Mandya; ಅಂದುಕೊಂಡಿದ್ದೆಲ್ಲ ಆಗಬೇಕು ಎಂದು ಕುಳಿತುಕೊಳ್ಳುವುದಿಲ್ಲ: ಸುಮಲತಾ
ನಾನೇ ಇಷ್ಟು ತಾಳ್ಮೆಯಿಂದ ಇದ್ದೇನೆ, ನೀವೆಲ್ಲ ಯಾಕೆ ತಲೆ ಕೆಡಿಸಿಕೊಳ್ಳುತ್ತೀರಿ
Team Udayavani, Mar 7, 2024, 5:59 PM IST
ಮಂಡ್ಯ: ”ಯಾರೂ ಅಂದುಕೊಂಡಿದ್ದೆಲ್ಲ ಆಗಬೇಕು ಎಂದು ಕುಳಿತುಕೊಳ್ಳುವುದಿಲ್ಲವಲ್ಲ” ಎಂದು ಮಂಡ್ಯ ಸಂಸದೆ ಸುಮಲತಾ ಅವರು ಗುರುವಾರ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಟಿಕೆಟ್ ಕುರಿತು ಪ್ರತಿಕ್ರಿಯಿಸಿ ‘ಬಿಜೆಪಿ ವರಿಷ್ಠರು ವಿಶ್ವಾಸದ ಮಾತುಗಳು, ಪ್ರೋತ್ಸಾಹದ ಮಾತುಗಳನ್ನು ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ನನ್ನ ಬಗ್ಗೆ ಗೌರವ ಇದೆ. ನೀವು ನಮ್ಮ ಪಕ್ಷಕ್ಕೆ ಬೇಕು. ಮಂಡ್ಯ ಭಾಗದಲ್ಲಿ ಬಿಜೆಪಿ ಬೆಳೆಸಲು ನಿಮ್ಮ ಶಕ್ತಿ ಬೇಕು ಎಂದು ಕಳೆದ ಬಾರಿ ವಿಧಾನಸಭೆ ಚುನಾವಣೆ ವೇಳೆ ಹೇಳಿಯೇ ಬೆಂಬಲವನ್ನು ಪಡೆದುಕೊಂಡಿದ್ದಾರೆ. ಇಷ್ಟೂ ಆದ ಮೇಲೆ ನಿಮಗೆ ನಂಬಿಕೆ ಇಲ್ಲ ಅಂದರೆ ಇನ್ನು ಒಂದು ವಾರ ಕಾದು ನೋಡಿ”ಎಂದರು.
ಮೈತ್ರಿಯಿಂದಾಗಿ ಟಿಕೆಟ್ ಜೆಡಿಎಸ್ ಪಾಲಾದರೆ ಎಂಬ ಪ್ರಶ್ನೆಗೆ ಉತ್ತರಿಸಿ ‘ರಾಜಕೀಯದಲ್ಲಿ ಏನು ಬೇಕಾದರೂ ಆಗಲಿ. ಯಾರೂ ಅಂದುಕೊಂಡಿದ್ದೆಲ್ಲ ಆಗಬೇಕು ಎಂದು ಕುಳಿತುಕೊಳ್ಳುವುದಿಲ್ಲವಲ್ಲ. ನಮ್ಮದೇ ಆದ ನಿರ್ಧಾರ ಕೈಗೊಳ್ಳಬಹುದಲ್ಲ’ಎಂದರು.
‘ಟಿಕೆಟ್ ಘೋಷಣೆ ಆದ ಮೇಲೆ ನೋಡೋಣ. ನಾನೇ ಇಷ್ಟು ತಾಳ್ಮೆಯಿಂದ ಇದ್ದೇನೆ, ನೀವೆಲ್ಲ ಯಾಕೆ ತಲೆ ಕೆಡಿಸಿಕೊಳ್ಳುತ್ತೀರಿ’ ಎಂದು ಸುದ್ದಿಗಾರರಿಗೆ ನಗು ನಗುತ್ತಾ ಪ್ರತಿಕ್ರಿಯಿಸಿದರು.
ಜೆಡಿಎಸ್ ಬಿಗಿ ಪಟ್ಟು
ಜೆಡಿಎಸ್ ಕಾರ್ಯಕರ್ತರ ಬಲ ಇರುವ, ಒಕ್ಕಲಿಗ ಪ್ರಾಬಲ್ಯದ ಕ್ಷೇತವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡಲು ಜೆಡಿಎಸ್ ಸಿದ್ಧವಾಗಿಲ್ಲ. ಸುಮಲತಾ ಅವರೂ ಬಿಜೆಪಿ ಟಿಕೆಟ್ ನನಗೇ ಸಿಗುತ್ತದೆ ಎನ್ನುವ ವಿಶ್ವಾಸ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಕಳೆದ ಬಾರಿ ಬಂಡಾಯ ಸಾರಿ ದೇಶದಲ್ಲೇ ಗಮನ ಸೆಳೆದ ಮಂಡ್ಯ ಕ್ಷೇತ್ರದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ,ಕಾಂಗ್ರೆಸ್ ಯಾರನ್ನು ಕಣಕ್ಕಿಳಿಸಲಿದೆ? ಮುಂದಿನ ರಾಜಕೀಯ ಯಾವ ರೀತಿ ತಿರುವು ಪಡೆದುಕೊಳ್ಳಲಿದೆ? ಬಿಜೆಪಿ ಟಿಕೆಟ್ ಸಿಗದಿದ್ದರೆ ಸುಮಲತಾ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.