Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್
Team Udayavani, May 13, 2024, 8:05 PM IST
ಹೈದರಾಬಾದ್: ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಸೋಮವಾರ ಮತದಾನ ಕೇಂದ್ರದಲ್ಲಿ ಮುಸ್ಲಿಂ ಮಹಿಳಾ ಮತದಾರರ ಗುರುತು ಚೀಟಿಗಳನ್ನು ಪರಿಶೀಲಿಸುತ್ತಿರುವ ವಿಡಿಯೋ ವಿವಾದವನ್ನು ಹುಟ್ಟುಹಾಕಿದೆ. ಪ್ರಕರಣದ ಬಳಿಕ ಮಾಧವಿ ಲತಾ ವಿರುದ್ಧ ಮಲಕಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೈರಲ್ ಆದ ವಿಡಿಯೋದಲ್ಲಿ, ಮಾಧವಿ ಲತಾ ಅವರು ಬುರ್ಖಾ ಧರಿಸಿದ ಮುಸ್ಲಿಂ ಮಹಿಳೆಯರನ್ನು ಪರಿಶೀಲನೆ ನಡೆಸಿದ್ದು, ‘ನಿಖಾಬ್’ (ಮುಖದ ಮುಸುಕನ್ನು) ತೆಗೆದುಹಾಕುವಂತೆ ನಿರ್ದಿಷ್ಟವಾಗಿ ಕೇಳಿದ್ದಾರೆ. ಎಷ್ಟು ವರ್ಷಗಳ ಹಿಂದೆ ನೀವು ಮತದಾರರ ಕಾರ್ಡ್ ಮಾಡಿದ್ದೀರಿ? ಎಂದು ಪ್ರಶ್ನಿಸಿ ಹೆಚ್ಚುವರಿ ಪರಿಶೀಲನೆಗಾಗಿ ಆಧಾರ್ ಕಾರ್ಡ್‌ಗಳನ್ನು ಸಹ ಕೇಳಿದ್ದಾರೆ.
ತನ್ನ ಕ್ರಮವನ್ನು ಸಮರ್ಥಿಸಿಕೊಂಡ ಮಾಧವಿ ಲತಾ, “ನಾನು ಅಭ್ಯರ್ಥಿ. ಕಾನೂನಿನ ಪ್ರಕಾರ ನಾನೊಬ್ಬ ಮಹಿಳೆಯಾಗಿ, ಮುಖಕ್ಕೆ ಮಾಸ್ಕ್ ಹಾಕಿಕೊಂಡವರ ಗುರುತಿನ ಚೀಟಿಗಳನ್ನು ಪರಿಶೀಲಿಸುವ ಹಕ್ಕು ಇದೆ. ನಾನು ಅವರ ಬಳಿ ವಿನಂತಿಸಿದ್ದೇನೆ ಮಾತ್ರ. ದಯವಿಟ್ಟು ಐಡಿ ಕಾರ್ಡ್‌ಗಳನ್ನು ಪರಿಶೀಲಿಸಬಹುದೇ ಎಂದು ಕೇಳಿದ್ದೇನೆ. ಯಾರಾದರೂ ಅದನ್ನು ದೊಡ್ಡ ವಿವಾದ ಮಾಡಲು ಬಯಸಿದರೆ, ಅವರು ಹೆದರಿದ್ದಾರೆ ಎಂದರ್ಥ” ಎಂದು ಹೇಳಿದ್ದಾರೆ.
ಮಾಧವಿ ಲತಾ ಅವರು ಹೈದರಾಬಾದ್‌ನ ಹಾಲಿ ಸಂಸದ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಸಮರ ಸಾರಿ ದೇಶದ ಗಮನ ಸೆಳೆದಿದ್ದಾರೆ. ಬಿಆರ್‌ಎಸ್ ನಾಯಕ ಗದ್ದಂ ಶ್ರೀನಿವಾಸ್ ಯಾದವ್ ಕೂಡ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.