Congress ಇಂದು ಸಿಇಸಿ ಸಭೆ; ಮೊದಲ ಪಟ್ಟಿ ಅಂತಿಮ?: ಅಮೇಠಿಯಿಂದ ರಾಹುಲ್
Team Udayavani, Mar 7, 2024, 6:35 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಬಿಜೆಪಿಯು 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಳಿಕ, ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣ ಸಮಿತಿ(ಸಿಇಸಿ) ಸಭೆಯನ್ನು ಗುರುವಾರ ಆಯೋಜಿಸಲಾಗಿದೆ. ಈ ವೇಳೆ, ಪಕ್ಷವು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಿದೆ.
“”ಕಾಂಗ್ರೆಸ್ ಕೇಂದ್ರ ಚುನಾವಣ ಸಮಿತಿ ಸಭೆಯು ಗುರುವಾರ ನಡೆಯಲಿದ್ದು, ಲೋಕಸಭೆಗೆ ಅಭ್ಯರ್ಥಿಗಳನ್ನು ನಿರ್ಧರಿಸಲಿದೆ” ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾಂಗ್ರೆಸ್ ಇದೂವರೆಗೆ ಯಾವುದೇ ಅಭ್ಯರ್ಥಿಗಳನ್ನು ಹೆಸರಿಸಿಲ್ಲ. ಕರ್ನಾಟಕವು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ಗುರುತಿಸಲಾಗುತ್ತಿದ್ದು, ಅಂತಿಮವಾಗಿ ಕೇಂದ್ರ ಚುನಾವಣ ಸಮಿತಿಯು ಪಟ್ಟಿಯನ್ನು ಬಿಡುಗಡೆ ಮಾಡಲಿದೆ.
ಅಮೇಠಿಯಿಂದ ರಾಹುಲ್ ಗಾಂಧಿ ಸ್ಪರ್ಧೆ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉ.ಪ್ರ.ದ ಅಮೇಠಿಯಿಂದಲೂ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಜತೆಗೆ ಸೋನಿಯಾ ಗಾಂಧಿ ಪ್ರತಿನಿಧಿಸುವ ರಾಯ್‌ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡುವುದು ನಿಚ್ಚಳವಾಗಿದೆ. ದಿಲ್ಲಿಯಲ್ಲಿ ಕಾಂಗ್ರೆಸ್ ವರಿಷ್ಠರ ಜತೆಗೆ ಸಭೆ ನಡೆಸಿದ ಅಮೇಠಿಗೆ ವಾಪಸಾದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಸಿಂಘಾಲ್ ಈ ಘೋಷಣೆ ಮಾಡಿದ್ದಾರೆ. ರಾಹುಲ್ ಗಾಂಧಿ 2002ರಿಂದ ಅಮೇಠಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಆದರೆ 2019 ಸ್ಮತಿ ಇರಾನಿ ಎದುರು ಸೋಲು ಕಂಡಿದ್ದರು.
ರಾಹುಲ್‌ಗೆ ಇ.ಸಿ. ಎಚ್ಚರಿಕೆ
ಸಾರ್ವಜನಿಕ ಸಭೆ, ರ್ಯಾಲಿಗಳಲ್ಲಿ ನೀಡುವ ಹೇಳಿಕೆ ಬಗ್ಗೆ ಜಾಗರೂಕತೆ ವಹಿಸಿ, ಇಲ್ಲವಾದಲ್ಲಿ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚುನಾವಣೆ ಆಯೋಗ (ಇ.ಸಿ) ಎಚ್ಚರಿಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಈ ಹಿಂದೆ ರಾಹುಲ್ ಪನೌತಿ (ಕೆಟ್ಟ ಶಕುನ), ಪಿಕ್‌ಪಾಕೆಟ್ ಪದಗಳನ್ನು ಬಳಸಿದ್ದ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ ಎಂದೂ ತಿಳಿದುಬಂದಿದೆ. ರಾಜಕೀಯ ಪಕ್ಷಗಳಿಗೆ ಹಾಗೂ ಈ ಹಿಂದೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ, ಆಯೋಗದಿಂದ ನೋಟಿಸ್ ಜಾರಿಗೊ ಳಿಸಲಾಗಿದ್ದ ರಾಜಕೀಯ ನಾಯಕರಿಗೆ ಮಾ.1ರಂದು ಚುನಾವಣೆ ಆಯೋಗ ಈ ಎಚ್ಚರಿಕೆಗಳನ್ನು ರವಾನಿಸಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ಪನೌತಿ- ಪಿಕ್‌ಪಾಕೆಟ್ ವಿಚಾರವಾಗಿ ರಾಹುಲ್ ಅವರಿಗೆ ಇ.ಸಿ. ನೋಟಿಸ್ ಜಾರಿಗೊಳಿಸಿತ್ತು.
ಅಮೇಠಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಳಿಸಲು ವಿಳಂಬ ಮಾಡುತ್ತಿದೆ. ಇದು ಕಾಂಗ್ರೆಸ್‌ನ ಸೋಲಿನ ಮುನ್ಸೂಚನೆಯಾಗಿದೆ.
ಸ್ಮತಿ ಇರಾನಿ, ಅಮೇಠಿ ಸಂಸದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.