ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿ ಹಳೆ ಕಟ್ಟಡ ತೆಗೆಯುತ್ತಿದ್ದ ವೇಳೆ ದುರ್ಘಟನೆ
Team Udayavani, Nov 5, 2021, 2:55 PM IST
ಸುಳ್ಯ:- ಸುಳ್ಯದ ಗಾಂಧಿನಗರದಲ್ಲಿರುವ ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ ಕಬ್ಬಿಣ ಸಮಾಗ್ರಿಗಳನ್ನು ತೆಗೆಯುತ್ತಿದ್ದ ವೇಳೆ ಗೋಡೆ ಮಗುಚಿ ಬಿದ್ದು, ಸುಳ್ಯದ ಎಪಿಎಂಸಿ ಬಳಿ ಗುಜಿರಿ ವ್ಯಾಪಾರ ನಡೆಸುತ್ತಿದ್ದ ಅಬ್ದುಲ್ ಖಾದರ್ (ಅಂದುಕಾರ್)ರವರು ಮೃತಪಟ್ಟ ಘಟನೆ ಇಂದು ವರದಿಯಾಗಿದೆ.
ಅವರಿಗೆ ೪೮ ವರ್ಷ ವಯಸ್ಸಾಗಿತ್ತು. ಮೃತರು ಹಲವಾರು ವರ್ಷಗಳಿಂದ ಸುಳ್ಯದಲ್ಲಿ ಗುಜುರಿ ವ್ಯಾಪಾರ ನಡೆಸುವವರಾಗಿದ್ದು, ಹಳೆ ಕಟ್ಟಡದ ಕಬ್ಬಿಣ ಸಾಮಾಗ್ರಿಗಳನ್ನು ತೆಗೆಯುವ ವ್ಯಾಪಾರ ನಡೆಸುತ್ತಿದ್ದರು. ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿ ಕಳೆದ ಕಳೆದ ವರ್ಷಗಳಿಂದ ವ್ಯವಹಾರ ಸ್ಥಗಿತಗೊಳಿಸಿದ್ದು, ಹಳೆಯ ಕಟ್ಟಡವನ್ನು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದರು.
ಇದನ್ನೂ ಓದಿ:- ಮಾರ್ಕಂಡೇಯ ಸ್ವಾಮೀಜಿ ವಿಧಿವಶ:ಕೇಂದ್ರ ಸಚಿವರಿಂದ ಅಂತಿಮ ದರ್ಶನ
ಅಬ್ದುಲ್ ಖಾದರ್‌ರವರು ತಮ್ಮ ಕೆಲಸದಾಳುಗಳ ಜೊತೆ ಇಂದು ಬೆಳಿಗ್ಗೆ ಗೋಡೆಯ ಮೇಲ್ಭಾಗದಲ್ಲಿದ್ದ ಕಬ್ಬಿಣದ ಟ್ರಸ್‌ನ್ನು ಹಗ್ಗ ಹಾಕಿ ಎಳೆಯುತ್ತಿರುವಾಗ ಗೋಡೆಯು ಮಗುಚಿ ಅಬ್ದುಲ್ ಖಾದರ್‌ರವರ ಮೇಲೆ ಬಿದ್ದುದರಿಂದ ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ.
ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿ ಮೃತದೇಹವನ್ನು ಪೋಸ್ಟ್‌ಮಾರ್ಟ್‌ಮ್‌ಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.