Loksabha Result; ಕೋಟ, ಚೌಟ , ಕಾಗೇರಿಗೆ ಆರಂಭಿಕ ಮುನ್ನಡೆ
ರಾಜ್ಯದ ಕೆಲ ಕ್ಷೇತ್ರಗಳಲ್ಲಿ ಹಾವು ಏಣಿ ಆಟ
Team Udayavani, Jun 4, 2024, 9:12 AM IST
ಮಂಗಳೂರು/ ಉಡುಪಿ : ಲೋಕಸಭಾ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದ್ದು ಉಡುಪಿಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ-72972 (ಮುನ್ನಡೆ-29456), ಜಯ ಪ್ರಕಾಶ್ ಹೆಗ್ಡೆ-43516 ಮತಗಳನ್ನು ಆರಂಭಿಕ ಸುತ್ತಿನಲ್ಲಿ ಪಡೆದಿದ್ದಾರೆ.
ಉತ್ತರಕನ್ನಡದಲ್ಲಿ ಕಾಗೇರಿ ಮನ್ನಡೆ ಸಾಧಿಸಿದ್ದಾರೆ. ಮಂಗಳೂರಿನಲ್ಲಿ ಅಂಚೆ ಮತದಾನದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದಾರೆ. ಚೌಟ 12697 ಮತ ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ 6474 ಮತ ಪಡೆದಿದ್ದಾರೆ.
ಹಾಸನದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ ನ ಶ್ರೇಯಸ್ ಪಟೇಲ್ ಮುನ್ನಡೆ ಸಾಧಿಸಿದ್ದು, ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಹಿನ್ನಡೆ ಅನುಭವಿಸಿದ್ದಾರೆ.
ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್, ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಚಿಕ್ಕೋಡಿಯಲ್ಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆಗೆ ಹಿನ್ನಡೆ. ಆರಂಭಿಕ ಸುತ್ತಿನಲ್ಲಿ ಪ್ರಿಯಂಕಾ ಜಾರಕಿಹೊಳಿ ಮುನ್ನಡೆ ಸಾಧಿಸಿದ್ದಾರೆ. ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಜೆಡಿಎಸ್ ನ ಮಲ್ಲೇಶ್ ಬಾಬು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.