BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್‌ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್.ಡಿ.ರೇವಣ್ಣ
ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿರುವ ಹಾಸನ ಲೋಕಸಭಾ ಕ್ಷೇತ್ರ
Team Udayavani, Mar 22, 2024, 6:20 AM IST
ಬೆಂಗಳೂರು: ಲೋಕ ಸಭಾ ಚುನಾವಣೆ ಹೊಸ್ತಿಲಲ್ಲೂ ಬಿಜೆಪಿ ಸ್ಥಳೀಯ ಮುಖಂಡರು ಕೊಡುತ್ತಿರುವ ಅಸಹಕಾರದ ಹಿನ್ನೆಲೆಯಲ್ಲಿ ಪುತ್ರ ಪ್ರಜ್ವಲ್ ಸಮೇತ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ದೌಡಾಯಿಸಿ “ರಕ್ಷಣೆ’ಗೆ ಮೊರೆಯಿಟ್ಟಿದ್ದಾರೆ. ಹೀಗಾಗಿ ಹಾಸನ ಲೋಕಸಭಾ ಕ್ಷೇತ್ರದ ಚಿತ್ರಣ ಇನ್ನಷ್ಟು ರಂಗು ಪಡೆದುಕೊಂಡಿದೆ.
ಪ್ರಜ್ವಲ್‌ಗೆ ಟಿಕೆಟ್ ನೀಡಬಾರ ದೆಂದು ಸ್ಥಳೀಯ ಬಿಜೆಪಿ ನಾಯಕರು ಹಲವು ಬಾರಿ ಅಪಸ್ವರ ಎತ್ತಿದ್ದಾರೆ. ಈ ಪೈಕಿ ಕೆಲವರು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿಗೂ ಮೂಗರ್ಜಿ ಬರೆದಿದ್ದಾರೆ. ಪ್ರಕರಣದ ಗಂಭೀರತೆ ಹಾಗೂ ತೀವ್ರತೆ ಬಗ್ಗೆ ತಮ್ಮನ್ನು ಭೇಟಿ ಮಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ಅಮಿತ್ ಶಾ ಮನದಟ್ಟು ಮಾಡಿದ್ದು, ಅಭ್ಯರ್ಥಿ ಬದಲಾವಣೆ ಬಗ್ಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಈ ಸುದ್ದಿ ಲಭಿಸುತ್ತಿದ್ದಂತೆ ಪುತ್ರ ಸಮೇತರಾಗಿ ಯಡಿಯೂರಪ್ಪ ನಿವಾಸಕ್ಕೆ ಭೇಟಿ ಕೊಟ್ಟಿರುವ ರೇವಣ್ಣ ಸಮಸ್ಯೆ ಬಗೆಹರಿಸುವಂತೆ ಮೊರೆ ಇಟ್ಟಿದ್ದಾರೆ.
ರೇವಣ್ಣ ಬೆದರಿದ್ದೇಕೆ ?
ಪ್ರಜ್ವಲ್ ವಿರುದ್ಧ ಹಾಸನ ಬಿಜೆಪಿಯ ಇಬ್ಬರು ಪರಾಜಿತ ಅಭ್ಯರ್ಥಿಗಳು ಹಾಗೂ ಜೆಡಿಎಸ್‌ನ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಾದೇಶಿಕ ಪಕ್ಷದ ಜತೆಗೆ ರಾಷ್ಟ್ರಮಟ್ಟದ ಮೈತ್ರಿಯಾದರೂ ಹಾಸನದಲ್ಲಿ ಮಾತ್ರ ಅದು ಜಾರಿಯಾಗುವುದಿಲ್ಲ. ಜೆಡಿಎಸ್ ಪರ ಕೆಲಸ ಮಾಡುವುದಕ್ಕೆ ಸಾಧ್ಯವೇ ಇಲ್ಲ ಎಂದು ಸ್ಥಳೀಯ ನಾಯಕರು ಸಂದೇಶ ರವಾನಿಸಿದ್ದಾರೆ.
ಕಾಂಗ್ರೆಸ್‌ನಿಂದ ಕಣಕ್ಕಿಳಿದಿರುವ ಶ್ರೇಯಸ್ ಪಟೇಲ್ ಬಗ್ಗೆ ಜಿಲ್ಲೆಯಲ್ಲಿ ಸದಭಿಪ್ರಾಯವಿದೆ. ಕಳೆದ ಚುನಾವಣೆಯಲ್ಲಿ ರೇವಣ್ಣಗೆ ಶ್ರೇಯಸ್ ತೀವ್ರ ಸ್ಪರ್ಧೆ ನೀಡಿದ್ದರು. ಇನ್ನು ಪಕ್ಷದ ಚಿಹ್ನೆಯಡಿ ಸ್ಪರ್ಧಿಸದ ಅಭ್ಯರ್ಥಿಗೆ ಬೆಂಬಲಿಸಬೇಡಿ ಎಂದು ಸ್ಥಳೀಯ ನಾಯಕರು ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ. ಜೆಡಿಎಸ್‌ಗೆ ಬೇಕಾದರೆ ಸಹಕರಿಸೋಣ, ಆದರೆ ರೇವಣ್ಣ ಕುಟುಂಬ ಸದಸ್ಯರಿಗೆ ಬೆಂಬಲವಿಲ್ಲ ಎಂದೂ ತಿಳಿಸಿದ್ದಾರೆ. ಈ ಎಲ್ಲ ವಿಚಾರಗಳನ್ನು ಯಡಿಯೂರಪ್ಪ ಜತೆಗೆ ರೇವಣ್ಣ ಚರ್ಚಿಸಿದ್ದಾರೆ.
ಎರಡು ಪಕ್ಷದ ನಾಯಕರು ಒಟ್ಟಾಗಿ ಹೋರಾಟ ನಡೆಸೋಣ. ಸ್ಥಳೀಯ ನಾಯಕರ ಜತೆಗೆ ನಾನು ಮಾತನಾಡು ತ್ತೇನೆ ಎಂದು ಯಡಿಯೂರಪ್ಪ ಭರವಸೆ ನೀಡಿದ್ದಾಗಿ ತಿಳಿದು ಬಂದಿದೆ.
ಹಾಸನದ ಅಭ್ಯರ್ಥಿ ನಾನೇ ಎಂದು ದೇವೇಗೌಡರು ಹೇಳಿದ್ದಾರೆ. ಯಡಿಯೂರಪ್ಪನವರ ಅಶೀರ್ವಾದ ಪಡೆಯಲು ಬಂದಿದ್ದೆ . ಖುದ್ದು ನನ್ನ ಚುನಾವಣೆ ಎಂದು ಭಾವಿಸಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ. ಪ್ರೀತಂ ಗೌಡರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿಲ್ಲ. ಅವರನ್ನೂ ಸಮಾಧಾನ ಮಾಡುತ್ತೇವೆ.
-ಪ್ರಜ್ವಲ್ ರೇವಣ್ಣ
ಯಡಿಯೂರಪ್ಪರಿಗೆ ರಾಜ್ಯದಲ್ಲಿ ಅವರದೇ ಆದ ಶಕ್ತಿ ಇದೆ. ಅವರ ಆಶೀರ್ವಾದ ಪಡೆದಿದ್ದೇವೆ. ಒಟ್ಟಾಗಿ ಕೆಲಸ ಮಾಡಿ ಗೆಲ್ಲುವ ಭರವಸೆ ನೀಡಿದ್ದಾರೆ. ಸಣ್ಣಪುಟ್ಟ ವ್ಯತ್ಯಾಸವಿದ್ದರೆ ಪರಿಹರಿಸಿಕೊಳ್ಳುತ್ತೇವೆ. ಪ್ರೀತಮ್ ಗೌಡ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ.
-ಎಚ್.ಡಿ.ರೇವಣ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.