I.N.D.I.A. ಸಖ್ಯ ಬಿಡದ್ದಕ್ಕೆ ಜೈಲುವಾಸ: ಉಲ್ಗುಳನ್‌ ನ್ಯಾಯ್‌ ರ್‍ಯಾಲಿಯಲ್ಲಿ ಖರ್ಗೆ

ಕೇಜ್ರಿ, ಸೊರೇನ್‌ ಹೆಸರಲ್ಲಿ ಖಾಲಿ ಕುರ್ಚಿ!... ದಿಢೀರ್‌ ಅನಾರೋಗ್ಯ:ರ್‍ಯಾಲಿಗೆ ರಾಹುಲ್‌ ಗೈರು

Team Udayavani, Apr 22, 2024, 12:11 AM IST

1eqwewqe

ರಾಂಚಿ: “ಝಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ಇಂಡಿಯಾ ಒಕ್ಕೂಟವನ್ನು ತೊರೆಯಲಿಲ್ಲ ಎಂಬ ಕಾರಣಕ್ಕೆ ಅವರನ್ನು ಜೈಲಿಗಟ್ಟಲಾಯಿತು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ರಾಂಚಿಯಲ್ಲಿ ರವಿವಾರ ನಡೆದ ವಿಪಕ್ಷಗಳ ಇಂಡಿಯಾ ಒಕ್ಕೂಟದ “ಉಲ್ಗುಳನ್‌ ನ್ಯಾಯ್‌’ ರ್‍ಯಾಲಿಯಲ್ಲಿ ಮಾತನಾಡಿದ ಖರ್ಗೆ, “ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಸೊರೇನ್‌ಗೆ “ಭಯ ಹುಟ್ಟಿಸುವ’ ಎಲ್ಲ ಪ್ರಯತ್ನವನ್ನೂ ಮಾಡಿತು. ಆದರೆ ಸೊರೇನ್‌ ಒಬ್ಬ ದಿಟ್ಟ ವ್ಯಕ್ತಿ. ಬಿಜೆಪಿ ಮುಂದೆ ಮಂಡಿಯೂರುವ ಬದಲು ಜೈಲಿಗೆ ಹೋದರೂ ಚಿಂತೆಯಿಲ್ಲ ಎಂದು ನಿರ್ಧರಿಸಿದರು. ಈ ರೀತಿ ಬುಡಕಟ್ಟು ಜನಾಂಗೀಯರಿಗೆ ಭಯ ಹುಟ್ಟಿಸುವ ಕೆಲಸ ಮುಂದುವರಿಸಿದರೆ ಬಿಜೆಪಿ ಸಂಪೂರ್ಣ ನಿರ್ಮೂಲನೆಯಾಗಲಿದೆ’ ಎಂದು ಹೇಳಿದ್ದಾರೆ.

ಇದೇ ವೇಳೆ, ಸಂಸತ್‌ ಭವನ ಉದ್ಘಾಟನೆ ಹಾಗೂ ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡದೇ ಇರುವ ಮೂಲಕ ಪ್ರಧಾನಿ ಮೋದಿಯವರು ಕೇವಲ ರಾಷ್ಟ್ರಪತಿಗಳಿಗಷ್ಟೇ ಅಲ್ಲ, ಇಡೀ ಬುಡಕಟ್ಟು ಸಮುದಾಯಕ್ಕೇ ಅವಮಾನ ಮಾಡಿದ್ದಾರೆ ಎಂದೂ ಖರ್ಗೆ ಆರೋಪಿಸಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಸೀಟುಗಳ ಸಂಖ್ಯೆ 150- 180ಕ್ಕಿಳಿಯಲಿದೆ ಎಂದೂ ಖರ್ಗೆ ಭವಿಷ್ಯ ನುಡಿದಿದ್ದಾರೆ.

ಪ್ರಜಾಪ್ರಭುತ್ವ ಕೊನೆಯಾಗಲಿದೆ
ಇದಕ್ಕೂ ಮುನ್ನ, ಮಧ್ಯಪ್ರದೇಶದ ಸಾತ್ನಾದಲ್ಲಿ ಚುನಾವಣ ರ್ಯಾಲಿಯಲ್ಲಿ ಮಾತನಾಡಿದ್ದ ಖರ್ಗೆ, “ಮೋದಿ-ಶಾ ಸರಕಾರ್‌ ಮತ್ತೆ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಪ್ರಜಾಪ್ರಭುತ್ವವು ಕೊನೆಯಾಗುತ್ತದೆ’ ಎಂದು ಆರೋಪಿಸಿದ್ದಾರೆ.

ದಿಢೀರ್‌ ಅನಾರೋಗ್ಯ: ರ್‍ಯಾಲಿಗೆ ರಾಹುಲ್‌ ಗೈರು
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ದಿಢೀರ್‌ ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ರಾಂಚಿಯ ಮೆಗಾ ರ್‍ಯಾಲಿಗೆ ಅವರು ಗೈರಾಗಿದ್ದರು. ಅವರ ಬದಲಾಗಿ ಖರ್ಗೆ ಅವರೇ ರ್‍ಯಾಲಿ ಉದ್ದೇಶಿಸಿ ಭಾಷಣ ಮಾಡಿದರು.

ಮೋದಿಯವರು ದೇಶಕ್ಕೆ ಕೊಟ್ಟಿದ್ದು ಬೆಲೆಯೇರಿಕೆ, ನಿರುದ್ಯೋಗ, ಬಡತನದ ಕೊಡುಗೆ. ಅವರು ಸುಳ್ಳುಗಳ ಫ್ಯಾಕ್ಟರಿ, ಸುಳ್ಳಿನ ಉತ್ಪಾದಕ, ಸಗಟು ಮಾರಾಟಗಾರ ಮತ್ತು ವಿತರಕ. ಈ ಸರ್ವಾಧಿಕಾರಿಗೆ ನಿರ್ಗಮನದ ಬಾಗಿಲು ತೋರಿಸುವ ಸಮಯ ಬಂದಿದೆ.
ತೇಜಸ್ವಿ ಯಾದವ್‌, ಆರ್‌ಜೆಡಿ ನಾಯಕ

ನನ್ನ ಪತಿಯನ್ನು ಜೈಲಿನಲ್ಲೇ ಕೊಲ್ಲಲು ಯತ್ನ: ಸುನೀತಾ
“ಬಿಜೆಪಿ ನನ್ನ ಪತಿಯನ್ನು ಕೊಲ್ಲಲು ಸಂಚು ರೂಪಿಸಿದೆ. ಇದೇ ಕಾರಣಕ್ಕಾಗಿ ಜೈಲಿನಲ್ಲಿ ಅವರಿಗೆ ಇನ್ಸುಲಿನ್‌ ನಿರಾಕರಿಸಲಾಗುತ್ತಿದೆ’ ಎಂದು ದಿಲ್ಲಿ ಅಬಕಾರಿ ನೀತಿ ಹಗರಣ ಸಂಬಂಧ ಜೈಲಿನಲ್ಲಿರುವ ಸಿಎಂ ಕೇಜ್ರಿವಾಲ್‌ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಆರೋಪಿಸಿದ್ದಾರೆ. ರಾಂಚಿಯ ರ್ಯಾಲಿಯಲ್ಲಿ ಮಾತನಾಡಿದ ಅವರು, “ನನ್ನ ಪತಿಯನ್ನು ಕೊಲ್ಲುವುದೇ ಬಿಜೆಪಿಯ ಉದ್ದೇಶ. ಸಕ್ಕರೆ ಕಾಯಿಲೆ ಇರುವ ಕೇಜ್ರಿವಾಲ್‌ ಅವರು 12 ವರ್ಷಗಳಿಂದ ಇನ್ಸುಲಿನ್‌ ಪಡೆ ಯುತ್ತಿದ್ದಾರೆ. ನಿತ್ಯ ಅವರಿಗೆ 50 ಯುನಿಟ್‌ ಇನ್ಸುಲಿನ್‌ ಅಗತ್ಯವಿದೆ. ಆದರೆ, ಜೈಲಲ್ಲಿ ಅವರಿಗೆ ಇನ್ಸುಲಿನ್‌ ನಿರಾಕರಿಸಲಾಗುತ್ತಿದೆ. ಜನರಿಗಾಗಿ ಸೇವೆ ಸಲ್ಲಿಸಿದ ಅವರನ್ನು ಯಾವುದೇ ಆರೋಪ ಸಾಬೀತಾಗದೇ ಜೈಲಿನಲ್ಲಿರಿಸಿದ್ದಾರೆ. ವಿಪಕ್ಷಗಳ ಇಂಡಿಯಾ ಒಕ್ಕೂಟವು ಬಿಜೆಪಿ ಸರ್ವಾಧಿಕಾರದ ವಿರುದ್ಧ ಹೋರಾಡಿ, ಗೆಲ್ಲಲಿದೆ’ ಎಂದಿದ್ದಾರೆ.

ಕೇಜ್ರಿ, ಸೊರೇನ್‌ ಹೆಸರಲ್ಲಿ ಖಾಲಿ ಕುರ್ಚಿ!
ಇಂಡಿಯಾ ಒಕ್ಕೂಟದ ರ್ಯಾಲಿ ವೇಳೆ ವೇದಿಕೆಯಲ್ಲಿ “ಎರಡು ಖಾಲಿ ಕುರ್ಚಿ’ಗಳನ್ನು ಇರಿಸಲಾಗಿತ್ತು. ಈ ಖಾಲಿ ಕುರ್ಚಿಗಳಲ್ಲಿ ಜೈಲಲ್ಲಿರುವ ದಿಲ್ಲಿ ಸಿಎಂ ಕೇಜ್ರಿವಾಲ್‌ ಮತ್ತು ಝಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಅವರ ಹೆಸರು ಬರೆಯಲಾಗಿತ್ತು. ಅಲ್ಲದೇ ರ್ಯಾಲಿಯಲ್ಲಿ ಸೇರಿದ್ದ ಬಹುತೇಕ ಕಾರ್ಯಕರ್ತರು “ಹೇಮಂತ್‌ ಸೊರೇನ್‌ ಅವರ ಚಿತ್ರವಿರುವ ಮುಖವಾಡ’ವನ್ನು ಧರಿಸಿ ಕುಳಿತಿದ್ದು ಕಂಡುಬಂತು. “ಜೈಲ್‌ ಕಾ ತಾಲಾ ಟೂಟೇಗಾ, ಹೇಮಂತ್‌ ಸೊರೇನ್‌ ಚೂಟೇಗಾ’ (ಜೈಲಿನ ಬೀಗ ತೆರೆಯುತ್ತದೆ, ಹೇಮಂತ್‌ ಸೊರೇನ್‌ ಬಿಡುಗಡೆಯಾಗುತ್ತಾರೆ), ಝಾರ್ಖಂಡ್‌ ಜೂಕೇಗಾ ನಹೀಂ (ಝಾರ್ಖಂಡ್‌ ಯಾರಿಗೂ ಮಣಿಯುವುದಿಲ್ಲ) ಎಂಬ ಘೋಷಣೆಗಳೂ ಮೊಳಗಿದವು.

ಟಾಪ್ ನ್ಯೂಸ್

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.