Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ


Team Udayavani, May 3, 2024, 10:19 AM IST

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಗಾಯಿತ್ರಿ ಸಿದ್ದೇಶ್ವರ ರಾಜಕೀಯ ಹಿನ್ನೆಲೆಯುಳ್ಳ ಪ್ರತಿಷ್ಠಿತ ಕುಟುಂಬದ ಸದಸ್ಯೆ. ಮಾಜಿ
ಸಂಸದ ದಿ| ಜಿ. ಮಲ್ಲಿಕಾರ್ಜುನಪ್ಪ ಅವರ ಸೊಸೆ ಹಾಗೂ ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಪತ್ನಿ. ಗಾಯತ್ರಿ ಅವರ ತವರೂರು ಶಿವಮೊಗ್ಗ. ಇದುವರೆಗೆ
ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಇವರು ಇದೇ ಮೊದಲ ಬಾರಿ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದಾರೆ. 69 ವರ್ಷ ವಯೋಮಾನದ ಗಾಯಿತ್ರಿ ಲೋಕ ಸಮರದ ಆಖಾಡಕ್ಕಿಳಿದಿದ್ದು, “ಉದಯವಾಣಿ’ಜತೆ ಮಾತನಾಡಿದ್ದಾರೆ.

– ಚುನಾವಣಾ ಪ್ರಚಾರ ಹೇಗಿದೆ?
ಪ್ರಚಾರ ತುಂಬಾ ಚೆನ್ನಾಗಿ ನಡೆದಿದ್ದು ಎಲ್ಲ ಕಡೆಯಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭೆ ಕ್ಷೇತ್ರಗಳ ಗ್ರಾಮಗಳಿಗೆ
ಭೇಟಿ ನೀಡಿ ಪ್ರಚಾರ ಮಾಡುತ್ತಿದ್ದೇವೆ. ನನಗೆ ಚುನಾವಣೆ, ಪ್ರಚಾರ ಹೊಸದಲ್ಲ 28 ವರ್ಷಗಳಿಂದ ಹತ್ತಿರದಿಂದ ನೋಡುತ್ತ, ಪಕ್ಷದ ಕೆಲಸ ಮಾಡಿಕೊಂಡು
ಬಂದಿದ್ದೇನೆ. ಜನರ ಸ್ಪಂದನೆ ಗೆಲ್ಲುವ ವಿಶ್ವಾಸ ಮೂಡಿದೆ.

– ಚುನಾವಣೆ ಗೆಲ್ಲಲು ನಿಮ್ಮ ತಂತ್ರಗಾರಿಕೆ ಏನು?
ಗೆಲ್ಲಲು ತಂತ್ರಗಾರಿಕೆ ಏನಿಲ್ಲ. ದೇಶದ ಭದ್ರತೆ, ರಕ್ಷಣೆ ದೃಷ್ಟಿಯಿಂದ ಮೋದಿಯವರು ಇನ್ನೊಮ್ಮೆ ಪ್ರಧಾನಿಯಾಗಬೇಕೆಂದು ಜನ ತೀರ್ಮಾನಿಸಿ ಬೆಂಬಲಿಸುತ್ತಿದ್ದಾರೆ. ಇನ್ನು ಕೇಂದ್ರ ಸರ್ಕಾರದ ಹತ್ತು ಹಲವು ಜನಪರ ಯೋಜನೆಗಳ ಜತೆ ಮಾವ ದಿ|ಜಿ. ಮಲ್ಲಿಕಾರ್ಜುನಪ್ಪ ಹಾಗೂ ಪತಿ ಸಂಸದ ಜಿ.ಎಂ.
ಸಿದ್ದೇಶ್ವರ ಅವರು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕೆಲಸ, ಜನಸೇವೆ ಮತದಾರರ ಮನದಲ್ಲಿದೆ.

– ಪ್ರಚಾರದ ವೇಳೆ ಎದುರಿಸಿದ ಸವಾಲುಗಳೇನು?
ಪ್ರಚಾರದ ವೇಳೆ ಜನರು ಮಹಿಳೆಯರಿಗೆ ಹಾಗೂ ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ವಂತ ಉದ್ಯೋಗಕ್ಕಾಗಿ ಸಣ್ಣ ಕೈಗಾರಿಕೆಗಳ ಕ್ಲಸ್ಟರ್‌ ಅನುಷ್ಠಾನ, ಅಂತರ್ಜಲ ವೃದ್ಧಿಗಾಗಿ ಯೋಜನೆಗಳು ಆಗಬೇಕು ಎಂಬ ಬೇಡಿಕೆಗಳನ್ನು ಇಟ್ಟಿದ್ದಾರೆ. ಅವುಗಳನ್ನು ಆದ್ಯತೆ ಮೇರೆಗೆ ಈಡೇರಿಸಲು ಕ್ರಮ ವಹಿಸಲಾಗುವುದು. ಸಂಸದರು ಪ್ರತಿಯೊಂದು ಹಳ್ಳಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದರಿಂದ ಗಂಭೀರ ಸವಾಲು ಎದುರಾಗಿಲ್ಲ.

– ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನಿಮ್ಮ ಪರಿಕಲ್ಪನೆ ಹಾಗೂ ಭರವಸೆಗಳೇನು?
ದಾವಣಗೆರೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡುವ ಕನಸಿದೆ. ಗೆದ್ದ ಮೇಲೆ ಖಂಡಿತಾ ಮಹಿಳೆಯರ ಸಬಲೀಕರಣಕ್ಕಾಗಿ ವಿಶೇಷ
ಯೋಜನೆಗಳನ್ನು ಕ್ಷೇತ್ರಕ್ಕೆ ತರಬೇಕೆನ್ನುವ ತುಡಿತ ನನ್ನಲ್ಲಿದೆ. ಕೃಷಿಕರ, ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡುತ್ತೇನೆ.

– ಕ್ಷೇತ್ರದಲ್ಲಿ ನೀವು ಗುರುತಿಸಿದ ಐದು ಪ್ರಥಮ ಆದ್ಯತೆಯ ಕೆಲಸಗಳೇನು?
ದಾವಣಗೆರೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಬೇಕು. ಈಗಾಗಲೇ ಇರುವ ಸಾಫ್ಟವೇರ್‌ ಟೆಕ್ನಾಲಜಿ ಪಾರ್ಕ್‌ನ್ನು ವಿಸ್ತರಿಸಬೇಕು. ಇಂಡಸ್ಟ್ರಿಯಲ್‌ ಕಾರಿಡಾರ್‌ ನಿರ್ಮಿಸಬೇಕು. ಮಹಿಳೆಯರಿಗೆ, ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ವಂತ ಉದ್ಯೋಗಕ್ಕಾಗಿ ಸಣ್ಣ ಕೈಗಾರಿಕೆಗಳ ಕ್ಲಸ್ಟರ್‌ ಅನುಷ್ಠಾನಗೊಳಿಸಬೇಕು.
ಅಂತರ್ಜಲ ವೃದ್ಧಿಗೆ ಜಲ ಮರುಪೂರಣದಂಥ ಯೋಜನೆಗಳಿಗೆ ಒತ್ತು ನೀಡಬೇಕು.

– ಮೋದಿ ಅಲೆ ಅಥವಾ ಬೇರೆ ಯಾವ ಅಂಶಗಳು ನಿಮ್ಮ ಗೆಲುವಿಗೆ ಸಹಕಾರಿಯಾಗಲಿವೆ?
ಇಡೀ ಜಗತ್ತು ಇಂದು ಮೋದಿಜಿಯವರನ್ನು ಕೊಂಡಾಡುತ್ತಿದೆ. ಅವರು ಭಾರತದ ಆರ್ಥಿಕತೆಯನ್ನು ವಿಶ್ವದಲ್ಲಿ 5ನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ. ಕಳೆದ 28 ವರ್ಷಗಳಲ್ಲಿ ನಮ್ಮ ಕುಟುಂಬ ಇಡೀ ಲೋಕಸಭೆ ಕ್ಷೇತ್ರದ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದೆ. ನನ್ನ ಪತಿ ಜಿ.ಎಂ. ಸಿದ್ದೇಶ್ವರ ಕಳೆದ 20 ವರ್ಷಗಳಲ್ಲಿ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿದ್ದಾರೆ. ಸಿದ್ದೇಶ್ವರ ಕ್ಷೇತ್ರದ 1260ಹಳ್ಳಿಗಳಿಗೆ ಕನಿಷ್ಠ ಐದಾರು ಬಾರಿ ಭೇಟಿ ನೀಡಿದ್ದಾರೆ. ಪ್ರತಿ ಹಳ್ಳಿಗಳಲ್ಲಿ 20-25 ಕಾರ್ಯಕರ್ತರನ್ನು ಹೆಸರಿಸಿ ಮಾತನಾಡುವಷ್ಟು ಕ್ಷೇತ್ರದಲ್ಲಿ ಬೇರು ಬಿಟ್ಟಿದ್ದಾರೆ. ಪ್ರತಿಯೊಂದು ಹಳ್ಳಿಗಳಿಗೆ ಒಂದಿಲ್ಲೊಂದು ಕಾಮಗಾರಿಗೆ ಅನುದಾನ ನೀಡಿ ಅಭಿವೃದ್ಧಿ ಮಾಡಿ, ನಿರಂತರ ಸಂಪರ್ಕದಲ್ಲಿದ್ದಾರೆ. ಇವೆಲ್ಲವೂ ಗೆಲುವಿಗೆ ಸಹಕಾರಿಯಾಗಲಿವೆ.

– ಜನ ನಿಮ್ಮನ್ನು ಏಕೆ ಬೆಂಬಲಿಸಬೇಕು?
ನಮ್ಮ ಕುಟುಂಬ ಕ್ಷೇತ್ರದ ಜನರೊಂದಿಗೆ ಹೊಂದಿರುವ ನಿರಂತರ ಸಂಪರ್ಕ, ಕಳೆದ 28 ವರ್ಷಗಳಲ್ಲಿ ಜನರಿಗೆ ನಾವು ಸ್ಪಂಧಿಸಿರುವ ರೀತಿ, ಕೇಂದ್ರದಲ್ಲಿ ಕಳೆದ 10 ವರ್ಷಗಳಲ್ಲಿ ಮೋದಿಜಿಯವರ ಯೋಜನೆಯಿಂದ ದೇಶದಲ್ಲಿ ಆಗಿರುವ ಸುಧಾರಣೆ ಜನರ ಮುಂದಿದೆ. ಇದಲ್ಲದೇ ನನ್ನ ಪತಿ, ಸಂಸದ ಜಿ.ಎಂ. ಸಿದ್ದೇಶ್ವರ ಅವರು ಅನೇಕ ಯೋಜನೆಗಳ ಮೂಲಕ ಕ್ಷೇತ್ರದ ಅಭಿವೃದ್ಧಿ ಚಿತ್ರಣವನ್ನೇ ಬದಲಿಸಿರುವುದು ಜನರ ಕಣ್ಮುಂದಿದೆ. ಈ ಎಲ್ಲ ಕಾರಣಗಳಿಂದ ಜನತೆ ಖಂಡಿತಾ ನನಗೆ ಬೆಂಬಲಿಸುತ್ತಾರೆ.

– ನಿಮ್ಮ ಎದುರಾಳಿ ಯಾರು, ಅವರ ಬಗ್ಗೆ ನಿಮ್ಮ ಅಭಿಪ್ರಾಯವೇನು?
ಚುನಾವಣೆ ಎಂದು ಬಂದಾಗ ಎದುರಾಳಿ ಕಾಂಗ್ರೆಸ್‌ ಪಕ್ಷ. ಕಾಂಗ್ರೆಸ್‌ ಅಭ್ಯರ್ಥಿ ಅವರ ಪಕ್ಷದ ಯೋಜನೆ, ಅವರ ಸೇವೆಗಳನ್ನು ಮತದಾರರ ಮುಂದೆ
ಪ್ರಸ್ತಾಪಿಸುತ್ತಿದ್ದಾರೆ. ನಾವು ನಮ್ಮ ಪಕ್ಷದ ಪ್ರಣಾಳಿಕೆ, ಯೋಜನೆಗಳ ಬಗ್ಗೆ ಹೇಳುತ್ತಿದ್ದೇವೆ. ಆದರೆ ಒಂದೇ ಕುಟುಂಬದಲ್ಲಿ ಮೂವರಿಗೆ ಅಧಿಕಾರ
ಕೇಂದ್ರೀಕರಣವಾಗುವುದನ್ನು ಮತದಾರರು ಒಪ್ಪುತ್ತಿಲ್ಲ.

ಟಾಪ್ ನ್ಯೂಸ್

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.