Loksabha Election: ನರಗುಂದ- ಈ ಬಾರಿಯೂ ಕಷ್ಟವಾಗುವುದೇ ಕೈಗೆ?
Team Udayavani, Jun 3, 2024, 2:45 PM IST
ಉದಯವಾಣಿ ಸಮಾಚಾರ
ನರಗುಂದ:ಬಾಗಲಕೋಟೆ ಲೋಕಸಭೆ ಕ್ಷೇತ್ರ ವ್ಯಾಪ್ತಿಗೆ ಸೇರುವ ಗದಗ ಜಿಲ್ಲೆ ನರಗುಂದ ವಿಧಾನಸಭಾ ಕ್ಷೇತ್ರ ಬಂಡಾಯದ ನೆಲವಾಗಿದ್ದು, ರೈತಪರ ಹೋರಾಟಗಳ ಕರ್ಮಭೂಮಿಯಾಗಿದೆ. ಈ ನೆಲದಲ್ಲಿ ನಡೆದ ಹೋರಾಟಗಳಿಗೆ ಸರ್ಕಾರಗಳೇ ಬೆಚ್ಚಿ ಬಿದ್ದಿರುವ ಉದಾಹರಣೆಗಳಿವೆ. ಇಲ್ಲಿಂದಲೇ ಆರಂಭವಾದ ಹೋರಾಟಗಳು ರಾಜ್ಯವ್ಯಾಪಿ ಆವರಿಸಿರುವುದು ಇತಿಹಾಸ ಕಣ್ಮುಂದಿದೆ.
ಇದನ್ನೂ ಓದಿ:ದಸರಾ ಹಬ್ಬಕ್ಕೆ ಪ್ಯಾನ್ ಇಂಡಿಯಾ ಫೈಟ್: ʼಮಾರ್ಟಿನ್ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್
ಗದಗ ಜಿಲ್ಲೆಯ ಗದಗ, ನರಗುಂದ, ರೋಣ ತಾಲೂಕಿನ 90 ಗ್ರಾಮಗಳನ್ನು ಒಳಗೊಂಡಿರುವ ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡೂವರೆ ದಶಕಗಳಿಂದ ಕೈ-ಕಮಲದ ನಡುವಿನ ಪೈಪೋಟಿ ಮುಂದುವರಿದುಕೊಂಡು ಬಂದಿದೆ. ಆದರೆ ಕ್ಷೇತ್ರದ ಮರುವಿಂಗಡಣೆಯಾದ ನಂತರ ನಡೆದ ಮೂರು ಲೋಕಸಭಾ ಚುನಾವಣೆಯಲ್ಲಿ ನರಗುಂದ ವಿಧಾನಸಭಾ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿಗೇ ಲೀಡ್ ಕೊಟ್ಟಿರುವುದು ವಿಶೇಷ. ಮತ್ತು ಬಿಜೆಪಿ ಅಭ್ಯರ್ಥಿಯೇ ಗೆಲುವು ಸಾಧಿಸಿರುವುದು
ಗಮನಾರ್ಹ ಸಂಗತಿ.
ಪ್ರಸ್ತುತ ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದಿನ ಬಿಜೆಪಿ ಸರಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಸಿ.ಸಿ. ಪಾಟೀಲರು ಹಾಲಿ ಶಾಸಕರಾಗಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ 7,979 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಸಿ.ಸಿ. ಪಾಟೀಲರು ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕೂದಲೆಳೆ ಅಂತರದಿಂದ (ಕೇವಲ 1,791 ಮತಗಳ) ಗೆಲುವು ಸಾಧಿಸಿದ್ದರು. 2008ರಲ್ಲಿ ಕ್ಷೇತ್ರ ಮರುವಿಂಗಡಣೆಯಾದ ನಂತರ ನರಗುಂದ ವಿಧಾನಸಭಾ ಕ್ಷೇತ್ರ ಬಾಗಲಕೋಟೆ
ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರ್ಪಡೆಯಾಯಿತು.
ತದ ನಂತರ ನಡೆದ ಮೂರು ಲೋಕಸಭಾ ಕ್ಷೇತ್ರದಲ್ಲಿ ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯೇ ಲೀಡ್ ಪಡೆದಿದ್ದಾರೆ.ಬಿಜೆಪಿ ಅಭ್ಯರ್ಥಿ ಮತಗಳ ಅಂತರ ಹೆಚ್ಚಿಸಿಕೊಳ್ಳುತ್ತ ಸಾಗಿರುವುದು ಗಮನಾರ್ಹ ಸಂಗತಿ. 2009ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 48,815, ಕಾಂಗ್ರೆಸ್ ಅಭ್ಯರ್ಥಿ 38,264 ಮತಗಳನ್ನು ಪಡೆದಿದ್ದರು. ಬಿಜೆಪಿ ಅಭ್ಯರ್ಥಿ 10,551 ಮತಗಳ ಅಂತರ ಪಡೆದಿದ್ದರು. 2014ರ ಲೋಕಸಭಾ ಚುನಾವಣೆಯಲ್ಲೂ ಕೂಡ ಬಿಜೆಪಿ ಅಭ್ಯರ್ಥಿ 64,249 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ 51,567 ಮತಗಳನ್ನು ಪಡೆದಿದ್ದರು. ಮತಗಳ ಅಂತರ 12,682 ಆಗಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 73,118 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ 54,805 ಮತಗಳನ್ನು ಪಡೆದಿದ್ದರು. ಮತಗಳ ಅಂತರ 18,313ಕ್ಕೆ ಏರಿಕೆ ಆಗಿತ್ತು.
ಲೋಕಸಭಾ ಚುನಾವಣೆ ಲೆಕ್ಕಾಚಾರ ಏನು?: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪ ರ್ಧಿಸಿದ್ದ 14 ಪಕ್ಷಗಳ ಅಭ್ಯರ್ಥಿಗಳ ಪೈಕಿ ಬಿಜೆಪಿ 72,835 (ಶೇ. 48.48) ಮತಗಳನ್ನು ಪಡೆದರೆ, ಕಾಂಗ್ರೆಸ್ 71,044 (ಶೇ. 47.29) ಮತಗಳನ್ನು ಪಡೆದಿತ್ತು. ಈ ಬಾರಿ ಕಾಂಗ್ರೆಸ್‌ನ ಗ್ಯಾರಂಟಿ ಲಾಭ ಪಡೆದ ಮಹಿಳೆಯರು ಕಾಂಗ್ರೆಸ್‌ಗೆ ಅಧಿಕ ಮತಗಳನ್ನು ಚಲಾಯಿಸಲಿದ್ದಾರೆ ಎಂದು ಕಾಂಗ್ರೆಸ್ ಲೆಕ್ಕಾಚಾರ ಹಾಕಿ ಕುಳಿತಿದ್ದರೆ, ಪ್ರಧಾನಿ ನೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ಆಡಳಿತ, ಮೋದಿ ಹವಾ ಕಳೆದ ಮೂರು ಲೋಕಸಭಾ ಚುನಾವಣೆಗಿಂತಲೂ ಅಧಿಕ ಅಂತರದ ಮತಗಳು ಬಿಜೆಪಿ ಅಭ್ಯರ್ಥಿಗೆ ಬೀಳಲಿವೆ ಎಂಬ ಲೆಕ್ಕಾಚಾರ ಬಿಜೆಪಿ
ಪಾಳಯದಲ್ಲಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್. ಯಾವಗಲ್ ಅವರು ಅಲ್ಪಮತಗಳ ಅಂತರದಿಂದ ಸೋಲನುಭವಿಸಿದ್ದರು. ಆ ಸೋಲಿನ ಕಹಿ ಅನುಭವ ಮರೆಯಲು ಮತದಾರರು ಕಾಂಗ್ರೆಸ್‌ಗೆ ಅಧಿಕ ಮತಗಳನ್ನು ಹಾಕಬೇಕೆಂದು ನಿರ್ಧರಿಸಿ ಮತ ಚಲಾಯಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಸಂಪೂರ್ಣ ಅನುಷ್ಠಾನಗೊಂಡಿದ್ದು, ಮತದಾರರು ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟಿದ್ದಾರೆ.
*ಪ್ರವೀಣ ಯಾವಗಲ್, ಅಧ್ಯಕ್ಷ, ನರಗುಂದ ಬ್ಲಾಕ್ ಕಾಂಗ್ರೆಸ್
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಕೇಂದ್ರ ಸರಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಸಂಸದ ಪಿ.ಸಿ. ಗದ್ದಿಗೌಡರ ಶ್ರಮ ವಹಿಸಿದ್ದಾರೆ. ಸೌಮ್ಯ-ಶಾಂತ ಸ್ವಭಾವದ ಗದ್ದಿಗೌಡರ ಅವರು ಮತದಾರರ ಕಷ್ಟಗಳಲ್ಲಿ
ಭಾಗಿಯಾಗಿದ್ದಾರೆ. ನರೇಂದ್ರ ಮೋದಿ ಅವರ ಆಡಳಿತ, ಗದ್ದಿಗೌಡರ ಅವರ ವ್ಯಕ್ತಿತ್ವ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ.
*ಅಜ್ಜನಗೌಡ ಪಾಟೀಲ, ಅಧ್ಯಕ್ಷ, ನರಗುಂದ ಬಿಜೆಪಿ ಮಂಡಲ
*ಅರುಣಕುಮಾರ ಹಿರೇಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.