Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Team Udayavani, Apr 19, 2024, 2:55 PM IST
ಇಂಫಾಲ್: 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮಣಿಪುರದ ಮತಗಟ್ಟೆಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, ಗುಂಡಿನ ಸದ್ದು ಕೇಳುತ್ತಿದ್ದಂತೆ ಮತಗಟ್ಟೆಯಲ್ಲಿದ್ದ ಮತದಾರರು ದಿಕ್ಕಾ ಪಾಲಾಗಿ ಓಡಿದ್ದಾರೆ.
ಒಂದು ಬಿಷ್ಣುಪುರ ಜಿಲ್ಲೆಯ ಥಮನ್‌ಪೋಕ್ಪಿ ಮತದಾನ ಕೇಂದ್ರದಲ್ಲಿ ಕೇಂದ್ರದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದ ಸಂದರ್ಭ ಗುಂಡಿನ ದಾಳಿ ನಡೆದಿದೆ, ಘಟನೆಯ ದೃಶ್ಯವನ್ನು ವ್ಯಕ್ತಿಯೊಬ್ಬರು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾದ ವರದಿಯಾಗಿಲ್ಲ ಎನ್ನಲಾಗಿದೆ.
ಮಣಿಪುರದಲ್ಲಿ ಎರಡು ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು ಅದರಂತೆ ಇಂದು ಮೊದಲ ಹಂತದ ಮತದಾನ ಆರಂಭಗೊಂಡಿದೆ. ಮಣಿಪುರದಲ್ಲಿ ಹಿಂಸಾಚಾರದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಆದರೆ ಇದರ ಹೊರತಾಗಿಯೂ ದುಷ್ಕರ್ಮಿಗಳು ಮೊಯಿರಾಂಗ್ ವಿಧಾನಸಭಾ ಕ್ಷೇತ್ರದ ಥಮನ್‌ಪೋಕ್ಪಿಯಲ್ಲಿ ಗುಂಡಿನ ದಾಳಿ ನಡೆಸಿ ಇವಿಎಂ ಮೆಷಿನ್ ಒಡೆದು ಹಾಕಿದ್ದಾರೆ ಎನ್ನಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಮತಗಟ್ಟೆಗಳ ಸುತ್ತ ಹೆಚ್ಚಿನ ಭದ್ರತಾ ಸಿಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಣಿಪುರದಲ್ಲಿ ಏಪ್ರಿಲ್ 26 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು ಇಲ್ಲಿ ಕೂಡ ಕೆಲ ಸೂಕ್ಷ್ಮ ಮತಗಟ್ಟೆಗಳು ಇದ್ದು ಹೆಚ್ಚಿನ ಭದ್ರತೆ ಒದಗಿಸಬೇಕಾಗಿದೆ.
Despite stringent security arrangements, violence marred voting for the first phase of the #LokSabha elections in inner #Manipur constituency. Shooting by miscreants broke out at a polling station at Thamanpokpi under Moirang Assembly segment.
📹: Special Arrangement pic.twitter.com/LIWQDb8vwd
— The Hindu (@the_hindu) April 19, 2024
Incidents of booth capturing and violence emerge from Inner Manipur constituency that goes to poll today.
Video below shows armed men walking near a polling booth as police look on, women appear to be pleading police to take action. pic.twitter.com/2Ooo2szO6M— Vijaita Singh (@vijaita) April 19, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.