರಿಸರ ಸಂರಕ್ಷಣೆ, ಬಡ ಮಧ್ಯಮ ವರ್ಗದ ಜನರ ಅಭಿವೃದ್ಧಿಗಳಿಗೆ ಜನಪ್ರಿಯ ಕಾರ್ಯಕ್ರಮಗಳನ್ನು ಒಳಗೊಂಡ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ
-ಸಂಪತ್‌ ರಾಜ್‌, ಮೇಯರ್‌ 

ನಗರದ ಸಮಗ್ರ ಅಭಿವೃದ್ಧಿ, ಪರಿಸರ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಲಾಗಿದ್ದು, ಇದೊಂದು ಜನಪರ ವಾಸ್ತವಿಕ ಬಜೆಟ್‌ ಆಗಲಿದೆ’
-ಮಹದೇವ್‌, ಅಧ್ಯಕ್ಷ, ತೆರಿಗೆ ಹಾಗೂ ಆರ್ಥಿಕ ಸ್ಥಾಯಿ ಸಮಿತಿ

* ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.