NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
ಮಂಡ್ಯ ಜನತೆಯ ಸ್ವಾಭಿಮಾನದ ತಾಕತ್ತನ್ನು ತೋರಿಸಿ
Team Udayavani, Apr 17, 2024, 9:20 PM IST
ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣ ಶಾಸಕರು, ಬೆಂಗಳೂರು ಗ್ರಾಮಾಂತರದಲ್ಲಿ ನಿಲ್ಲಬಹುದಿತ್ತು. ಅಲ್ಲಿ ಗೆಲ್ಲುವುದಿಲ್ಲ ಎನ್ನುವ ಭಯದಿಂದ ಬಿಟ್ಟು ಮಂಡ್ಯಕ್ಕೆ ಬಂದಿದ್ದಾರೆ. ಇಲ್ಲಿ ಸೋಲಿಸಿ ನೇರವಾಗಿ ಮನೆಗೆ ಕಳಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
”ಬುಧವಾರ ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿ, ”ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ. ಈ ಕಾರ್ಯಕ್ರಮಕ್ಕೆ ವ್ಯಕ್ತವಾಗಿರುವ ಅಭೂತಪೂರ್ವ ಸ್ಪಂದನೆಯೇ ಕುಮಾರಸ್ವಾಮಿ ಅವರನ್ನು ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ ಎಂಬುದನ್ನು ಹೇಳುತ್ತದೆ’ ಎಂದರು.
”ನರೇಂದ್ರ ಮೋದಿ ಅವರ ಅಚ್ಚೇ ದಿನ್ 10 ವರ್ಷ ಕಳೆದರೂ ಭಾರತೀಯರಿಗೆ ಬಂದಿಲ್ಲ. ರಾಜ್ಯದ ಜನತೆಗೆ ಅಚ್ಚೇ ದಿನ್ ಕಾಣಿಸಿಯೇ ಇಲ್ಲ. ಮೋದಿಯವರ ಕಾರಣದಿಂದ ಏರಿಕೆಯಾಗಿದ್ದ ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ-ಕಾಳು, ಅಡುಗೆ ಎಣ್ಣೆ ಸೇರಿ ಎಲ್ಲದರ ಬೆಲೆ ಏರಿಕೆ ನೀತಿಯಿಂದ ಹೈರಾಣಾಗಿದ್ದ ರಾಜ್ಯದ ಜನರ ಬದುಕಿನ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಿಂದ ರಾಜ್ಯದ ಪ್ರತಿ ಕುಟುಂಬಗಳಿಗೆ ಪ್ರತಿ ತಿಂಗಳು 5 ರಿಂದ 6 ಸಾವಿರ ರೂಪಾಯಿ ಒದಗಿ ಬರುವಂತಹ ನೆರವಿನ ಕಾರ್ಯಕ್ರಮಗಳನ್ನು ನೀಡಿದ್ದೇವೆ. ರಾಜ್ಯದ ಜನರಿಗೆ ಅನ್ನಭಾಗ್ಯದ ಅಕ್ಕಿ ಕೊಡದಂತೆ ನರೇಂದ್ರ ಮೋದಿ ಸರ್ಕಾರ ತೊಂದರೆ ಕೊಟ್ಟರೂ ಕೂಡ ನಾವು ಅಕ್ಕಿ ಜತೆಗೆ ಹಣವನ್ನೂ ನಮ್ಮ ಜನರ ಬದುಕಿಗೆ ಕೊಡುತ್ತಿದ್ದೇವೆ” ಎಂದು ಕಿಡಿ ಕಾರಿದರು.
”ಕೊಟ್ಟ ಮಾತಿನಂತೆ ನಡೆದುಕೊಂಡವರು ಯಾರು ಎನ್ನುವುದನ್ನು ನಿಮ್ಮ ಹೃದಯಕ್ಕೆ ಕೇಳಿಕೊಳ್ಳಿ. ಅವರಿಗೆ ಮಾತ್ರ ನಿಮ್ಮ ಮತ ನೀಡಿ. ರಾಜ್ಯದಿಂದ ಗೆದ್ದ 27 ಸಂಸದರು ರಾಜ್ಯದ ಸಮಸ್ಯೆಗಳ ಬಗ್ಗೆ ನೆಪಮಾತ್ರಕ್ಕೂ ಧ್ವನಿ ಎತ್ತದೆ ರಾಜ್ಯದ ಜನರಿಂದ ಪಡೆದ ಮತಕ್ಕೆ ಅವಮಾನ ಮಾಡಿದರು. ಈ ಅವಮಾನಕ್ಕೆ ತಕ್ಕ ಉತ್ತರ ನೀಡಿ ರಾಜ್ಯದ ಜನತೆಯ ಪರವಾಗಿ ಧ್ವನಿ ಎತ್ತುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ, ಮಂಡ್ಯ ಜನತೆಯ ಸ್ವಾಭಿಮಾನದ ತಾಕತ್ತನ್ನು ತೋರಿಸಿ ಎಂದು ಮನವಿ ಮಾಡುತ್ತೇನೆ.ಭಾರತೀಯರ ಭಾವನೆಗಳನ್ನು ಭಾವನಾತ್ಮಕವಾಗಿ ಕೆರಳಿಸಿ, ನಮ್ಮ ಬದುಕಿಗೆ ವಂಚಿಸುವವರಿಗೆ ಮಾನ್ಯತೆ ಕೊಡಬೇಡಿ. ಜನರ ಕಷ್ಟಗಳಿಗೆ ಸ್ಪಂದಿಸುವ ನಮಗೆ ಶಕ್ತಿ ಕೊಡಿ. ನೀವು ಕೊಟ್ಟ ಶಕ್ತಿ ನಿಮ್ಮ ಮನೆ ಬಾಗಿಲಿಗೇ ಉತ್ತಮ ಕಾರ್ಯಕ್ರಮಗಳ ರೂಪದಲ್ಲಿ ವಾಪಾಸ್ ಬರುತ್ತದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.