Lok Sabha Polls: 28 ಕ್ಷೇತ್ರಗಳನ್ನೂ ಬಿಜೆಪಿ-ಜೆಡಿಎಸ್ ಗೆದ್ದು ಹೊಸ ದಾಖಲೆ: ವಿಜಯೇಂದ್ರ
Team Udayavani, Mar 14, 2024, 8:17 PM IST
ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಂದಾಗಿ 28 ಕ್ಷೇತ್ರಗಳನ್ನೂ ಗೆದ್ದು ಹೊಸ ದಾಖಲೆ ಬರೆಯುವ ಜತೆಗೆ ಪ್ರಧಾನಿ ಮೋದಿ ಅವರ ಕೈ ಬಲಪಡಿಸುವ ಗುರಿ ಹೊಂದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 20 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಕೆಲವರಿಗೆ ಟಿಕೆಟ್ ಸಿಕ್ಕಿಲ್ಲ. ಕೆಲ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡುವ ಕೆಲಸವೂ ಆಗಿದೆ. ಅಭ್ಯರ್ಥಿಗಳ ಆಯ್ಕೆಯನ್ನು ಯಾರೋ ಒಬ್ಬರು ಕುಳಿತು ಮಾಡಿರುವುದಲ್ಲ. ಕೇಂದ್ರದ ವರಿಷ್ಠರೆಲ್ಲರೂ ಚರ್ಚಿಸಿ, ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.
ಯದುವೀರ್, ಡಾ.ಮಂಜುನಾಥ್ ಅಚ್ಚರಿಯ ಆಯ್ಕೆ: ಮೈಸೂರಿನ ರಾಜಮನೆತನದ ಬಗ್ಗೆ ವಿಶೇಷವಾಗಿ ಹಳೆ ಮೈಸೂರು ಭಾಗದ ಜನತೆಗೆ ವಿಶೇಷ ಗೌರವ, ಪ್ರೀತಿ ಇದೆ. ಈ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಕ್ಷೇತ್ರಕ್ಕೆ ಯದುವೀರ ಒಡೆಯರ್ ಅವರಿಗೆ ಟಿಕೆಟ್ ನೀಡಲು ವರಿಷ್ಠರು ತೀರ್ಮಾನ ಮಾಡಿದರು. ಬೆಂಗಳೂರು ಗ್ರಾಮೀಣ ಕ್ಷೇತ್ರಕ್ಕೆ ಡಾ. ಮಂಜುನಾಥ್ ಅವರನ್ನು ಬಿಜೆಪಿ ಹುರಿಯಾಳಾಗಿ ಆಯ್ಕೆ ಮಾಡಿದೆ ಎಂದರು.
ಈ ಚುನಾವಣೆಯಲ್ಲಿ ಕಾರ್ಯಕರ್ತರಿಗೆ ಹೆಚ್ಚು ಉತ್ಸಾಹ ತುಂಬಬೇಕಿದೆ. ರಾಜ್ಯದ ಎಲ್ಲ ನಾಯಕರು ಒಗ್ಗಟ್ಟಾಗಿ, ಒಂದಾಗಿ ಶ್ರಮಿಸಲಿದ್ದಾರೆ. ಕಾರ್ಯಕರ್ತರ ಶ್ರಮ, ಮೋದಿ ಪರ ವಾತಾವರಣ, ಮೋದಿ ಜನಪ್ರಿಯತೆಯನ್ನು ಮತವಾಗಿ ಪರಿವರ್ತಿಸುವ ಕಾರ್ಯಕರ್ತರ ಶಕ್ತಿಯ ಮೇಲೆ ವಿಶ್ವಾಸವಿದೆ.– ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.