ನಾನು ಅಸಮರ್ಥಳಾ…? ಕಾಂಗ್ರೆಸ್ ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಪ್ರಶ್ನೆ
Team Udayavani, Mar 30, 2024, 6:30 AM IST
ಬೆಂಗಳೂರು: ಪಂಚಮಸಾಲಿ ಸಮುದಾಯದ ಹೆಸರು ಹೇಳಿಕೊಂಡು ಹೊರಗಿನಿಂದ ಬಂದು ಟಿಕೆಟ್ ಪಡೆದಿದ್ದಾರೆ. ಹಾಗಿದ್ದರೆ ಅದೇ ಜಿಲ್ಲೆಯ ಮತ್ತು ಅದೇ ಸಮುದಾಯದವಳಾದ ನಾನು ಅಸಮರ್ಥಳಾ ಎಂದು ಕಾಂಗ್ರೆಸ್ ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಪ್ರಶ್ನಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿ ಬದಲಾವಣೆ ಮಾಡಿ ಎಂದಿದ್ದೆ. ಅದು ಸಾಧ್ಯವಿಲ್ಲ ಎಂದು ನಮ್ಮ ನಾಯಕರು ಹೇಳಿದ್ದಾರೆ. ನನ್ನ ಪರವಾಗಿ ನ್ಯಾಯ ಕೇಳಿ ಬೇರೆ ಸಮುದಾಯದ ಮುಖಂಡರೆಲ್ಲ ಬಂದಿದ್ದರು. ಸಾಕಷ್ಟು ನಿರೀಕ್ಷೆಯೊಂದಿಗೆ ಮುಖ್ಯಮಂತ್ರಿ ಭೇಟಿ ಮಾಡಿದ್ದೆವು. ಆದರೆ ಎಲ್ಲರಿಗೂ ನಿರಾಸೆ ಆಗಿದೆ ಎಂದರು.
2019ರಲ್ಲಿ ಬೇರೆ ಬೇರೆ ನಾಯಕರ ಪ್ರಭಾವ ಮತ್ತು ಅಲೆ ಇದ್ದಾಗಲೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಅಲ್ಪ ಅಂತರದಿಂದ ಸೋತಿದ್ದೆ. ಈ ಬಾರಿ ಶತಾಯಗತಾಯ ಗೆಲ್ಲಲು ನಿರ್ಧರಿಸಿದ್ದೆ. ಆದರೆ ಟಿಕೆಟ್ ಕೊಡಲೇ ಇಲ್ಲ. ಯಾಕೆ ಟಿಕೆಟ್ ಕೊಟ್ಟಿಲ್ಲ ಅಂದಾಗ ಜಿಲ್ಲೆಯ ಶಾಸಕರು ನನ್ನ ಹೆಸರನ್ನೇ ಹೇಳಿಲ್ಲ ಎಂಬ ಉತ್ತರ ಸಿಕ್ಕಿತು. ನಮ್ಮ ನಾಯಕರು ಯಾವುದೇ ಭರವಸೆ ನೀಡಿಲ್ಲ. ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದರಿಂದ ವಿಧಾನಸಭೆ ಚುನಾವಣೆ ಕಣಕ್ಕಿಳಿಯಲು ಹೇಳಿದಾಗ ನಾನು ಒಪ್ಪಿರಲಿಲ್ಲ. ಈಗ ತುಂಬಾ ನಿರಾಸೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.