ಕಾಫಿ ನಾಡಲ್ಲಿ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ
Team Udayavani, Mar 3, 2019, 12:30 AM IST
ಚಿಕ್ಕಮಗಳೂರು: ರಾಜ್ಯದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನಕ್ಕೆ ಶನಿವಾರ ಕಾಫಿನಾಡು ಚಿಕ್ಕಮಗಳೂರಲ್ಲಿ ಚಾಲನೆ ದೊರೆಯಿತು. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿರುವ ಸಮ್ಮೇಳನ ಎರಡು ದಿನ ನಡೆಯಲಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆ ಬೆಳಗ್ಗೆ 9.00 ಗಂಟೆಗೆ ಆರಂಭವಾಗಬೇಕಿತ್ತಾದರೂ ಕಲಾ ತಂಡಗಳು ಬರುವುದು ವಿಳಂಬವಾಗಿದ್ದು ಹಾಗೂ ಸಾಹಿತ್ಯಾಭಿಮಾನಿಗಳ ಕೊರತೆ ಯಿಂದಾಗಿ ತಡವಾಗಿ 10.15ಕ್ಕೆ ಆರಂಭ ವಾಯಿತು. ನಗರದ ಎಂ.ಜಿ. ರಸ್ತೆಯ ಗಣಪತಿ ದೇವಾಲಯದಿಂದ ಬೆಳಗ್ಗೆ 10-15ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭ ವಾಯಿತು. ಸಮ್ಮೇಳನದ ಸರ್ವಾಧ್ಯಕ್ಷೆ ಡಾ| ಸುಧಾಮೂರ್ತಿ ಅವರನ್ನು ಸಾರೋಟಿನಲ್ಲಿ ಕೂರಿಸಿ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು.
ಮಹಿಳಾ ಸಮ್ಮೇಳನ ಅಗತ್ಯ: ಸಮ್ಮೇಳನಾಧ್ಯಕ್ಷೆ ಡಾ| ಸುಧಾಮೂರ್ತಿ ಮಾತನಾಡಿ, ಮಹಿಳೆಯರು ಮನಸ್ಸಿನಲ್ಲಿ ತಮ್ಮನ್ನು ತಾವು ಬಂಧಿಸಿಕೊಂಡಿರುವುದ ರಿಂದ ಹೆಚ್ಚು ಸಾಧನೆ ಮಾಡಲು ಸಾಧ್ಯವಾಗುತ್ತಿಲ್ಲ. ತಮ್ಮನ್ನು ತಾವು ಬಂಧನದಿಂದ ಬಿಡಿಸಿಕೊಂಡು ತಮ್ಮ ಶಕ್ತಿ ಬಳಸಿಕೊಳ್ಳಲು ಮುಂದಾಗಬೇಕೆಂದು ಹೇಳಿದರು.
ಸಾಹಿತ್ಯ ಪರಿಷತ್ ವತಿಯಿಂದ ಮಹಿಳಾ ಸಮ್ಮೇಳನಗಳನ್ನು ನಡೆಸುವುದು ಅವಶ್ಯಕ. ಮಹಿಳೆಯರೂ ಹಲವು ಸಮಸ್ಯೆಗಳನ್ನು ಎದುರಿಸುತ್ತಾರೆ. ಅದು ರಾಜಕೀಯ ಸಮಸ್ಯೆ ಇರಬಹುದು, ಐಟಿ, ಬಿಟಿ ಸಮಸ್ಯೆ ಇರಬಹುದು, ಉದ್ಯೋಗದ ಸಮಸ್ಯೆ ಇರಬಹುದು. ಕೆಲವೊಂದು ಸಮಸ್ಯೆ ಗಳನ್ನು ಪ್ರತಿವರ್ಷ ನಡೆಯುವ ಸಾಹಿತ್ಯ ಸಮ್ಮೇಳನಗಳಲ್ಲಿ ಹೇಳಿಕೊಳ್ಳಲು ಸಾಧ್ಯವಾಗುವು ದಿಲ್ಲ. ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಸುಲಭವಾಗಿ ಚರ್ಚಿಸಲು ಸಾಧ್ಯವಾಗುತ್ತದೆ. ವರ್ಷಕ್ಕೊಮ್ಮೆ ಅಥವಾ ಎರಡು ವರ್ಷಕ್ಕೊಮ್ಮೆ ಯಾದರೂ ಮಹಿಳಾ ಸಾಹಿತ್ಯ ಸಮ್ಮೇಳನಗಳು ನಡೆಯಬೇಕು ಎಂದರು. ನಾನು ಮೊದಲು ಪುಸ್ತಕವನ್ನು ಬರೆದಿದ್ದು ಕನ್ನಡದಲ್ಲಿಯೇ.
ಅದು ನನ್ನ 29ನೇ ವಯಸ್ಸಿನಲ್ಲಿ. ನನ್ನ 52ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಇಂಗ್ಲಿಷ್‌ನಲ್ಲಿ ಪುಸ್ತಕವನ್ನು ಬರೆದೆ. ಅದು ಇಂಗ್ಲಿಷ್ ಮೇಲಿನ ವ್ಯಾಮೋಹದಿಂದಲ್ಲ. ಆದರೆ, ಇಂಗ್ಲಿಷ್ ಸಾಹಿತ್ಯ ವನ್ನು ಬರೆಯಲಾರಂಭಿಸಿದ ನಂತರ ನನ್ನ ಪುಸ್ತಕವು 22 ವಿವಿಧ ಭಾಷೆಗಳಲ್ಲಿ ಮುದ್ರಣವಾಯಿತು. ಕನ್ನಡದಲ್ಲಿ ಬರೆದಾಗ ಅದು ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿತ್ತು. ಅಷ್ಟು ಮಾತ್ರವಲ್ಲದೆ ನಮ್ಮ ರಾಜ್ಯದಲ್ಲಿ ನನ್ನನ್ನು ಎಂದಿಗೂ ಸಾಹಿತಿ ಎಂದು ಪರಿಗಣಿಸಿಲ್ಲ. ಕೇವಲ ಇನ್ಫೋಸಿಸ್ ಹಾಗೂ ಸಮಾಜ ಸೇವಕಿ ಎಂಬ ಹೆಸರಿನಿಂದ ಗುರುತಿಸಲಾಗುತ್ತದೆ.
ಆದರೆ ಇಂಗ್ಲಿಷ್‌ನಲ್ಲಿ ನನ್ನನ್ನು ಲೇಖಕಿ ಎಂದು ಗುರುತಿಸಲಾಗುತ್ತದೆ. ಇಂಗ್ಲಿಷ್‌ನಲ್ಲಿ ಕಾದಂಬರಿಯನ್ನು ಬರೆಯುವುದು ಸುಲಭದ ಕೆಲಸವಲ್ಲ ಎಂದರು. ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಹಲವರು ಸಾಹಿತ್ಯ ಪರಿಷತ್‌ನಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ದೊರೆಯುತ್ತಿಲ್ಲ ಎಂದು ಹೇಳಿದ ಹಿನ್ನೆಲೆಯಲ್ಲಿ ಮಾತನಾಡಿದ ಕಸಾಪ ರಾಜ್ಯಾಧ್ಯಕ್ಷ ಡಾ|ಮನು ಬಳಿಗಾರ್, ಮಹಿಳಾ ಅಧ್ಯಕ್ಷರ ನೇಮಕಕ್ಕೆ ನಮ್ಮ ವಿರೋಧವಿಲ್ಲ. ಅಧ್ಯಕ್ಷರ ನೇಮಕವಾಗುವುದು ಚುನಾವಣೆ ಮೂಲಕ. ಚುನಾವಣೆಗೆ ಸ್ಪರ್ಧಿಸಿ ಅಧ್ಯಕ್ಷರಾಗ ಬಹುದು ಎಂದರು. ಮಹಿಳಾ ಸಮ್ಮೇಳನಗಳನ್ನು ಹೆಚ್ಚಾಗಿ ನಡೆಸಬೇಕೆಂಬ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಭಾನುವಾರ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ತಾವೇ ವಿಷಯವನ್ನು ಮಂಡಿಸಿ ಎರಡು ವರ್ಷಕ್ಕೊಮ್ಮೆ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಸಲು ಪ್ರಸ್ತಾಪಿಸುತ್ತೇನೆಂದು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಜಾನಕಿ ಸಮ್ಮೇಳನ ಉದ್ಘಾಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.