Congress;ಕೋಲಾರದಲ್ಲಿ ‘ಮುಖ್ಯಮಂತ್ರಿ’ ಡಿ.ಕೆ.ಶಿವಕುಮಾರ್ ಎಂದ ರಾಹುಲ್ ಗಾಂಧಿ!
ಸಂಭೋದಿಸುವ ವೇಳೆ ಸಿದ್ದರಾಮಯ್ಯ ಹುದ್ದೆಯೇ ಬದಲು !!
Team Udayavani, Apr 17, 2024, 5:23 PM IST
ಕೋಲಾರ: ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎನ್ನುವ ಹಲವು ಚರ್ಚೆಗಳ ನಡುವೆ ರಾಹುಲ್ ಗಾಂಧಿ ಅವರು ಅರಿವಿಗೆ ಬಾರದಂತೆ ಆಡಿದ ಮಾತೀಗ ಭಾರೀ ಚರ್ಚೆಗೆ ಗುರಿಯಾಗಿದೆ.
ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಗೇಟ್ ನಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕರ್ನಾಟಕ ಜನರಿಗೆ ನಮಸ್ಕಾರ ಎಂದು ಕನ್ನಡದಲ್ಲಿ ಮಾತು ಆರಂಭಿಸಿದರು. ಆ ಬಳಿಕ ಕಾಂಗ್ರೆಸ್ ಪ್ರಬಲ ನಾಯಕರಿಬ್ಬರ ಹುದ್ದೆಗಳನ್ನೇ ಬದಲಿಸಿ ಸಂಭೋದಿಸಿದರು.
ಖರ್ಗೆ ಜಿ, ಕಾಂಗ್ರೆಸ್ ಅಧ್ಯಕ್ಷ ಸಿದ್ದರಾಮಯ್ಯ ಜಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿ, ಕೆ.ಎಚ್. ಮುನಿಯಪ್ಪ ಜಿ ಎಂದು ಭಾಷಣ ಆರಂಭಿಸಿದರು. ಇದು ಬಿಜೆಪಿ, ಜೆಡಿಎಸ್ ಮತ್ತು ಟ್ರೋಲ್ ಮಾಡುವವರಿಗೆ ದೊಡ್ಡ ಆಹಾರವಾಗಿ ಪರಿಣಮಿಸಿದೆ.
ತಮ್ಮ ಭಾಷಣದ ಉದ್ದಕ್ಕೂ ಬಿಜೆಪಿ ಮತ್ತು ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರಾದರೂ ಎಲ್ಲಕ್ಕಿಂತ ಹೆಚ್ಚು ಆದ್ಯತೆ ಅವರು ಅರಿವಿಗೆ ಬಾರದೆ ಹುದ್ದೆಗಳ ಬದಲಾವಣೆ ಮಾಡಿ ಸಂಬೋಧಿಸಿರುವುದು ನಾನಾ ಚರ್ಚೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.