Lok Sabha polls: ಡಿಕೆಶಿ ಕೋಟೆಗೆ ಬಿಜೆಪಿ ಚಾಣಕ್ಯ ಶಾ ಎಂಟ್ರಿ
Team Udayavani, Apr 1, 2024, 2:41 PM IST
ಚನ್ನಪಟ್ಟಣ: ಕರ್ನಾಟಕದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು, ಅತ್ಯಂತ ಪ್ರತಿಷ್ಠೆಯಾಗಿ ತೆಗೆದು ಕೊಂಡಿರುವ ಕೇಂದ್ರದ ಬಿಜೆಪಿ ವರಿಷ್ಠರು, ವಿಶೇಷವಾಗಿ ಬಿಜೆಪಿಯ ಚುನಾವಣಾ ಚಾಣಕ್ಯ, ಕೇಂದ್ರ ಸಚಿವ ಅಮಿತ್ ಶಾ ಅವರೇ ಖುದ್ದು ಆಸಕ್ತಿ ವಹಿಸಿ ಈ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯ ಎನ್‌ಡಿಎ ಅಭ್ಯರ್ಥಿ, ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರನ್ನು ಗೆಲ್ಲಿಸಿಕೊಳ್ಳಲು ಸಾಕಷ್ಟು ತಂತ್ರಗಾರಿಕೆಯಲ್ಲಿ ತೊಡಗಿರುವುದು ಗುಟ್ಟಾಗಿ ಉಳಿದಿಲ್ಲ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು ಈಗಾಗಲೇ ನಿಗದಿಯಾಗಿರುವಂತೆ ಏ.4ರಂದು ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಈ ವೇಳೆ ಹಲವಾರು ದಿಗ್ಗಜರು ಸಾಥ್ ನೀಡುವ ಸಾಧ್ಯತೆ ಇದೆ.
ನಾಳೆ ಚನ್ನಪಟ್ಟಣ ಟೌನ್‌ನಲ್ಲಿ ರೋಡ್ ಶೋ: ಇದಕ್ಕೂ ಮುನ್ನವೇ ಏ.2ರಂದು ಬಿಜೆಪಿಯ ಚುನಾವಣಾ ಚಾಣಕ್ಯ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತರುವಾಯ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಬಿಜೆಪಿಯಲ್ಲಿ ಎರಡನೇ ಸ್ಥಾನದಲ್ಲಿ ಇರುವ ಅಮಿತಾ ಶಾ ಅವರು ಬೊಂಬೆನಗರಿ ಚನ್ನಪಟ್ಟಣ ಟೌನ್‌ನಲ್ಲಿ ರೋಡ್ ಶೋ ಮಾಡಲಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಾಮಪತ್ರಕ್ಕೂ ಮುನ್ನ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಪಕ್ಷಗಳ ಹವಾ ಮೂಡಿಸಲು ಬಿಜೆಪಿ ಹಾಗೂ ಜೆಡಿಎಸ್ ಸಾಕಷ್ಟು ಸಿದ್ಧತೆ ಮಾಡಿಕೊಂಡಿವೆ.
ರೋಡ್ ಶೋ ಮೂಲಕ ಹಲವಾರು ತಂತ್ರಗಾರಿಕೆ: ಅಮಿತ್ ಶಾ ಅವರ ರೋಡ್ ಶೋ ಮೂಲಕ ಹಲವು ಸಾಧ್ಯತೆಗಳನ್ನು ತೆರೆದಿಡಲು ಮುಂದಾಗಿ ರುವ ಉಭಯ ಪಕ್ಷಗಳು ಅಮಿತ್ ಶಾ ಅವರನ್ನು ಬರುವಂತೆ ಮಾಡಿಕೊಂಡಿರುವ ಹಿನ್ನೆಲೆಯ ಹಿಂದೆ ಹಲವಾರು ತಂತ್ರಗಾರಿಕೆ ಅಡಗಿದೆ. ಇದರ ಜೊತೆಗೆ ಹಳೇ ಮೈಸೂರು ಭಾಗ ಸೇರಿದಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಜೊತೆಗೆ ರಾಜಧಾನಿ ಬೆಂಗಳೂರಿನ ಮೂರೂ ಲೋಕಸಭಾ ಕ್ಷೇತ್ರಗಳು ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಪೂರಕ ವಾತಾವರಣ ನಿರ್ಮಾಣ ಮಾಡಿಕೊಡುವುದಾಗಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ದಳಪತಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ತಂತ್ರಗಾರಿಕೆ, ಸಲಹೆ, ಮಾರ್ಗದರ್ಶನ ಎಲ್ಲವೂ ಇದರಲ್ಲಿ ಸೇರಿದೆ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ.
ಡಾಕ್ಟರ್ ಸ್ಪರ್ಧೆಗೆ ಶಾ ಒತ್ತಾಸೆ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿ.ಎನ್.ಮಂಜುನಾಥ್ ಅವರು ಸ್ಪರ್ಧೆ ಮಾಡುವಲ್ಲಿ ಅಮಿತ್ ಅವರ ಒತ್ತಾಸೆ, ಸಲಹೆ ಹಾಗೂ ತಂತ್ರಗಾರಿಕೆ ಅಡಗಿದೆ ಎಂಬುದು ಕೂಡ ಗುಟ್ಟಾಗಿ ಉಳಿದಿರುವ ವಿಚಾರವೇನಲ್ಲ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರ ಪರವಾಗಿ ಪ್ರಧಾನ ಮಂತ್ರಿ ಮೋದಿ ಅವರು ಭಾಷಣ ಮಾಡಿದ್ದ ಚನ್ನಪಟ್ಟಣ ತಾಲೂಕಿನ ಮತ್ತೀಕೆರೆ- ಶೆಟ್ಟಿಹಳ್ಳಿ ರೈಲ್ವೆ ಹಳಿ ಬಳಿ ಹೆಲಿಪ್ಯಾಡ್ ನಿರ್ಮಿಸಲಾಗಿದ್ದು, ಏಪ್ರಿಲ್ 2ರಂದು ಸಂಜೆ ಹೆಲಿಕಾಪ್ಟರ್‌ನಲ್ಲಿ ಬಂದು ಇಳಿಯಲಿರುವ ಕೇಂದ್ರ ಸಚಿವ ಅಮಿತ್ ಶಾ ಅವರು ಚನ್ನಪಟ್ಟಣ ನಗರಸಭೆ ಒಂದನೇ ವಾರ್ಡ್ ಚಿಕ್ಕ ಮಳೂರಿನಿಂದ ಬಸ್ ನಿಲ್ದಾಣದ ವರೆಗೆ ಏ.2 ಮಂಗಳವಾರ ಸಂಜೆ 6.30 ಇಂದ 7.30ರವರೆಗೆ ಮೂರು ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಸುಮಾರು ಐವತ್ತು ಸಾವಿರ ಮಂದಿಯನ್ನು ತಲುಪುವ ನಿರೀಕ್ಷೆ ಇದೆ ಎನ್ನುತ್ತಾರೆ ಚನ್ನಪಟ್ಟಣದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು.
ಭಾರತೀಯ ಜನತಾ ಪಾರ್ಟಿಯ ಚುನಾವಣಾ ಚಾಣಕ್ಯ ಅಮಿತ್ ಶಾ ಅವರು ಡಾ.ಸಿ.ಎನ್. ಮಂಜುನಾಥ್ ಅವರ ಕಾರಣ ಹಾಗೂ ಎದುರಾಳಿ ಅಭ್ಯರ್ಥಿ ಕಾಂಗ್ರೆಸ್‌ನ .ಡಿ.ಕೆ.ಸುರೇಶ್ ಅವರನ್ನು ಹೇಗಾದರೂ ಮಾಡಿ ಈ ಬಾರಿ ಬಗ್ಗು ಬಡಿಯಲೇಬೇಕು ಎಂಬ ಹಠ, ಛಲ ಹೊಂದಿದ್ದು, ಈ ನಿಟ್ಟಿ ನಲ್ಲಿ ಸ್ವತಃ ಅಮಿತ್ ಶಾ ಅವರೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಮಹತ್ವವಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಡಾ.ಸಿ.ಎನ್.ಮಂಜುನಾಥ್ ಅವರ ಉಮೇದುವಾರಿಕೆ ಸಲ್ಲಿಕೆಗೂ ಮುನ್ನ ಚನ್ನಪಟ್ಟಣದಲ್ಲಿ ರೋಡ್ ಶೋ ಮಾಡುತ್ತಿರುವುದು ಮಹತ್ವ ಪಡೆದುಕೊಂಡಿದೆ.
ಹೆಲಿಪ್ಯಾಡ್ ಪರಿಶೀಲನೆ ಸೇರಿದಂತೆ ಅಗತ್ಯ ಕ್ರಮ:ಏಪ್ರಿಲ್ 2 ರಂದು ಕೇಂದ್ರ ಸಚಿವ ಅಮಿತ್ ಶಾ ಚನ್ನಪಟ್ಟಣಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಎಸ್‌ಪಿಜಿ ತಂಡವು ಈಗಾಗಲೇ ಹೆಲಿಪ್ಯಾಡ್ ಪರಿಶೀಲನೆ ಸೇರಿದಂತೆ ಅಗತ್ಯ ಕ್ರಮಗಳು ಹಾಗೂ ಸಿದ್ಧತೆಯನ್ನು ಪರಿಶೀಲನೆ ನಡೆಸಿದೆ ಎನ್ನಲಾಗಿದೆ.
ಶಾ ಹಲವು ತಂತ್ರಗಾರಿಕೆ: ಲೋಕಸಭಾ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ ಖುದ್ದು ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಅವರೇ ಕರ್ನಾಟಕ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಂತ್ರಗಾರಿಕೆ ಶುರು ಮಾಡಿದ್ದಾರೆ. ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಕಚೇರಿಗಳು ಓಪನ್ ಆಗಲಿದೆ. ಎಲ್ಲಾ ಜಿಲ್ಲಾಧ್ಯಕ್ಷರುಗಳಿಂದ ಚುನಾವಣಾ ಕಚೇರಿಗಳು ಓಪನ್ ಆಗಲಿವೆ.
ರಾಜ್ಯ ಮಟ್ಟದಲ್ಲಿ ಯಾವ ರೀತಿ ತಂತ್ರ ಮಾಡಲಾಗ್ತಿದೆ ಎಂಬುದರ ಬಗ್ಗೆ ಹಲವು ಮಾಹಿತಿ ಲಭ್ಯ ವಾಗಿದ್ದು, ಕಚೇರಿ ನಿರ್ವಹಣೆ ಸ್ಥಳೀಯ ಜಿಲ್ಲಾಧ್ಯಕ್ಷರುಗಳಿಗೇ ಜವಾಬ್ದಾರಿ ನೀಡಲಾಗಿದೆ. ಕ್ಷೇತ್ರಗಳ ಚುನಾವಣಾ ಕಚೇರಿಗಳಿಗೆ ರಾಜ್ಯ ಮಟ್ಟದಿಂದ ರಾಧಾ ಮೋಹನ್ ದಾಸ್ ಅಗರವಾಲ್ ನೇಮಕ ಮಾಡಲಾಗಿದೆ. ರಾಜ್ಯ ಮಟ್ಟದಲ್ಲಿ ಯಾವ ರೀತಿ ತಂತ್ರ ಮಾಡಲಾಗ್ತಿದೆ ಅನ್ನೋ ಬಗ್ಗೆ ಅಮಿತ್ ಶಾಗೆ ರಾಧಾ ಮೋಹನ್‌ದಾಸ್ ಖುದ್ದು ಮಾಹಿತಿ ನೀಡಲಿದ್ದಾರೆ. ಜೆಪಿ ನಡ್ಡಾ ಹಾಗೂ ಅಮಿತ್ ಶಾ ಸೂಚನೆಯಂತೆ ರಾಧಾಮೋಹನ್ ದಾಸ್ ರಾಜ್ಯದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ಚುನಾವಣಾ ಚಾಣಕ್ಯ, ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಡಾ.ಸಿ.ಎನ್.ಮಂಜುನಾಥ್ ಅವರನ್ನು ಗೆಲ್ಲಿಸಿಕೊಳ್ಳಲೇ ಬೇಕು ಎಂಬ ಹೆಬ್ಬಯಕೆ ಇದ್ದು, ಎದುರಾಳಿ ಅಭ್ಯರ್ಥಿಯನ್ನು ಹೇಗಾದರೂ ಮಾಡಿ ಈ ಬಾರಿ ಬಗ್ಗು ಬಡಿಯಲೇಬೇಕು ಎಂಬ ಹಠ, ಛಲ ಹೊಂದಿದ್ದು, ಈ ನಿಟ್ಟಿನಲ್ಲಿ ಸ್ವತಃ ಅಮಿತ್ ಶಾ ಅವರೇ ರೋಡ್ ಶೋ ಮೂಲಕ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. -ಸಿ.ಪಿ.ಯೋಗೇಶ್ವರ್, ವಿಧಾನ ಪರಿಷತ್ ಸದಸ್ಯರು, ಬಿಜೆಪಿ ನಾಯಕರು
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಸಿ.ಎನ್. ಮಂಜು ನಾಥ್ ಅವರು ಚನ್ನಪಟ್ಟಣ ತಾಲೂಕಿನಲ್ಲಿ ಅತ್ಯಧಿಕ ಮತಗಳನ್ನು ಪಡೆಯಲಿದ್ದಾರೆ. ತಾಲೂಕಿನಲ್ಲಿ ಜೆಡಿಎಸ್-ಬಿಜೆಪಿ ಮುಖಂಡರು ಕಾರ್ಯಕರ್ತರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ ಅವರು ಚನ್ನಪಟ್ಟಣದಲ್ಲಿ ರೋಡ್ ಶೋ ಮಾಡುವುದು ಡಾ.ಮಂಜುನಾಥ್ ಅವರ ಗೆಲುವಿಗೆ ಮುನ್ನುಡಿ ಆಗಲಿದೆ. -ಹಾಪ್ ಕಾಮ್ಸ್ ಸಿ.ದೇವರಾಜು, ಜೆಡಿಎಸ್ ಹಿರಿಯ ಮುಖಂಡರು
– ಎಂ.ಶಿವಮಾದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.