Election Commissioner ರಾಜೀನಾಮೆಗೆ ಭಿನ್ನಮತ ಕಾರಣ?: ವಿಪಕ್ಷ ಪ್ರಹಾರ
Team Udayavani, Mar 11, 2024, 6:12 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆ ಘೋಷಣೆಗೆ ಕೆಲವು ದಿನಗಳು ಬಾಕಿ ಇರುವಂತೆಯೇ ಚುನಾವಣ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ ನೀಡಿರುವುದಕ್ಕೆ ವಿಪಕ್ಷಗಳು ಕಳವಳ ವ್ಯಕ್ತಪಡಿಸಿವೆ. ರಾಜೀನಾಮೆಗೆ ಕಾರಣ ಸಿಇಸಿ ಜತೆಗಿನ ಭಿನ್ನಾಭಿಪ್ರಾಯವೋ, ಪ್ರಧಾನಿ ಮೋದಿ ಜತೆಗಿನ ಭಿನ್ನಾಭಿಪ್ರಾಯವೋ ಎಂದೂ ಪ್ರಶ್ನಿಸಿವೆ.
ಈ ಬಗ್ಗೆ ಟ್ವೀಟ್ ಮಾಡಿ ರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಈಗ ದೇಶದಲ್ಲಿ ಒಬ್ಬರೇ ಚುನಾವಣ ಆಯುಕ್ತರಿದ್ದಾರೆ. ಸಧ್ಯದಲ್ಲೇ ಲೋಕಸಭೆ ಚುನಾವಣೆ ಘೋಷಣೆಯಾಗಲಿದೆ. ನಾನು ಈ ಮೊದಲೇ ಹೇಳಿದಂತೆ ನಮ್ಮ ದೇಶದಲ್ಲಿನ ಸ್ವತಂತ್ರ ಸಂಸ್ಥೆಗಳನ್ನು ಕಾಪಾಡದಿದ್ದರೆ ದೇಶ ನಿರಂಕುಶ ಪ್ರಭುತ್ವಕ್ಕೆ ಒಳಗಾಗುತ್ತದೆ’ ಎಂದು ಹೇಳಿದ್ದಾರೆ.
ವಿಪಕ್ಷ ನಾಯಕರಾದ ಉದ್ಧವ್ ಠಾಕ್ರೆ, ಶರದ್ ಪವಾರ್, ಮಮತಾ ಬ್ಯಾನರ್ಜಿ, ಸಂಜಯ್ ರಾವತ್ ಸಹ ಗೋಯಲ್ ರಾಜೀನಾಮೆ ಸಂಬಂಧ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
35 ವರ್ಷಗಳಲ್ಲಿ 40 ಕಡೆ ಕೆಲಸ!: ಚುನಾವಣ ಆಯು ಕ್ತರಾಗಿ ಆಯ್ಕೆಯಾಗುವ ಮೊದಲು ಗೋಯಲ್ 35 ವರ್ಷಗಳಲ್ಲಿ 40 ಕಡೆ ನೇಮಕಗೊಂಡು ಕರ್ತವ್ಯ ನಿರ್ವಹಿಸಿದ್ದಾರೆ. 1987ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾ ಗಿರುವ ಗೋಯಲ್, ನಗರ ಪಾಲಿಕೆ, ಸಂಸ್ಕೃತಿ ಸಚಿವಾಲಯ, ಬೃಹತ್ ಕೈಗಾರಿಕೆ, ಹಣಕಾಸು, ನಗರಾಭಿವೃದ್ಧಿ ಸೇರಿದಂತೆ 40 ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ.
ರಾಜೀನಾಮೆಗೆ ಭಿನ್ನಮತ ಕಾರಣ?
ಗೋಯಲ್ ರಾಜೀನಾಮೆ ಸಲ್ಲಿಸಿರುವುದಕ್ಕೆ ವೈಯಕ್ತಿಕ ಕಾರಣಗಳನ್ನೂ ನೀಡಿದ್ದರೂ, ಮುಖ್ಯ ಚುನಾವಣ ಆಯುಕ್ತ ರಾಜೀವ್ ಕುಮಾರ್‌ರೊಂದಿಗಿನ ಭಿನ್ನಾಭಿಪ್ರಾಯವೇ ಅವರ ರಾಜೀನಾಮೆಗೆ ಕಾರಣ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಗೋಯಲ್ ಆರೋ ಗ್ಯವಾಗಿದ್ದರು. ಯಾವುದೇ ಕೌಟುಂಬಿಕ ಸಮಸ್ಯೆಯಿರಲಿಲ್ಲ ಎಂದು ಅವರ ಸ್ನೇಹಿತರು ಹೇಳಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಮಾ.15ಕ್ಕೆ ಇಬ್ಬರು ಚುನಾವಣ ಆಯುಕ್ತರ ನೇಮಕ: ಮೂಲಗಳು
ಇಬ್ಬರು ಚುನಾವಣ ಆಯುಕ್ತರನ್ನು ಮಾ.15ರಂದು ನೇಮಕ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅರುಣ್ ಗೋಯಲ್ ರಾಜೀನಾಮೆ ನೀಡಿದ ಬಳಿಕ 2 ಚುನಾವಣ ಆಯುಕ್ತರ ಸ್ಥಾನ ಖಾಲಿಯಾಗಿದ್ದು, ಇವರ ನೇಮಕಾತಿಗಾಗಿ ಆಯ್ಕೆ ಸಮಿತಿ ಶೀಘ್ರವೇ ಸಭೆ ನಡೆಸಲಿದ್ದು, ಮಾ.15ರಂದು ನೇಮಕಾತಿ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಶೀಘ್ರದಲ್ಲೇ ಲೋಕಸಭೆ ಚುನಾವಣೆ ಘೋಷಣೆಯಾಗಬೇಕಿದ್ದು, ಮುಖ್ಯ ಚುನಾವಣ ಆಯುಕ್ತರು ಮಾತ್ರ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.