“ಪೊಲೀಸರಿಗೆ ಕಾನೂನು ರಕ್ಷಣೆ ಜತೆಗೆ ಸಾಮಾಜಿಕ ಹೊಣೆಗಾರಿಕೆಯಿದೆ’
ಬೈಂದೂರು ವೃತ್ತ ನಿರೀಕ್ಷಕರ ನೂತನ ಕಚೇರಿ ಉದ್ಘಾಟನೆ
Team Udayavani, Nov 2, 2019, 3:25 AM IST
ಬೈಂದೂರು: ಆಧುನಿಕತೆ ಬೆಳೆದಂತೆ ಅಪರಾಧಗಳ ರೀತಿಗಳು ಕೂಡ ಬದಲಾಗುತ್ತಿದೆ. ಪೊಲೀಸ್ ಇಲಾಖೆ ಜನ ಹಾಗೂ ಸಮಾಜದ ಕೇಂದ್ರ ಬಿಂದು. ತಂತ್ರಜ್ಞಾನ ಬೆಳೆದಂತೆ ಅಪರಾಧಗಳ ಸಂಖ್ಯೆ ಕೂಡ ಹೆಚ್ಚುತ್ತಿದೆ. ಪ್ರಸ್ತುತ ಪೊಲೀಸ್ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಅಧಿಕಾರಿಗಳು ಸಮಾಜಮುಖೀ ಸೇವೆ ನೀಡಬೇಕು. ಕಾನೂನು ರಕ್ಷಣೆಯ ಜತೆಗೆ ಸಾಮಾಜಿಕ ಹೊಣೆಗಾರಿಕೆ ಕೂಡ ಪೊಲೀಸರ ಮೇಲಿದೆ ಎಂದು ರಾಜ್ಯ ಗೃಹ ಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಬೈಂದೂರು ವೃತ್ತ ನಿರೀಕ್ಷಕ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಕ್ಲಪ್ತ ಸಮಯದಲ್ಲಿ ಅಪರಾಧಗಳ ಶೋಧನೆ,ಸಾಮಾಜಿಕ ಜಾಲತಾಣಗಳ ಪ್ರಕರಣ ಭೇದಿಸುವುದು, ಸೈಬರ್ ವಂಚನೆಗಳನ್ನು ನಿಯಂತ್ರಿಸುವ ಸವಾಲುಗಳಿರುವುದರಿಂದ ಸೈಬರ್ ಘಟಕಗಳನ್ನು ಗಟ್ಟಿಗೊಳಿಸಲಾಗುತ್ತಿದೆ.ಕರಾವಳಿ ಕಾವಲು ಪಡೆ ಶಸಕ್ತರಾಗಬೇಕೆನ್ನುವ ಉದ್ದೇಶದಿಂದ ಹೆಚ್ಚುವರಿ ಅನುದಾನ ನೀಡಲಾಗುವುದು. ಕೇಂದ್ರ ಹಾಗೂ ರಾಜ್ಯ ಸರಕಾರದ ಅನುದಾನ ವಿನಿಯೋಗ ಮಾಡಿ ಇಲಾಖೆಯನ್ನು ಇನ್ನಷ್ಟು ಬಲಗೊಳಿಸಲಾಗುತ್ತದೆ
ಎಂದು ಹೇಳಿದರು.
ಶೀಘ್ರ ತಾಲೂಕು ವ್ಯಾಪ್ತಿಗೆ ಮಹಿಳಾ ಠಾಣೆ
ಕುಂದಾಪುರದಲ್ಲಿರುವ ಮಹಿಳಾ ಠಾಣೆಯನ್ನು ಜಿಲ್ಲಾ ಕೇಂದ್ರ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಇದರಿಂದ ಬೈಂದೂರಿನ ಸಂತ್ರಸ್ತರು ಮಹಿಳಾ ಠಾಣೆಗೆ ದೂರು ನೀಡಬೇಕಾದರೆ ಉಡುಪಿಗೆ ತೆರಳಬೇಕು ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಿಲ್ಲಾ ಕೇಂದ್ರದಲ್ಲಿ ಮಹಿಳಾ ಠಾಣೆ ಇರಬೇಕಾಗಿರುವ ಉದ್ದೇಶದಿಂದ ವರ್ಗಾಯಿಸಲಾಗಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾಹಿತಿ ಪಡೆದುಕೊಂಡಿದ್ದು ತಾಲೂಕು ಕೇಂದ್ರವಾದ ಬೈಂದೂರಿಗೆ ಮಹಿಳಾ ಠಾಣೆ ಮಂಜೂರು ಮಾಡುವ ಕುರಿತು ಪ್ರಕ್ರಿಯೆ ಮುಂದುವರಿಸುತ್ತೆನೆ ಎಂದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸರಕಾರ ಹಾಗೂ ಖಾಸಗಿ ಬಂಡವಾಳ ಹೂಡಿಕೆ ಮಾಡಲಾಗುವುದು. ಔರಾದ್ಕರ್ ವರದಿ ಸಮರ್ಪಕವಾಗಿ ಅನುಷ್ಠಾನವಾಗಿದೆ. ಈ ಬಗ್ಗೆ ಗೊಂದಲಗಳಿಲ್ಲ. ಸಮಾನಾಂತರ ಪಾವತಿ ಕ್ರಮ ನಡೆಯುತ್ತಿದೆ ಎಂದರು.
ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೈಂದೂರು ಕ್ಷೇತ್ರದ ಜನರು ಶಾಂತಿಪ್ರಿಯರಾಗಿದ್ದಾರೆ. ಇಲಾಖೆಯ ಮುತುವರ್ಜಿ, ಸಾರ್ವಜನಿಕರ ಸಹಕಾರದಿಂದ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಉಡುಪಿ ಶಾಸಕ ರಘುಪತಿ ಭಟ್, ಭಟ್ಕಳ ಶಾಸಕ ಸುನೀಲ್ ನಾಯ್ಕ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಯಡ್ತರೆ ಗ್ರಾ.ಪಂ. ಅಧ್ಯಕ್ಷೆ ಮೂಕಾಂಬು ದೇವಾಡಿಗ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ, ಕುಂದಾಪುರ ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ತಾ.ಪಂ. ಅಧ್ಯಕ್ಷೆ ಶ್ಯಾಮಲಾ ಕುಂದರ್, ಮಟ್ಟಾರು ರತ್ನಾಕರ ಹೆಗ್ಡೆ, ಕರ್ನಾಟಕ ಸ್ಟೇಟ್ ಪೊಲೀಸ್ ಕಾರ್ಪೊರೇಶನ್ ಎ.ಇ. ಗೋಪಾಲ ಕೃಷ್ಣ, ಸಂತೋಷ ಕುಮಾರ್ ಉಳ್ಳಾಲ ಎ.ಇ., ಬೈಂದೂರು ವೃತ್ತ ನಿರೀಕ್ಷಕ ಸುರೇಶ ನಾಯ್ಕ,ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್. ಉಪಸ್ಥಿತರಿದ್ದರು.
ಈ ಸಂದರ್ಭ ಗುತ್ತಿಗೆದಾರ ಪ್ರಮೋದ್ ಶೆಟ್ಟಿ ಅವರನ್ನು ಗೌರವಿಸಲಾಯಿತು. ಶಿಕ್ಷಕ ಸುಧಾಕರ ಪಿ. ಬೈಂದೂರು ಸ್ವಾಗತಿಸಿ, ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.