Challenge; ದೇವೇಗೌಡರು ಮೊದಲು ಜೆಡಿಎಸ್ ಭವಿಷ್ಯ ಹೇಳಲಿ: ಡಿ.ಕೆ.ಶಿವಕುಮಾರ್
ಅವರಿಗೆ 60 ವರ್ಷಗಳ ಅನುಭವವಿದ್ದರೆ, ನನಗೆ 40 ವರ್ಷಗಳ ಅನುಭವವಿದೆ
Team Udayavani, Apr 14, 2024, 12:11 AM IST
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಮ್ಮ ಸರಕಾರದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯುವುದಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.
ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಎಷ್ಟು ಭವಿಷ್ಯ ಕಾಲವನ್ನು ನೋಡಿದ್ದಾರೋ ನಾನೂ ಅಷ್ಟೇ ಭವಿಷ್ಯ ಕಾಲವನ್ನು ನೋಡಿದ್ದೇನೆ. ಅವರಿಗೆ 60 ವರ್ಷಗಳ ರಾಜಕೀಯದ ಅನುಭವವಿದ್ದರೆ, ನನಗೆ 40 ವರ್ಷಗಳ ರಾಜಕಾರಣದ ಅನುಭವವಿದೆ ಎಂದರು.
ನಮ್ಮ ಸರಕಾರದ ಬಳಿ 136ಕ್ಕೂ ಅಧಿಕ ಸ್ಥಾನವಿದೆ. ಅವರು ತಮ್ಮ ಪಕ್ಷ ಜೀವಂತವಾಗಿ ಇರುತ್ತದೆಯೋ ಇಲ್ಲವೋ ಎಂಬುದನ್ನು ಮೊದಲು ಹೇಳಲಿ. ಜೆಡಿಎಸ್ ಬಿಜೆಪಿಯಲ್ಲಿ ವಿಲೀನವಾಗುತ್ತ ದೆಯೇ ಅಥವಾ ತನ್ನದೇ ಪ್ರತ್ಯೇಕ ಅಸ್ತಿತ್ವ ಉಳಿಸಿಕೊಳ್ಳಲಿದೆಯೇ ಎಂಬುದರ ಬಗ್ಗೆ ಜನರಿಗೆ ತಿಳಿಸಲಿ. ಅವರೇ ಕಟ್ಟಿದ ಪಕ್ಷ ಹಾಗೂ ಅದರ ಬಗ್ಗೆ ಅವರ ನಿಷ್ಠೆಯನ್ನು ನಾನು ಪ್ರಶ್ನಿಸುವುದಿಲ್ಲ. ನಮ್ಮ ಸರಕಾರದ ಅಸ್ತಿತ್ವ ಪಕ್ಕಕ್ಕಿರಲಿ, ಅವರ ಪಕ್ಷದ ಅಸ್ತಿತ್ವವೇ ಈಗ ಇಲ್ಲವಲ್ಲ ಎಂದು ಹೇಳಿದರು.
ಸಂವಿಧಾನ ಬದಲಿಸುವವರನ್ನು ಉಚ್ಚಾಟಿಸಿ
ಅಂಬೇಡ್ಕರ್ ಅವರೇ ಬಂದರೂ ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ ಶಿವಕುಮಾರ್, ಪ್ರಧಾ® ಮಂತ್ರಿ ಸ್ಥಾನದ ಬಗ್ಗೆ ನಮಗೆ ಬಹಳ ಗೌರವವಿದೆ. ಪ್ರಧಾನಮಂತ್ರಿಗಳು ಈ ವಿಚಾರವಾಗಿ ಈಗ ಯಾಕೆ ಮಾತನಾಡುತ್ತಿದ್ದಾರೆಯೋ ಗೊತ್ತಿಲ್ಲ. ಸಂವಿಧಾನ ಬದಲಿಸುತ್ತೇವೆ ಎಂದ ಅವರ ಪಕ್ಷದ ನಾಯಕರು ಪಕ್ಷದಿಂದ ಉಚ್ಚಾಟನೆ ಮಾಡಲಿಲ್ಲ ಯಾಕೆ? ಅವರಿಗೆ ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿದವರನ್ನು ಮೊದಲು ತಮ್ಮ ಪಕ್ಷದಿಂದ ಉಚ್ಚಾಟಿಸಲಿ. ಆಗ ಅವರ ಬದ್ಧತೆಯನ್ನು ನಾವು ಒಪ್ಪಬಹುದು ಎಂದು ಹೇಳಿದರು.
ಈಗ ಚುನಾವಣೆ ಬಂದಿದೆ ಎಂದು ಈ ರೀತಿ ಹೇಳಿಕೆ ನೀಡುತ್ತಿ¨ªಾರೆ. ನಾವು ಸಂವಿಧಾನದ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತೇವೆ. ಬಿಜೆಪಿಗೆ 400 ಸೀಟು ಬಂದರೆ ಸಂವಿಧಾನ ಬದಲಿಸುತ್ತೇವೆ ಎಂದೆಲ್ಲ ಅವರ ಪಕ್ಷದ ನಾಯಕರು, ಅಭ್ಯರ್ಥಿಗಳು ಹೇಳುತ್ತಿದ್ದಾರೆ. ಇಷ್ಟು ದಿನ ಈ ವಿಚಾರವಾಗಿ ಮೌನವಾಗಿದ್ದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಡವರು ಸಹಿತ ಎಲ್ಲ ವರ್ಗದವರು ಸಂವಿಧಾನಕ್ಕೆ ಅಪಾಯ ಬಂದಿದೆ, ನಮ್ಮ ಹಕ್ಕುಗಳಿಗೆ ಕುತ್ತು ಬಂದಿದೆ ಎಂದು ಧ್ವನಿ ಎತ್ತಿದ ಬಳಿಕ ಈ ಹೇಳಿಕೆ ನೀಡಿ¨ªಾರೆ. ಇದು ಕೇವಲ ರಾಜಕೀಯ ಹೇಳಿಕೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.