55 ವರ್ಷ ಆಳಿದರೂ ಕಾಂಗ್ರೆಸ್ ಶ್ರೀಮಂತವಾಗಲಿಲ್ಲ : ಪ್ರಿಯಾಂಕಾ
ಹಿಮಾಚಲ ಸರಕಾರ ಕೆಡವಲು ಮೋದಿ ಹಣ ಬಳಕೆ
Team Udayavani, May 28, 2024, 6:30 AM IST
ಶಿಮ್ಲಾ: ದೇಶದಲ್ಲಿ 55 ವರ್ಷಗಳ ಕಾಲ ಆಡಳಿತ ನಡೆಸಿದರೂ ಕಾಂಗ್ರೆಸ್ ಅತ್ಯಂತ ಶ್ರೀಮಂತ ಪಕ್ಷವಾಗಲು ಸಾಧ್ಯವಾಗಲಿಲ್ಲ. ಆದರೆ 2014ರಿಂದ ಸತತವಾಗಿ 10 ವರ್ಷ ಅಧಿಕಾರ ನಡೆಸಿದ ಬಿಜೆಪಿ ಶ್ರೀಮಂತ ಪಕ್ಷವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಆರೋಪಿಸಿದ್ದಾರೆ. ಚಂಬಾದಲ್ಲಿ ಮಾತನಾಡಿದ ಅವರು ಹೇಗಾದರೂ ಅಧಿಕಾರಕ್ಕೆ ಬಂದು, ಭ್ರಷ್ಟಾಚಾರ ಮಾಡಬೇಕು, ಹಣಬಲದಿಂದ ಶಾಸಕರಿಗೆ ಆಮಿಷ ಒಡ್ಡುವುದು, ದೇವರ ಹೆಸರಿನಲ್ಲಿ ಜನರ ಹಾದಿ ತಪ್ಪಿಸುವುದು ಇದು ಮೋದಿ ಆದಿಯಾಗಿ ಎಲ್ಲ ಬಿಜೆಪಿ ನಾಯಕರ ಉದ್ದೇಶವಾಗಿದೆ ಎಂದು ಆರೋಪಿಸಿದರು.
ಮೋದಿ ಹಣ ಬಲ ಪ್ರಯೋಗ: ಪ್ರಧಾನಿ ನರೇಂದ್ರ ಮೋದಿ ಹಣ ಬಲದಿಂದ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರಕಾರವನ್ನು ಕೆಡವಲು ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಶಾಂತಿ ಬಯಸುವ ಈ ದೇವಭೂಮಿ ಹಿಮಾಚಲ ಪ್ರದೇಶದ ಜನ ಕಾಂಗ್ರೆಸ್ ಸರಕಾರವನ್ನು ಆಯ್ಕೆ ಮಾಡಿದ್ದಾರೆ. ಆದರೆ ಬಿಜೆಪಿ ಭ್ರಷ್ಟಾಚಾರ ಹಾಗೂ ಹಣಬಲದಿಂದ ಕಾಂಗ್ರೆಸ್ ಸರಕಾರವನ್ನು ಕೆಡವಲು ಹೊರಟಿದೆ. ಈ ಕುರಿತು ಹಿಮಾಚಲ ಪ್ರದೇಶದ ಸಾಕಷ್ಟು ಜನರಿಗೆ ಆಕ್ರೋಶವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.