LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR
Team Udayavani, Apr 23, 2024, 2:56 PM IST
ಬೈಂದೂರು: ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ. ಜಿಪಂ-ತಾಪಂ ಹಾಗೂ ಗ್ರಾಪಂಗಳಲ್ಲಿ ಮೀಸಲಾತಿ ಕೊಟ್ಟಿದ್ದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು.
ಪಟ್ಟಣದಲ್ಲಿ ನಡೆದ ಮಂಡಲ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇ.33ರಷ್ಟು ಸ್ಥಾನವನ್ನು ಮಹಿಳೆಯರಿಗೆ ನೀಡುವ ಮೂಲಕ ಮಹಿಳಾ ಸಮುದಾಯಕ್ಕೆ ಆದ್ಯತೆ ನೀಡಿದವರು ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು. ರಾಜ್ಯದಲ್ಲಿ ಜಿಪಂ-ತಾಪಂ ಹಾಗೂ ಗ್ರಾಪಂಗಳಲ್ಲಿ ಶೇ. 50ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ಕೊಡುವ ಮೂಲಕ ಯಡಿಯೂರಪ್ಪನವರು ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಹಿಳಾ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದರು.
ರಾಜ್ಯ ಸರ್ಕಾರ ಮಹಿಳಾ ವಿರೋಧಿ ನೀತಿ ಅನುಸರಿಸುತ್ತಿದೆ. ಇಂತಹ ಸರ್ಕಾರ ಅಧಿ ಕಾರದಲ್ಲಿ ಇರಬೇಕಾ ಎಂಬುದನ್ನು ನಮ್ಮ ಮತದಾರರು ಯೋಚಿಸಬೇಕಾಗಿದೆ. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ ಸಿದ್ದರಾಮಯ್ಯನವರು ಇಂದು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಈ ಅಕ್ಕಿಯೂ ಸಹ ಪ್ರಧಾನಿ ನರೇಂದ್ರ ಮೋದಿಯವರು ನೀಡುತ್ತಿರುವ ಅಕ್ಕಿಯಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುತ್ತಿದೆ. ದೇಶದ ಪ್ರತಿಯೊಬ್ಬ ಹೆಣ್ಣು ಮಗಳಿಗೂ ಪ್ರತಿವರ್ಷ 1 ಲಕ್ಷ ಹಣ ನೀಡುತ್ತೇವೆ ಎಂದು ಹೇಳಿದ್ದಾರೆ.
ನಮ್ಮ ದೇಶದಲ್ಲಿ 60 ಲಕ್ಷ ಮಹಿಳೆಯರಿದ್ದಾರೆ. ಅವರೆಲ್ಲರಿಗೂ 1 ಲಕ್ಷ ಹಣ ನೀಡಿದರೆ ಪ್ರತಿ ವರ್ಷ 60 ಲಕ್ಷ ಕೋಟಿ ಹಣ ಬೇಕಾಗುತ್ತದೆ. ಹಾಗಾದರೆ ನಮ್ಮ ದೇಶದ ಬಜೆಟ್ ಇರುವುದೇ 45 ಲಕ್ಷ ಕೋಟಿ ಕುಟುಂಬದ ಓರ್ವ ಹೆಣ್ಣು ಮಗಳಿಗೆ 1 ಲಕ್ಷ ನೀಡಿದರೂ ಸಹ 32 ಲಕ್ಷ ಕೋಟಿ ಹಣ ಬೇಕಾಗುತ್ತದೆ. ಯಾವುದೇ ಅಂಕಿ- ಸಂಖ್ಯೆಯಿಲ್ಲದೇ ಕೇವಲ ಬೊಗಳೆ ಬಿಡುತ್ತಾ ಅಧಿಕಾರ ಹಿಡಿಯುವ ಸಲುವಾಗಿ ಮತದಾರರಿಗೆ ಸಲ್ಲದ ಆಮಿಷಗಳನ್ನು ಒಡ್ಡುತ್ತಿದ್ದಾರೆ ಎಂದು
ದೂರಿದರು.
ಮೋದಿ ಸರ್ಕಾರ ಸ್ವತ್ಛ ಭಾರತ್ ಹೆಸರಿನಲ್ಲಿ ಪ್ರತಿಮನೆಗೆ ಶೌಚಾಲಯ ಜಲಜೀವನ್ ಮಿಷನ್ ಅಡಿಯಲ್ಲಿ ಪ್ರತಿ ಮನೆಗೆ ಕುಡಿಯುವ ನೀರು ಎಲ್.ಪಿ.ಜಿ. ಸಂಪರ್ಕ ಬಡವರಿಗೆ ಮನೆ, ಏಪಿಎಲ್ ಹಾಗೂ ಬಿಪಿಎಲ್ ಕಾರ್ಡ್‌ದಾರರಿಗೆ ಆಯುಷ್ಮಾನ್ ಕಾರ್ಡ್ ಯೋಜನೆ ನೀಡುವ ಮೂಲಕ ಬಡವರು ಮಧ್ಯಮ ವರ್ಗದವರು ನೆಮ್ಮದಿಯಿಂದ ಜೀವನ ನಡೆಸುವಂತೆ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕಿ ಭಾರತಿ ಶೆಟ್ಟಿ, ಡಾ| ರಾಜನಂದಿನಿ, ಗಾಯತ್ರಿ ಮಲ್ಲಪ್ಪ, ಭಾಗೀರಥಿ ಇತರರು ಇದ್ದರು.
ಭಾರತ ವಿಶ್ವದ ಬಲಿಷ್ಠ ರಾಷ್ಟ್ರವಾಗಿಸಲು ಮೋದಿ ದಿಟ್ಟ ಹೆಜ್ಜೆ: ರಾಘವೇಂದ್ರ
ಶಿವಮೊಗ್ಗ: ಭಾರತವನ್ನು ವಿಶ್ವದಲ್ಲಿಯೇ ಬಲಿಷ್ಠ ರಾಷ್ಟ್ರವಾಗಿಸಲು ಮೋದಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು. ನಗರದ ಬಂಟರ ಭವನದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಜನಪ್ರತಿನಿಧಿಗಳ ಹಾಗೂ ಕಾರ್ಯಕರ್ತರ ಮತ್ತು ಮುಖಂಡರ
ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳ ಹಿಂದೆ ಅತ್ಯಂತ ಹಿಂದುಳಿದ ರಾಷ್ಟ್ರಗಳ ಪಟ್ಟಿಯಲ್ಲಿದ್ದ ಭಾರತ ಇಂದು ಮುಂದುವರಿದ ರಾಷ್ಟ್ರಗಳ ಐದನೇ ಸ್ಥಾನದಲ್ಲಿದೆ ಎಂದು ಹೇಳಿದರು.
ಮೋದಿ ಆಡಳಿತ ವೈಖರಿಯಿಂದಾಗಿ ಭಾರತದತ್ತ ಇಂದು ವಿಶ್ವವೇ ನೋಡುವಂತಾಗಿದೆ. ಮುಂದಿನ ದಿನಗಳಲ್ಲಿ ಭಾರತ ವಿಶ್ವದ ಬಲಿಷ್ಠ ರಾಷ್ಟ್ರಗಳಲ್ಲಿ ಒಂದಾಗಲಿದೆ ಎಂದು ಹೇಳಿದರು ಕೇಂದ್ರ ಸರ್ಕಾರ ಅಂತ್ಯದ ಪರಿಕಲ್ಪನೆ ಅಡಿಯಲ್ಲಿ ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದವರನ್ನು ಗಮನದಲ್ಲಿರಿಸಿಕೊಂಡು
ಹಲವಾರು ಯೋಜನೆಗಳನ್ನ ಜಾರಿಗೆ ತಂದಿದೆ. ಇದರಿಂದಾಗಿ ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ ಕಡಿಮೆಯಾಗಿದೆ. ಇದು ಮೋದಿ ಸರ್ಕಾರದ ಸಾಧನೆ ಎಂದರು. ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ನಾನು ಸಂಸದನಾಗಿದ್ದ ಅವಧಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ತಂದ ನೂರಾರು ಅಭಿವೃದ್ಧಿ
ಕಾರ್ಯಗಳಿಂದಾಗಿ ಇಂದು ಜಿಲ್ಲೆಯಲ್ಲಿ ಬಂಡವಾಳಶಾಹಿಗಳು ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವಂತಾಗಿದೆ. ಇದು ಭವಿಷ್ಯದ ದೃಷ್ಟಿಯಿಂದ ಒಳ್ಳೆಯ
ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾರರು ನನ್ನನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸುವ ಮೂಲಕ ಮತ್ತಷ್ಟು ಕೆಲಸ ಮಾಡಲು ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.
ಮುಂದಿನ ದಿನಗಳಲ್ಲಿಯೂ ಕೂಡ ಸಾಕಷ್ಟು ಅಭಿವೃದ್ಧಿ ಕೆಲಸಗಳು, ಹೊಸ ಹೊಸ ಯೋಜನೆಗಳನ್ನು ಶಿವಮೊಗ್ಗ ಜಿಲ್ಲೆಗೆ ತರುವ ಮೂಲಕ ಈ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು ಗ್ರಾಮಾಂತರ ಶಾಸಕಿ ಶಾರದಾಪುರ ನಾಯಕ್, ಶಿವಮೊಗ್ಗ ನಗರ ಶಾಸಕ ಎಸ್.
ಎನ್. ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ| ಧನಂಜಯ ಸರ್ಜಿ, ವಿರೂಪಾಕ್ಷಪ್ಪ, ಮಲ್ಲೇಶಪ್ಪ, ಸುರೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ
Road Mishap: ಇನ್ನೋವಾ ಕಾರಿಗೆ ಇನ್ಸುಲೇಟರ್ ಲಾರಿ ಢಿಕ್ಕಿ; ನಾಲ್ವರು ಗಂಭೀರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.