ಸ್ಮಾರ್ಟ್‌ ಸಿಟಿಗೆ ಬೇಕಿದೆ ಸ್ಮಾರ್ಟ್‌ ಪಾರ್ಕಿಂಗ್‌ ವ್ಯವಸ್ಥೆ


Team Udayavani, Mar 31, 2019, 12:59 PM IST

1-April-10

ಮಂಗಳೂರು ನಗರದಲ್ಲಿ ಪಾರ್ಕಿಂಗ್‌ ಸಮಸ್ಯೆ ಮತ್ತೆ ಸುದ್ದಿಯಲ್ಲಿದೆ. ರಸ್ತೆ ಬದಿಗಳಲ್ಲಿ ಅನಧಿಕೃತ ಸ್ಥಳಗಳಲ್ಲಿ ನಿಲ್ಲಿಸುವ ವಾಹನಗಳ ವಿರುದ್ಧ ಪೊಲೀಸ್‌ ಇಲಾಖೆಯ ಟೋಯಿಂಗ್‌ ಕಾರ್ಯಾಚರಣೆ ಆರಂಭಗೊಂಡಿದೆ. ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಮಂಗಳೂರಿನಲ್ಲೂ ಈ ಕಾರ್ಯಾಚರಣೆ ಆರಂಭಿಸಿದೆ. ಆದರೆ ಇದರ ಜತೆಗೆ ಇನ್ನೊಂದು ಚರ್ಚೆ ಆರಂಭಗೊಂಡಿದೆ. ಮಂಗಳೂರು ನಗರದಲ್ಲಿ ಸೂಕ್ತ ಪಾರ್ಕಿಂಗ್‌ ತಾಣಗಳಿಲ್ಲ. ಪ್ರಸ್ತಾವನೆಯಲ್ಲಿರುವ ಪಾರ್ಕಿಂಗ್‌ ಯೋಜನೆಗಳು ಅನುಷ್ಠಾನಕ್ಕೆ ಬಂದಿಲ್ಲ. ಪಾರ್ಕಿಂಗ್‌ ಜಾಗಕ್ಕೆ ಮೀಸಲಿಟ್ಟಿರುವ ಜಾಗಗಳ ಅತಿಕ್ರಮಣ ತೆರವುಗೊಳಿಸಿಲ್ಲ. ಟೋಯಿಂಗ್‌ ಕಾರ್ಯಾಚರಣೆಯ ಜತೆಗೆ ಈ ಕಾರ್ಯಗಳನ್ನು ಮಾಡಿದ್ದರೆ ಇದು ಹೆಚ್ಚು ಸೂಕ್ತವಾಗುತ್ತಿತ್ತು ಎಂಬ ಅಭಿಪ್ರಾಯಗಳು, ಆಕ್ಷೇಪಗಳು ವ್ಯಕ್ತವಾಗಿವೆ.

ಮಂಗಳೂರು ಸ್ಮಾರ್ಟ್‌ ನಗರವಾಗುತ್ತಿದೆ. ನಗರದಲ್ಲಿ ವಾಣಿಜ್ಯ ವ್ಯವಹಾರ ಚಟುವಟಿಕೆಗಳು ವಿಸ್ತಾರಗೊಂಡಿವೆ. ವಾಹನ ದಟ್ಟಣೆ ಹೆಚ್ಚುತ್ತಿದೆ.ಅದಕ್ಕೆ ಪೂರಕವಾಗಿ ಪಾರ್ಕಿಂಗ್‌ ಸೌಕರ್ಯ ಬೆಳೆದಿಲ್ಲ . ನಗರದ ಕೆಲವು ಕಡೆಯಾದರೂ ಮಹಾನಗರ ಪಾಲಿಕೆಯಿಂದ ವ್ಯವಸ್ಥಿತ ಪಾರ್ಕಿಂಗ್‌ ವ್ಯವಸ್ಥೆಗಳು ಆಗಬೇಕು ಎಂಬ ಹಲವು ವರ್ಷಗಳ ಬೇಡಿಕೆ ಇನ್ನೂ ಈಡೇರಿಲ್ಲ. ಮಂಗಳೂರು ನಗರದಲ್ಲಿ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆಗಳಿಲ್ಲದೆ ರಸ್ತೆಗಳ ಬದಿಗಳೇ ಪಾರ್ಕಿಂಗ್‌ ತಾಣಗಳಾಗಿ ಪರಿವರ್ತಿತವಾಗಿವೆ. ವಾಹನಗಳನ್ನು ರಸ್ತೆಯ ಬದಿಯಲ್ಲೇ ಪಾರ್ಕಿಂಗ್‌ ಮಾಡುವ ಅನಿವಾರ್ಯತೆ ಎದುರಾಗುತ್ತದೆ. ಮೊದಲೇ ಸಂಚಾರ ದಟ್ಟಣೆ ಹೆಚ್ಚುತ್ತಿರುವ ರಸ್ತೆಗಳಲ್ಲಿ ವಾಹನಗಳ ಅಡ್ಡಾದಿಡ್ಡಿ ನಿಲುಗಡೆ ಸಂಚಾರ ಸಮಸ್ಯೆಯನ್ನು ಇನ್ನಷ್ಟು ಬಿಗಡಾಯಿಸಿದೆ. ಸೂಕ್ತ ಪಾರ್ಕಿಂಗ್‌ ವ್ಯವಸ್ಥೆಗಳಿಲ್ಲದೆ ವಾಹನಗಳನ್ನು ಎಲ್ಲಿ ನಿಲ್ಲಿಸುವುದು ಎಂಬ ಪ್ರಶ್ನೆ ಸಾರ್ವಜನಿಕ ವಲಯದಿಂದ ಎದ್ದಿದೆ.

ಮಂಗಳೂರು ಕೇಂದ್ರ ಪ್ರದೇಶದ ಹಂಪನಕಟ್ಟೆಯ ಹಳೆ ಬಸ್‌ ನಿಲ್ದಾಣದಲ್ಲಿ ಬಹುಅಂತಸ್ತು ವಾಹನ ಪಾರ್ಕಿಂಗ್‌ ಸಂಕೀರ್ಣ ನಿರ್ಮಾಣ ಯೋಜನೆಯನ್ನು ಸ್ಮಾರ್ಟ್‌ ನಗರ ಯೋಜನೆಯಲ್ಲಿ ಸೇರಿಸಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಇದು ಕಾರ್ಯಗತಗೊಂಡರೆ ಹಂಪನಕಟ್ಟೆ ಪ್ರದೇಶದಲ್ಲಿ ಪಾರ್ಕಿಂಗ್‌ ಸಮಸ್ಯೆ ಒಂದಷ್ಟು ಪರಿಹಾರ ಕಾಣಬಹುದು.

ರಸ್ತೆಯ ಬದಿಗಳೇ ಪಾರ್ಕಿಂಗ್‌
ಮಂಗಳೂರು ನಗರದಲ್ಲಿ ಪ್ರಸ್ತುತ ಕೆಲವು ಕಡೆ ಪಾರ್ಕಿಂಗ್‌ ತಾಣಗಳನ್ನು ಗುರುತಿಸಿ ಪಾವತಿ ಪಾರ್ಕಿಂಗ್‌ ತಾಣಗಳಾಗಿ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಹೆಚ್ಚಿನವುಗಳು ಆನ್‌ಸ್ಟ್ರೀಟ್‌ (ರಸ್ತೆ ಬದಿ) ಪಾರ್ಕಿಂಗ್‌ ತಾಣಗಳಾಗಿವೆ. ಈ ಪಾರ್ಕಿಂಗ್‌ ವ್ಯವಸ್ಥೆಗಳು ಸರಿಯಾಗಿ ನಿರ್ವಹಣೆ ಆಗುತ್ತಿಲ್ಲ. ಪ್ರಮುಖವಾಗಿ ಹಳೆ ಬಸ್‌ನಿಲ್ದಾಣ, ಕ್ಲಾಕ್‌ಟವರ್‌ ನಿಂದ ಎ.ಬಿ. ಶೆಟ್ಟಿ ರಸ್ತೆಯಲ್ಲಿ ನೆಹರೂ ಮೈದಾನ್‌ ಬದಿಯ ರಸ್ತೆ, ವಿವಿ ಕಾಲೇಜು ಮುಂಭಾಗ, ಲಾಲ್‌ಬಾಗ್‌ನಿಂದ ಲೇಡಿಹಿಲ್‌ ವೃತ್ತದವರೆಗಿನ ರಸ್ತೆಯಲ್ಲಿ ಮಂಗಳಾ ಸ್ಡೇಡಿಯಂ ಬದಿಯ ರಸ್ತೆ, ಸ್ಟೇಟ್‌ಬ್ಯಾಂಕ್‌ನ ಅಕ್ಕಪಕ್ಕದ ರಸ್ತೆಗಳು ಹೀಗೆ ಹಲವಾರು ಜಾಗಗಳಲ್ಲಿ ಪಾರ್ಕಿಂಗ್‌ ಜಾಗಗಳನ್ನು ಗುರುತಿಸಿ ಬೋರ್ಡ್‌ ಹಾಕಲಾಗಿದೆ.

ಸ್ಮಾರ್ಟ್‌ ಪಾರ್ಕಿಂಗ್‌ ವ್ಯವಸ್ಥೆ
ಪಾರ್ಕಿಂಗ್‌ ವ್ಯವಸ್ಥೆಯ ಸುಗಮ ನಿರ್ವಹಣೆಯ ನಿಟ್ಟಿನಲ್ಲಿ ಕೆಲವು ನಗರಗಳಲ್ಲಿ ಸ್ಮಾರ್ಟ್‌ ಪಾರ್ಕಿಂಗ್‌ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಈಗಾಗಲೇ ನಗರ ವ್ಯಾಪ್ತಿಯಲ್ಲಿ 85 ರಸ್ತೆಗಳಲ್ಲಿರುವ ಸಾರ್ವಜನಿಕ ಪಾರ್ಕಿಂಗ್‌ ಗಳಲ್ಲಿ ಸ್ಮಾರ್ಟ್‌ ಪಾರ್ಕಿಂಗ್‌ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತಿದೆ. ಮಂಗಳೂರು ಮಹಾನಗರ ಪಾಲಿಕೆಯೂ ಸ್ಮಾರ್ಟ್‌ ನಗರ ಯೋಜನೆಯಲ್ಲಿ ಸ್ಮಾರ್ಟ್‌ ಪಾರ್ಕಿಂಗ್‌ ವ್ಯವಸ್ಥೆಯನ್ನು ಕೂಡ ವಿಶೇಷ ಆದ್ಯತೆಯ ನೆಲೆಯಲ್ಲಿ ಕೈಗೊಳ್ಳಬೇಕಾಗಿದೆ.

ಸ್ಮಾರ್ಟ್‌ ಪಾರ್ಕಿಂಗ್‌ ಮಾದರಿಯಲ್ಲಿ ಗುರುತಿಸಲಾಗಿರುವ ರಸ್ತೆ ಬದಿಯ ವಾಹನ ನಿಲುಗಡೆ ಸ್ಥಳದಲ್ಲಿ ಪಾರ್ಕಿಂಗ್‌ ಮೀಟರ್‌ ಎಂಬ ಅತ್ಯಾಧುನಿಕ ಯಂತ್ರ ಅಳವಡಿಸಲಾಗುತ್ತಿದೆ. ಪಾರ್ಕಿಂಗ್‌ ಪ್ರದೇಶದಲ್ಲಿ ಖಾಲಿಯಿರುವ ಜಾಗಕ್ಕೆ ವಾಹನ ಬಂದ ಕೂಡಲೇ ಸ್ವಯಂ ಚಾಲಿತವಾಗಿ ವಾಹನ ಬಂದಿದೆ ಎಂಬ ಮಾಹಿತಿ ನಿರ್ವಹಣಾ ಕೊಠಡಿಗೆ ಹೋಗುತ್ತದೆ. ಪಾರ್ಕಿಂಗ್‌ ವ್ಯವಸ್ಥೆಯ ಹತ್ತಿರವಿರುವ ಪಾರ್ಕಿಂಗ್‌ ಮೀಟರ್‌ ಒಳಗೆ ಹೋಗಿ ವಾಹನ ಮಾಲಕ ವಾಹನ ನಿಲುಗಡೆ ಮಾಡುವ ಅವಧಿಗೆ ತಕ್ಕಂತೆ ಹಣ ಪಾವತಿಸಬೇಕಾಗುತ್ತದೆ. ಸ್ಮಾರ್ಟ್‌ ಪಾರ್ಕಿಂಗ್‌ ವ್ಯವಸ್ಥೆಯನ್ನು ಖಾಸಗಿ ಎಜೆನ್ಸಿಗಳಿಗೆ ಟೆಂಡರ್‌ ಮೂಲಕ ವಹಿಸಿ ಕೊಡಲಾಗುತ್ತದೆ. ಟೆಂಡರ್‌ ವಹಿಸಿಕೊಳ್ಳುವ ಎಜೆನ್ಸಿಗಳು ಅಗತ್ಯ ಉಪಕರಣಗಳು ವಾಹನ , ಸಿಸಿಟವಿ ಕೆಮರಾ, ಮ್ಯಾಗ್ನೆಟಿಕ್‌ ಐಆರ್‌ ಸೆನ್ಸಾರ್‌, ಸಹಾಯವಾಣಿಗಳನ್ನು ಸ್ಥಾಪಿಸಿ ಶುಲ್ಕ ಸಂಗ್ರಹ ಕಾರ್ಯ ಮಾಡುತ್ತದೆ. ಸ್ಮಾರ್ಟ್‌ ಪಾರ್ಕಿಂಗ್‌ಗೆ ಪೂರಕವಾಗಿ ವಾಹನ ಸವಾರರಿಗೆ ನಿಲುಗಡೆ ಬಗ್ಗೆ ಮಾಹಿತಿ ಪಡೆಯಲು ಮೊಬೈಲ್‌ ಆ್ಯಪ್‌ ಸಹಾಯ ಮಾಡುತ್ತದೆ.

ನಗರದ ಪ್ರಮುಖ ರಸ್ತೆಗಳ ಬದಿಗಳಲ್ಲಿ ಸ್ಮಾರ್ಟ್‌ಸ್ಕ್ರೀನ್‌ ಪೋಲ್‌ ಅಳವಡಿಸಲಾಗುತ್ತದೆ. ಈ ಪೋಲ್‌ಗ‌ಳಲ್ಲಿ ಮುಂದಿನ ಪಾರ್ಕಿಂಗ್‌ ಸ್ಥಳದ ವಿವರ, ಅಲ್ಲಿ ಎಷ್ಟು ವಾಹನಗಳಿಗೆ ನಿಲುಗಡೆಗೆ ಅವಕಾಶವಿದೆ ಎಂಬ ಮಾಹಿತಿ ಕ್ಷಣಕ್ಷಣಕ್ಕೆ ಲಭ್ಯವಾಗುತ್ತಲಿರುತ್ತವೆ. ಸ್ಮಾರ್ಟ್‌ಪಾರ್ಕಿಂಗ್‌ ವ್ಯವಸ್ಥೆಯಲ್ಲಿ ವಾಹನ ಸವಾರರು ವಾಹನ ನಿಲುಗಡೆ ಶುಲ್ಕವನ್ನು ಪಾರ್ಕಿಂಗ್‌ ಅವಧಿಗೆ ಅನುಗುಣವಾಗಿ ಪಾವತಿಸಬೇಕಾಗುತ್ತದೆ. ಮೊದಲೇ ನಿಗದಿಪಡಿಸಿದ ಅವಧಿಯೊಳಗೆ ವಾಹನ ತೆಗೆಯದಿದ್ದರೆ ವಾಹನ ತೆಗೆಯುವಂತೆ  ಹಾಗೂ ಮುಂದಿನ ಅವಧಿಯ ಮೊತ್ತವನ್ನು ರಿಚಾರ್ಚ್‌ ಮಾಡುವಂತೆ ಮೊಬೈಲ್‌ಗೆ‌ ಸಂದೇಶ ಬರುತ್ತದೆ. ನಿಗದಿತ ಅವಧಿಯ ಅನಂತರ ಶುಲ್ಕ ಪಾವತಿಸಿ ವಿಸ್ತರಣೆ ಮಾಡದಿದ್ದರೆ ಪೊಲೀಸರು ವಾಹನಗಳನ್ನು ಟೋಯಿಂಗ್‌ ಮಾಡುತ್ತಾರೆ. ಸ್ಮಾರ್ಟ್‌ ಪಾರ್ಕಿಂಗ್‌ ಅನ್ನು ಪ್ರೀಮಿಯಂ, ವಾಣಿಜ್ಯ ಹಾಗೂ ಸಾಮಾನ್ಯ ಎಂದು ವರ್ಗೀಕರಿಸಲಾಗುತ್ತಿದೆ.

ಪಾರ್ಕಿಂಗ್‌ ತಾಣಗಳು ರೂಪುಗೊಳ್ಳಲಿ
ನಗರದ ಪ್ರಮುಖ ಸ್ಥಳಗಳಲ್ಲಿ ಪಾರ್ಕಿಂಗ್‌ ತಾಣಗಳನ್ನು ಸ್ಥಾಪಿಸುವ ನಿಟ್ಟಿನಲ್ಲೂ ಕಾರ್ಯಯೋಜನೆ ರೂಪುಗೊಳ್ಳಬೇಕಾಗಿದೆ. ಮಹಾನಗರ ಪಾಲಿಕೆ ಅಧೀನದಲ್ಲಿರುವ ಸರಕಾರಿ ಜಾಗಗಳಲ್ಲಿ ಒಂದಷ್ಟು ಪ್ರದೇಶವನ್ನು ಪಾರ್ಕಿಂಗ್‌ ವ್ಯವಸ್ಥೆಗೆ ಮೀಸಲಿರಿಸುವುದು ಅವಶ್ಯವಾಗಿದೆ ಮತ್ತು ಖಾಸಗಿ ಸಹಭಾಗಿತ್ವವನ್ನು ಪಡೆದುಕೊಂಡು ಇಲ್ಲಿ ಬಹುಅಂತಸ್ತು ಪಾರ್ಕಿಂಗ್‌ ವ್ಯವಸ್ಥೆಯನ್ನು ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುವುದು ಪಾರ್ಕಿಂಗ್‌ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಹಕಾರಿಯಾಗಬಹುದು. ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಸುಸಜ್ಜಿತ ಪಾರ್ಕಿಂಗ್‌ ವ್ಯವಸ್ಥೆಯೂ ಒಳಗೊಂಡಿದೆ. ಅವಶ್ಯವಿರುವ ಕಡೆ ಜಾಗದ ಲಭ್ಯತೆಯನ್ನು ಪರಿಗಣಿಸಿಕೊಂಡು ಪಾರ್ಕಿಂಗ್‌ ವ್ಯವಸ್ಥೆಗಳನ್ನು ಕಲ್ಪಿಸುವುದು ಮತ್ತು ಸ್ಮಾರ್ಟ್‌ ಪಾರ್ಕಿಂಗ್‌ ವ್ಯವಸ್ಥೆಯನ್ನು ಮಂಗಳೂರು ನಗರದ ಸ್ವರೂಪಕ್ಕೆ ಅನುಗುಣವಾಗಿ ಕೆಲವೊಂದು ಬದಲಾವಣೆಗಳೊಂದಿಗೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಕಾರ್ಯೋನ್ಮುಖವಾಗುವುದು ಅವಶ್ಯ.

ಕೇಶವ ಕುಂದರ್‌

ಟಾಪ್ ನ್ಯೂಸ್

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.