Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ
Team Udayavani, Apr 28, 2024, 6:00 AM IST
ಗಾಂಧಿನಗರ: “ಪ್ರಧಾನಿ ಮೋದಿಯವರು ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ. ಈ ಮಾವ ಮೂಲೆಯಲ್ಲಿ ಕುಳಿತು ಏನೇನೋ ಹೇಳುತ್ತಿರುತ್ತಾರೆ. ಅದೇ ರೀತಿ, ಮೋದಿ ಕೂಡ ಸುಳ್ಳುಗಳನ್ನು ಹೇಳುತ್ತಾ ತಿರುಗಾಡುತ್ತಿದ್ದಾರೆ. ಅವರನ್ನು ಯಾರೂ ನಂಬುವುದಿಲ್ಲ’. ಹೀಗೆಂದು ಹೇಳಿರುವುದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ.
ಶನಿವಾರ ಗುಜರಾತ್‌ನಲ್ಲಿ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, “ಪಿತ್ರಾರ್ಜಿತ ತೆರಿಗೆ ಕಾನೂನು, ಸಂಪತ್ತು ಹಂಚಿಕೆಯಂಥ ಲಾಜಿಕ್ ಇಲ್ಲದ ಸುಳ್ಳುಗಳನ್ನು ಮೋದಿ ಹೇಳುತ್ತಾರೆ. ಮದುವೆ ಮನೆಯಲ್ಲಿರುವ ಮಾವ ಬಂದು ನಿಮ್ಮ ಬಳಿ, “ಒಂದು ರಾಜಕೀಯ ಪಕ್ಷವು ಎಕ್ಸ್ ರೇ ಯಂತ್ರವನ್ನು ನಿಮ್ಮ ಮನೆಗೆ ತಂದು ಎಲ್ಲ ಉಳಿತಾಯದ ಹಣವನ್ನು, ಮಂಗಳಸೂತ್ರ, ಬಂಗಾರವನ್ನು ಸ್ಕ್ಯಾನ್ ಮಾಡಿ, ಕಸಿದುಕೊಂಡು ಬೇರೆಯವರಿಗೆ ನೀಡಲಿದೆ’ ಎಂದು ಹೇಳಿದರೆ ನೀವು ನಂಬುತ್ತೀರಾ? ಮೋದಿಯವರೂ ಅದನ್ನೇ ಮಾಡುತ್ತಿದ್ದಾರೆ’ ಎಂದಿದ್ದಾರೆ. ಇದೇ ವೇಳೆ, ಸಂವಿಧಾನವನ್ನು ಬದಲಿಸುವುದಿಲ್ಲ ಎಂದು ಬಿಜೆಪಿ ನಾಯಕರು ತಾತ್ಕಾಲಿಕವಾಗಿ ನಟನೆ ಮಾಡುತ್ತಿರಬಹುದು. ಆದರೆ ಅಧಿಕಾರಕ್ಕೆ ಮರಳಿದ ಬಳಿಕ ಸಂವಿಧಾನವನ್ನು ಬದಲಿಸಲಿದ್ದಾರೆ ಎಂದು ಪ್ರಿಯಾಂಕಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.