Seat Deal: ಲೋಕ ಸಮರಕ್ಕೆ ‘ಮಹಾ’ ಒಮ್ಮತ… ಯಾರು ಎಷ್ಟು ಕ್ಷೇತ್ರದಲ್ಲಿ ಸ್ಪರ್ಧೆ?
Team Udayavani, Mar 1, 2024, 12:08 PM IST
ಮುಂಬೈ: ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಹಾ ವಿಕಾಸ್ ಅಘಾಡಿ (ಎಂವಿಎ)ಯಲ್ಲಿ ಪರಸ್ಪರ ಒಮ್ಮತ ಮೂಡಿದೆ.
ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಶರದ್ ಪವಾರ್ ಅವರ ಮನೆಯಲ್ಲಿ ವಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಎಲ್ಲ 48 ಲೋಕಸಭಾ ಸ್ಥಾನಗಳ ಹಂಚಿಕೆ ಕುರಿತು ಚರ್ಚೆ ನಡೆಸಲಾಯಿತು. ಶರದ್ ಪವಾರ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಉನ್ನತ ನಾಯಕರು ಭಾಗವಹಿಸಿದ್ದರು.
ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ಹೇಳಿದ್ದು ಅದರಂತೆ ಶಿವಸೇನೆ 21 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ, ಕಾಂಗ್ರೆಸ್ 15 ಸ್ಥಾನಗಳಲ್ಲಿ ಸ್ಪರ್ಧಿಸಬಹುದು ಮತ್ತು ಎನ್‌ಸಿಪಿಯ ಶರದ್ ಪವಾರ್ ಬಣ ಒಂಬತ್ತು ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದರೆ, ಪ್ರಕಾಶ್ ಅಂಬೇಡ್ಕರ್ ನೇತೃತ್ವದ ಪಕ್ಷ ವಂಚಿತ್ ಬಹುಜನ ಅಘಾಡಿ (ವಿಬಿಎ) ಎರಡು ಸ್ಥಾನಗಳಲ್ಲಿ ಮತ್ತು ರಾಜು ಶೆಟ್ಟಿ ಅವರ ಸ್ವಾಭಿಮಾನಿ ಪಕ್ಷಕ್ಕೆ ಒಂದು ಸ್ಥಾನ ಸಿಗಬಹುದು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: LPG Price Hike: 19 ಕೆಜಿ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.