ವಿಧಾನಸಭೆ ವಿಸರ್ಜಿಸಿ!
ಮೈತ್ರಿಗೆ ದಿನಕ್ಕೊಂದು ಸಂಕಟ
Team Udayavani, May 19, 2019, 8:05 AM IST
ಹುಬ್ಬಳ್ಳಿ/ಬಾಗಲಕೋಟೆ: ಗೊಂದಲದಲ್ಲಿ ಮುಂದುವರಿಯುವ ಬದಲು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗುವುದು ಉತ್ತಮ ಎಂಬ ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಹೇಳಿಕೆ ಸಂಚಲನ ಸೃಷ್ಟಿಸಿದೆ. ಸಮ್ಮಿಶ್ರ ಸರಕಾರದ ಪಾಲುದಾರ ಕಾಂಗ್ರೆಸ್-ಜೆಡಿಎಸ್ ಮುಖಂಡರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿರುವ ಸಂದರ್ಭ ಈ ಹೇಳಿಕೆ ಬೆಂಕಿಗೆ ತುಪ್ಪ ಸುರಿದಿದೆ. ಇದನ್ನೇ ಅಸ್ತ್ರವಾಗಿಸಿ ಬಿಜೆಪಿ ಕೂಡ ಮೈತ್ರಿಕೂಟದ ವಿರುದ್ಧ ಮುಗಿಬಿದ್ದಿದೆ.
ಕುಮಾರಸ್ವಾಮಿಯವರಿಗೆ ಮುಕ್ತ ಆಡಳಿತಕ್ಕೆ ಅವಕಾಶ ನೀಡಬೇಕಿದೆ. ಸಮ್ಮಿಶ್ರ ಸರಕಾರ ಸಮರ್ಪಕವಾಗಿ ನಡೆಯಬೇಕು. ನಿತ್ಯವೂ ಗೊಂದಲಮಯ ವಾತಾವರಣ ಸೃಷ್ಟಿ ಮಾಡಿದರೆ ಆಡಳಿತ ಕಷ್ಟಕರ. ಅನಗತ್ಯ ಗೊಂದಲ ಸೃಷ್ಟಿಯ ಬದಲು ಹೊಸ ಜನಾದೇಶಕ್ಕೆ ಹೋಗುವುದು ಉತ್ತಮ ಎಂದು ಸುದ್ದಿ ಸಂಸ್ಥೆಯೊಂದಕ್ಕೆ ಹೊರಟ್ಟಿ ಹೇಳಿಕೆ ನೀಡಿದ್ದರು. ಇದು ವಿವಾದದ ರೂಪ ಪಡೆಯುತ್ತಿದ್ದಂತೆ ‘ಸಿದ್ದು ಸಿಎಂ’ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಮೆತ್ತಗಾಗಿಸಲು ಈ ಹೇಳಿಕೆ ನೀಡಿದ್ದೇನೆ ಎಂದು ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದ್ದಾರೆ.
ವಿಸರ್ಜನೆ ಸ್ಥಿತಿ ನಿರ್ಮಾಣವಾಗಿಲ್ಲ
ಬಸವರಾಜ ಹೊರಟ್ಟಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಎಚ್.ಡಿ. ದೇವೇಗೌಡ, ಗೊಂದಲ ಸರಿಹೋಗಲಿದ್ದು, ವಿಧಾನಸಭೆ ವಿಸರ್ಜನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದಿದ್ದಾರೆ. ಹೊರಟ್ಟಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ವಿಧಾನಸಭೆ ವಿಸರ್ಜನೆ ಬಗ್ಗೆ ದೊಡ್ಡವರು ತೀರ್ಮಾನ ಕೈಗೊಳ್ಳಬೇಕು. ಚುನಾವಣೆಗೆ ಹೋಗುವುದು ಸುಲಭದ ಮಾತಲ್ಲ. ಹೊರಟ್ಟಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.
ಬಿಜೆಪಿಗೆ ಲಾಭ ಇಲ್ಲ
ಬಾಗಲಕೋಟೆ: ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಮುಧೋಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹೊರಟ್ಟಿ, ಸರಕಾರ ವಿಸರ್ಜನೆಯಾಗಬೇಕು ಎಂಬ ನನ್ನ ಹೇಳಿಕೆ ಯಿಂದ ಬಿಜೆಪಿಗೆ ಲಾಭವಾಗುವ ಪ್ರಶ್ನೆಯೇ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬರಲು 8ರಿಂದ 10 ಜನ ಶಾಸಕರು ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಟ್ಟು ಚುನಾವಣೆಗೆ ಹೋಗಲು ಯಾರೂ ತಯಾರಿಲ್ಲ, ಧೈರ್ಯವೂ ಇಲ್ಲ. ಮಧ್ಯಂತರ ಚುನಾವಣೆಗೂ ನನ್ನ ಹೇಳಿಕೆಗೂ ಸಂಬಂಧವಿಲ್ಲ ಎಂದಿದ್ದಾರೆ.
ಬೆಂಗಳೂರು: ಇತ್ತೀಚೆಗಿನ ಬೆಳವಣಿಗೆ ಗಳ ಕುರಿತು ಚರ್ಚಿಸಲು ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಬುಲಾವ್ ನೀಡಿದ್ದಾರೆ. ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಶನಿವಾರ ದಿಲ್ಲಿಗೆ ತೆರಳಿದರು. ಮಲ್ಲಿಕಾರ್ಜುನ ಖರ್ಗೆ, ಡಾ| ಜಿ. ಪರಮೇಶ್ವರ್, ಡಿಕೆಶಿ ರವಿವಾರ ಬೆಳಗ್ಗೆ ದಿಲ್ಲಿ ತಲುಪಲಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಚುನಾವಣೆ ಫಲಿತಾಂಶ, ಆಪರೇಷನ್ ಕಮಲ ಪ್ರಯತ್ನ, ಸಿಎಂ ಬದಲಾವಣೆ ವಿಚಾರ, ಮೈತ್ರಿಯ ಅನುಕೂಲ, ಅನಾನುಕೂಲಗಳ ಜತೆಗೆ ಫಲಿತಾಂಶದ ಬಳಿಕ ಜೆಡಿಎಸ್ ನಡೆ ಮತ್ತಿತರ ವಿಚಾರಗಳು ಚರ್ಚೆಯಾಗಬಹುದು ಎನ್ನಲಾಗಿದೆ.
ಕೇಂದ್ರದಲ್ಲಿ ಬಿಜೆಪಿಯೇತರ ಸರಕಾರ ರಚನೆಯ ಆಶಯ ಸಾಕಾರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್-ಜೆಡಿಎಸ್ ಮುಖಂಡರು ವ್ಯತಿರಿಕ್ತ ಹೇಳಿಕೆ ನೀಡುವುದರಿಂದ ಈ ಪ್ರಯತ್ನಗಳಿಗೆ ಹಿನ್ನಡೆಯಾಗಬಹುದು. ಆದ್ದರಿಂದ ಉಭಯ ಪಕ್ಷಗಳ ಮುಖಂಡರು ಇಂಥ ಆಶಯಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ವಿವಾದಾತ್ಮಕ ಹೇಳಿಕೆ ನೀಡಬಾರದು ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.