BJP-KRPP; ಅಮಿತ್ ಶಾ ಭೇಟಿಯಾದ ಗಾಲಿ ಜನಾರ್ದನ ರೆಡ್ಡಿ

Team Udayavani, Mar 14, 2024, 6:25 PM IST

1-sadsadas

ಕೊಪ್ಪಳ : ಕೆಆರ್ ಪಿಪಿ ಪಕ್ಷದ ಸಂಸ್ಥಾಪಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುರುವಾರ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರೆಡ್ಡಿ ಅವರ ನಡೆ ಕುತೂಹಲ ಮೂಡಿಸಿದ್ದು ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಲೋಕಸಭಾ ಚುನಾವಣೆಗೆ ಕೆಆರ್ ಪಿಪಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳಿದ್ದ ರೆಡ್ಡಿ ಅವರು ದಿಢೀರ್ ಶಾ ಮತ್ತು ಬಿಜೆಪಿ‌ ಪ್ರಮುಖ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ‘ಕೇಂದ್ರ ಗೃಹಮಂತ್ರಿಗಳಾದ ಅಮಿತ್ ಶಾ ಜಿಯವರ ಆಹ್ವಾನದ ಮೇರೆಗೆ ನವದೆಹಲಿಯಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಭೇಟಿ ಮಾಡಿ ಕರ್ನಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು ನನಗೆ ಬಹಳ ಸಂತೋಷವನ್ನು ತಂದಿದೆ’ ಎಂದು ಎಕ್ಸ್ ನಲ್ಲಿ ರೆಡ್ಡಿ ಪೋಸ್ಟ್ ಮಾಡಿದ್ದಾರೆ.

ಕಳೆದ ವಾರ ನಡೆದ ರಾಜ್ಯಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದ ಗಾಲಿ ಜನಾರ್ದನ ರೆಡ್ಡಿ ಅವರು ಇತಿಹಾಸ ಪ್ರಸಿದ್ಧ ಆನೆಗೊಂದಿ ಉತ್ಸವದಲ್ಲಿ ಪಾಲ್ಗೊಂಡು ಮರುದಿನವೇ ಬಿಜೆಪಿ‌ ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದಾರೆ.

ಕಳೆದ ವಾರ ಬಿ.ಶ್ರೀರಾಮುಲು ಅವರ ಟಿಕೆಟ್ ತಪ್ಪಿಸಲು ಗಾಲಿ ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ ಎಂಬ ಸುದ್ದಿ ಹರಡಿತ್ತು.ಇದನ್ನು ತಮ್ಮ ಮೇಲೆ ಆರೋಪ ಹಾಕುವ ದೃಷ್ಟಿಯಿಂದಲೇ ಸೃಷ್ಟಿಸಲಾಗಿದೆ ಎಂದು ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದರು.

ಕಿಷ್ಕಿಂಧಾ ಅಂಜನಾದ್ರಿ ಮತ್ತು ರಾಜ್ಯದ ಪ್ರಗತಿಯ ಯೋಜನೆಗಳ ಚರ್ಚೆ ಅನುದಾನ ಪಡೆಯಲು ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ವಿಶೇಷವಾಗಿ ಲೋಕಸಭಾ ಚುನಾವಣೆಯ ಸ್ಥಾನಗಳ ಹೊಂದಾಣಿಕೆ ಅಥವಾ ಪಕ್ಷವನ್ನು ಬೆಂಬಲಿಸುವ ಕುರಿತು ಯಾವುದೇ ರೀತಿಯ ಮಾತುಕತೆಗಳು ನಡೆದಿಲ್ಲ. ಕೇಂದ್ರ ಗೃಹ ಸಚಿವರ ಭೇಟಿ ಕೇವಲ ಅಭಿವೃದ್ದಿ ಕಾರ್ಯಗಳಿಗೆ ಸೀಮಿತವಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಕೊಪ್ಪಳ ಬಳ್ಳಾರಿ ಸೇರಿ ಹಲವೆಡೆ ರೆಡ್ಡಿ ಅವರು ತನ್ನದೇ ಆದ ಮತಬ್ಯಾಂಕ್ ಮತ್ತು ಬೆಂಬಲಿಗರನ್ನು ಹೊಂದಿದ್ದು ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀರಾಮುಲು, ಕೊಪ್ಪಳ, ರಾಯಚೂರು ಭಾಗದಲ್ಲಿ ಬಿಜೆಪಿಗೆ ನೆರವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.