ದೇವೇಗೌಡರು ಇಳಿವಯಸ್ಸಲ್ಲೂ ಸುತ್ತಾಡುವುದನ್ನು ಕಂಡಾಗ ನೋವಾಗುತ್ತದೆ: ಸಚಿವ ರಾಜಣ್ಣ ವ್ಯಂಗ್ಯ
Team Udayavani, Apr 4, 2024, 8:46 PM IST
ತುಮಕೂರು: ಮಗ, ಮೊಮ್ಮಗ, ಅಳಿಯನಿಗಾಗಿ ದೇವೇಗೌಡರು ಈ ಇಳಿವಯಸ್ಸಿನಲ್ಲೂ ಸುತ್ತುತ್ತಿರುವುದನ್ನು ನೋಡಿದರೆ ನಿಜಕ್ಕೂ ನೋವಾಗುತ್ತದೆ. ಅಧಿಕಾರದ ಆಸೆಗೆ ಅವರ ಮಕ್ಕಳು, ಮೊಮ್ಮಕ್ಕಳು ಸಾಯುವ ಕಾಲದಲ್ಲಿಯೂ ಅವರಿಗೆ ನೆಮ್ಮದಿ ಕೊಡಲಿಲ್ಲವಲ್ಲ ಎಂದು ಅನುಕಂಪ ಮೂಡುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ವ್ಯಂಗ್ಯವಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇ ಗೌಡರ ನಾಮಪತ್ರ ಸಲ್ಲಿಕೆ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಡಿಯೂರಪ್ಪ ಕುರಿತು ದೇವೇಗೌಡರು, ದೇವೇಗೌಡರ ಕುರಿತು ಯಡಿಯೂರಪ್ಪ ಬೈದು ಬಳಸಿದ ಭಾಷೆಗಳ ದಾಖಲೆ ಇದೆ. ಇದನ್ನು ಅವಲೋಕಿಸಿದರೆ ಅವರದ್ದು ಅಪವಿತ್ರ ಮೈತ್ರಿ ಎಂಬುದು ಸ್ಪಷ್ಟ. ಇದು ದೇವೇಗೌಡರು ತಮ್ಮ ಕುಟುಂಬದಲ್ಲಿಯೇ ಅಧಿಕಾರ ಉಳಿಯಬೇಕೆಂಬ ಕಾರಣಕ್ಕೆ ಮಾಡಿಕೊಂಡ ಒಪ್ಪಂದ ಎಂದು ಟೀಕಿಸಿದರು.
ದೇವೇಗೌಡರು ತುಮಕೂರಿಗೆ ಬಂದು ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ಮತ ಕೇಳುತ್ತಿಲ್ಲ. ಬದಲಿಗೆ ದೇವೇಗೌಡರನ್ನು ಸೋಲಿಸಿದವರನ್ನು ಸೋಲಿಸಿ ಎಂದು ಕರೆ ಕೊಡುತ್ತಿದ್ದಾರೆ. 2019ರ ಚುನಾವಣೆಯಲ್ಲಿ ದೇವೇಗೌಡರನ್ನು ಸೋಲಿಸಿದ್ದು ಇದೇ ಜಿ.ಎಸ್.ಬಸವರಾಜು ಮತ್ತು ವಿ.ಸೋಮಣ್ಣ. ದೇವೇಗೌಡರು ಕೇಳುತ್ತಿರುವುದು ಕೂಡ ಅವರನ್ನು ಸೋಲಿಸಿ ಎಂದು ರಾಜಣ್ಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.