MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು


Team Udayavani, Apr 27, 2024, 11:42 AM IST

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

ಬೆಂಗಳೂರು: ಧರ್ಮದ ಆಧಾರದಲ್ಲಿ ಮತಯಾಚನೆ ಮಾಡಿದ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಜಯನಗರ ಪೊಲೀಸ್‌ ಠಾಣೆ ಯಲ್ಲಿ 2 ಪ್ರತ್ಯೇಕ ದೂರು ದಾಖಲಾಗಿದೆ.

“ಸುಮಾರು 500 ವರ್ಷಗಳ ಕಾಯುವಿಕೆ ಮತ್ತು ಕೋಟಿಗಟ್ಟಲೆ ಭಾರತೀಯರ ಆಶಯವನ್ನು ಪ್ರಧಾನಿ ಈಡೇರಿಸಿದ್ದಾರೆ. ಭಾರತೀಯತೆ ಉಳಿಯಲು ಬಿಜೆಪಿಗೆ ಮತ ನೀಡಿ’ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಗುರುವಾರ ತೇಜಸ್ವಿ ಸೂರ್ಯ ಬರೆದುಕೊಂಡಿದ್ದರು. ಜತೆಗೆ ಅಯೋಧ್ಯೆಯ ಬಾಲ ರಾಮನ ಹಣೆಗೆ ಸೂರ್ಯ ಸ್ಪರ್ಶಿಸುವ ವಿಡಿಯೋವನ್ನು ಅಪ್ಲೋಡ್‌ ಮಾಡಿದ್ದರು. ಈ ಸಂಬಂಧ ಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದಲ್ಲದೇ, ಶುಕ್ರವಾರ ಇದೇ ಮಾದರಿಯ ಮತ್ತೂಂದು ರೀತಿಯಲ್ಲಿ ಹೇಳಿಕೆ ಕೊಟ್ಟಿದ ದೃಶ್ಯವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಶೇ.80 ಬಿಜೆಪಿ ಬೆಂಬಲಿಗರು ಮತ್ತು ಮತದಾರರು ಇದ್ದರೂ ಸಹ ಕೇವಲ ಶೇ.20 ಜನರು ಮಾತ್ರ ಮತ ಚಲಾಯಿಸಲು ಬರುತ್ತಿದ್ದಾರೆ. ಇದು ಕಾಂಗ್ರೆಸ್‌ಗೆ ಅನುಕೂಲವಾಗಿದೆ. ನಾವು ಶೇ.80 ಇದ್ದೇವೆ. ಆದರೆ, ಮತದಾನದ ದಿನದಂದು ಹೊರಗೆ ಬರುತ್ತಿರುವುದು ಕೇವಲ ಶೇ.20 ಮಾತ್ರ. ಕಾಂಗ್ರೆಸ್‌ ಬೆಂಬಲಿಗರು ಶೇ.20 ಇದ್ದಾರೆ. ಆದರೆ, ಅವರು ಹೊರಗೆ ಬಂದು ಶೇ.80ರಷ್ಟು ಮತ ಚಲಾಯಿಸುತ್ತಿದ್ದಾರೆ. ಹೀಗಾಗಿ ಪ್ರತಿಯೊಬ್ಬರೂ ಹೊರ ಬಂದು ಮತದಾನ ಮಾಡಬೇಕು ಎಂದು ತೇಜಸ್ವಿ ಸೂರ್ಯ ಸುದ್ದಿ ಸಂಸ್ಥೆಯೊಂದಿಗೆ ಹೇಳಿಕೆ ನೀಡಿರುವ ದೃಶ್ಯದ ತುಣುಕನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು.

ಮತದಾನದ 48 ಗಂಟೆ ಮೊದಲು ಯಾವುದೇ ಮಾಧ್ಯಮಗಳಲ್ಲಿ ಧರ್ಮಾಧಾರಿತ ಪ್ರಚಾರ ಮಾಡುವಂತಿಲ್ಲ. ಯಾವುದೇ ಧರ್ಮವನ್ನು ಇಟ್ಟುಕೊಂಡು ಪ್ರಚಾರ ಮಾಡಬಾರದು ಎಂಬ ನಿಯಮಗಳಿವೆ.

 

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.