LS Election; ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ: ಅಭ್ಯರ್ಥಿಯಾಗುವ ಎಲ್ಲ ಸಾಧ್ಯತೆ
Team Udayavani, Mar 11, 2024, 11:41 PM IST
ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆಯವರು ಮಾ.12ರ ಸಂಜೆ 4 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಲಿದ್ದಾರೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೂ ಕೂಡ ಇವರೇ ಆಗುವ ಎಲ್ಲ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರ್ಪಡೆಯಾಗುತ್ತಿರುವ ಬಗ್ಗೆ ‘ಉದಯವಾಣಿ’ಗೆ ಜಯಪ್ರಕಾಶ ಹೆಗ್ಡೆಯವರೇ ಖಚಿತಪಡಿಸಿದ್ದಾರೆ.
ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ ಇವರು ಅನಂತರ ಕಾಂಗ್ರೆಸ್ ಪಕ್ಷ ಸೇರಿ 2012ರಲ್ಲಿ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದು ಸಂಸದರಾಗಿದ್ದರು.2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಅನಂತರ ನಡೆದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಗೆ ಸೇರಿಕೊಂಡಿದ್ದರು. ಬಿಜೆಪಿ ಸರಕಾರ ಇದ್ದಾಗ ಇವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿತ್ತು. ರಾಜ್ಯದಲ್ಲಿ ಬಹು ಚರ್ಚಿತ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚಿಗಷ್ಟೇ ಸರಕಾರಕ್ಕೆ ಸಲ್ಲಿಸಿದರು.
ಆಯೋಗದ ಅಧ್ಯಕ್ಷ ಅವಧಿ ಮುಗಿದ ಆನಂತರ ಕಾಂಗ್ರೆಸ್ ಸೇರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದರು. ಇದೀಗ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.