KPCC: ಮೋದಿ, ರಾಜನಾಥ್‌ಸಿಂಗ್ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು
Team Udayavani, Apr 25, 2024, 11:36 PM IST
ಬೆಂಗಳೂರು: “ಆಸ್ತಿ ಹಂಚಿಕೆಗೆ ಸಂಬಂಧಿಸಿ ಕಾಂಗ್ರೆಸ್ ಸಂಚು ರೂಪಿಸಿದ್ದು, ಬದುಕಿದ್ದಾಗಲೂ ಮತ್ತು ಸತ್ತ ಮೇಲೂ ತೆರಿಗೆ ವಿಧಿಸಲಿದೆ’ ಎಂದು ಆರೋಪಿಸಿರುವ ಪ್ರಧಾನಿ ವಿರುದ್ಧ ಕಾಂಗ್ರೆಸ್ ಚುನಾವಣ ಆಯೋಗಕ್ಕೆ ದೂರು ನೀಡಿದೆ.
ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣ ಪ್ರಚಾರದಲ್ಲಿ ಆಧಾರರಹಿತ ಆರೋಪ ಮಾಡಿದ್ದಾರೆ. ಮತದಾರರ ಓಲೈಕೆಗಾಗಿ ಇಂಥ ಸುಳ್ಳು ಹೇಳಿಕೆಗಳ ಮೂಲಕ ಜನರ ದಿಕ್ಕು ತಪ್ಪಿಸಲಾಗುತ್ತಿದೆ ಎಂದು ದೂರಿದೆ.
ಜತೆಗೆ, ರಕ್ಷಣ ಸಚಿವ ರಾಜನಾಥ್ ಸಿಂಗ್ ಚುನಾವಣ ಪ್ರಚಾರದ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಕ್ಷಣ ಇಲಾಖೆಯಲ್ಲೂ ಮುಸ್ಲಿಂ ಮೀಸಲಾತಿ ತರಲಿದೆ. ಈ ಬಗ್ಗೆ ತನ್ನ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಸುಳಿವು ನೀಡಿದೆ ಎಂದು ಹೇಳಿದ್ದಾರೆ. ಆದರೆ, ಪ್ರಣಾಳಿಕೆಯಲ್ಲಿ ಎಲ್ಲಿಯೂ ಆ ರೀತಿಯ ಭರವಸೆಯ ಉಲ್ಲೇಖ ಇಲ್ಲ. ಸುಳ್ಳು ಆರೋಪ ಮಾಡಿರುವ ಇಬ್ಬರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತ್ಯೇಕ ದೂರು ನೀಡಿ ಕಾಂಗ್ರೆಸ್ ಒತ್ತಾಯಿಸಿದೆ.
ಈ ಮಧ್ಯೆ, ಚುನಾವಣೆ ಬಳಿಕ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಅಂತ ಮೈತ್ರಿಪಕ್ಷಗಳು ಸುಳ್ಳು ಸುದ್ದಿ ಹರಡುತ್ತಿವೆ ಎಂದು ಆರೋಪಿಸಿ, ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಮುಖ್ಯ ಚುನಾವಣ ಆಯೋಗಕ್ಕೆ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ದೂರು ನೀಡಿ¨ªಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.