NDA ತೊರೆದ 15 ವರ್ಷಗಳ ಬಳಿಕ ಮತ್ತೆ ಮೈತ್ರಿಯ ಸುಳಿವು ನೀಡಿದ ಬಿಜು ಜನತಾ ದಳ
Team Udayavani, Mar 7, 2024, 9:03 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಗೂ ಮುನ್ನ ಎನ್‌ಡಿಎ ಮತ್ತು ಬಿಜೆಡಿ ನಡುವೆ ಮೈತ್ರಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. 15 ವರ್ಷಗಳ ನಂತರ ಬಿಜೆಡಿ ಎನ್‌ಡಿಎಗೆ ಮರಳಲು ಸಿದ್ಧವಾಗಿದೆ ಎಂದು ಹೇಳಲಾಗುತ್ತಿದೆ,
ಮೂಲಗಳ ಪ್ರಕಾರ ಬಿಜೆಡಿ ಅಧ್ಯಕ್ಷ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಎನ್‌ಡಿಎ ಜೊತೆ ಕೈಜೋಡಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ ಉಭಯ ಪಕ್ಷಗಳ ನಡುವಿನ ಮಾತುಕತೆ ಅಂತಿಮ ಹಂತದಲ್ಲಿದೆ. ಬಿಜೆಡಿ ಎನ್‌ಡಿಎ ಸೇರುವ ಕುರಿತು ಶೀಘ್ರದಲ್ಲೇ ಘೋಷಣೆಯಾಗುವ ಸಾಧ್ಯತೆ ಕೂಡ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಬೆಂಬಲ ನೀಡಿದ ನಂತರ, ಎರಡು ಪಕ್ಷಗಳ ನಡುವೆ ಮೈತ್ರಿ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ.
ದೆಹಲಿಯಲ್ಲಿ ಬಿಜೆಪಿ ಸಭೆ:
ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಬುಧವಾರ ರಾಜಧಾನಿ ಭುವನೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದು ಈ ವೇಳೆ ಎನ್‌ಡಿಎ ಸೇರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಮತ್ತೊಂದೆಡೆ, ಬಿಜೆಪಿ ನಾಯಕರು ತನ್ನ ಒಡಿಶಾ ನಾಯಕರೊಂದಿಗೆ ದೆಹಲಿಯಲ್ಲಿ ಸಂಭವನೀಯ ಮೈತ್ರಿ ಬಗ್ಗೆ ಚರ್ಚಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಜುಯಲ್ ಓರಾನ್, ಒಡಿಶಾದ ಎಲ್ಲಾ 147 ವಿಧಾನಸಭಾ ಸ್ಥಾನಗಳು ಮತ್ತು 21 ಲೋಕಸಭಾ ಸ್ಥಾನಗಳ ರಾಜಕೀಯ ಸನ್ನಿವೇಶದ ಬಗ್ಗೆ ಕೇಂದ್ರ ನಾಯಕತ್ವಕ್ಕೆ ತಿಳಿಸಿರುವುದಾಗಿ ಹೇಳಿದರು.
ಬಿಜೆಪಿ ರಾಜಕೀಯ ಪಕ್ಷವಾಗಿರುವುದರಿಂದ ಕೇಂದ್ರ ನಾಯಕತ್ವವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಓರಂ ದೆಹಲಿಯಲ್ಲಿ ಹೇಳಿದ್ದಾರೆ. ಕೇಂದ್ರ ನಾಯಕರು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದು ಎಲ್ಲರಿಗೂ ಒಪ್ಪಿಗೆಯಾಗಲಿದೆ ಎಂದರು. ದೆಹಲಿ ಸಭೆಯಲ್ಲಿ ಮೈತ್ರಿ ಬಗ್ಗೆ ಚರ್ಚೆ ನಡೆದಿದೆ. ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಭೆಯ ನಂತರ ಬಿಜೆಡಿ ಉಪಾಧ್ಯಕ್ಷ ದೇಬಿ ಪ್ರಸಾದ್ ಮಿಶ್ರಾ ಹೇಳಿಕೆಯಲ್ಲಿ ಬಿಜೆಡಿ ಅಧ್ಯಕ್ಷರ ನೇತೃತ್ವದಲ್ಲಿ ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯ ಕಾರ್ಯತಂತ್ರದ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಈ ಸಮಯದಲ್ಲಿ ಒಡಿಶಾ 2036 ರ ವೇಳೆಗೆ ರಾಜ್ಯವಾಗಿ 100 ವರ್ಷಗಳನ್ನು ಪೂರೈಸುತ್ತದೆ ಎಂದು ನಿರ್ಧರಿಸಲಾಯಿತು. ಬಿಜೆಡಿ ಮತ್ತು ಗೌರವಾನ್ವಿತ ಮುಖ್ಯಮಂತ್ರಿಗಳು ಈ ವೇಳೆಗೆ ಪ್ರಮುಖ ಮೈಲಿಗಲ್ಲುಗಳನ್ನು ಸಾಧಿಸಬೇಕಾಗಿರುವುದರಿಂದ, ಬಿಜು ಜನತಾ ದಳವು ರಾಜ್ಯ ಮತ್ತು ಒಡಿಶಾದ ಜನರ ಹಿತಾಸಕ್ತಿಯತ್ತ ಹೆಜ್ಜೆ ಇಡಬೇಕಾಗಿದೆ ಎಂದು ಹೇಳಿದೆ.
ಇದನ್ನೂ ಓದಿ: Missile Attack: ಸರಕು ಹಡಗಿನ ಮೇಲೆ ಹೌತಿ ಬಂಡುಕೋರರಿಂದ ಕ್ಷಿಪಣಿ ದಾಳಿ, ಮೂವರು ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.