Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ
ಒಡಿಶಾದಲ್ಲಿ ಬಿಜೆಪಿಯ ಸಂಭಾವ್ಯ ಸಿಎಂ ಫೇಸ್ ಯಾರು ?
Team Udayavani, May 16, 2024, 5:26 PM IST
ಭುವನೇಶ್ವರ : ”ಬಿಜೆಪಿಯನ್ನು ಅಧಿಕಾರಕ್ಕೆ ತರುವ ಮೂಲಕ ಒಡಿಶಾದ ಜನರು ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ಗೆ ವಿಶ್ರಾಂತಿ ನೀಡಲು ನಿರ್ಧರಿಸಿದ್ದಾರೆ” ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿಕೆ ನೀಡಿದ್ದಾರೆ.
ಪಕ್ಷದ ಅಭ್ಯರ್ಥಿಗಳ ಪರ ಒಡಿಶಾದ ರಾಜಧಾನಿಯಲ್ಲಿ ಭರ್ಜರಿ ರೋಡ್‌ಶೋದಲ್ಲಿ ಭಾಗಿಯಾದ ನಡ್ಡಾ, ‘ಕಳೆದ 24 ವರ್ಷಗಳಿಂದ ಒಡಿಶಾದಲ್ಲಿ ಆಡಳಿತ ನಡೆಸುತ್ತಿರುವ ನವೀನ್ ಪಟ್ನಾಯಕ್‌ಗೆ ಬೀಳ್ಕೊಡುಗೆ ಕೊಟ್ಟು ವಿಶ್ರಾಂತಿ ನೀಡಲು ನಿರ್ಧರಿಸಿದ್ದಾರೆ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡಲಿದ್ದಾರೆ ಎಂದು ಜನರ ಉತ್ಸಾಹವು ಸೂಚಿಸುತ್ತದೆ’ ಎಂದರು.
ಮೇ 13 ರಂದು ಒಡಿಶಾದಲ್ಲಿ ನಡೆದ ಮೊದಲ ಹಂತದ ಏಕಕಾಲದ ಚುನಾವಣೆಯನ್ನು ಉಲ್ಲೇಖಿಸಿ, ನಾಲ್ಕು ಲೋಕಸಭಾ ಸ್ಥಾನಗಳು ಮತ್ತು 28 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಡಿದ್ದು, ಬಿಜೆಡಿಗೆ ಬಸ್ ತಪ್ಪಿದೆ ಎಂದುರು.
ಒಡಿಶಾದಲ್ಲಿ ಬಿಜೆಪಿಯ ಸಂಭಾವ್ಯ ಸಿಎಂ ಫೇಸ್ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ‘ಚುನಾವಣ ಫಲಿತಾಂಶದ ಮೂರು ದಿನಗಳಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಮುಖ್ಯಮಂತ್ರಿಗಳನ್ನು ನಿರ್ಧರಿಸಿತ್ತು ಅದೇ ರೀತಿ ಒಡಿಶಾದಲ್ಲಿ ಕೂಡ ನಡೆಯುತ್ತದೆ” ಎಂದರು.
3 ಪಕ್ಷಗಳಿಂದ ಭರ್ಜರಿ ಪ್ರಚಾರ
ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಯುತ್ತಿದ್ದು, ಬಿಜೆಡಿ ಕೈಯಿಂದ ಬಿಜೆಪಿ ಅಧಿಕಾರ ಕಸಿಯಲು, ಹೆಚ್ಚು ಸಂಸತ್ ಸದಸ್ಯರ ಆಯ್ಕೆಗಾಗಿ ಭರ್ಜರಿ ಪ್ರಚಾರ ನಡೆಸುತ್ತಿದೆ.
ಮುಖ್ಯಮಂತ್ರಿ ಮತ್ತು ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಅವರು ಗುರುವಾರ ಸಂಜೆ ಭುವನೇಶ್ವರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಕಂಧಮಾಲ್ ಜಿಲ್ಲೆಯ ಫುಲ್ಬಾನಿಯಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೋಲಂಗಿರ್‌ನಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಒಂದು ದಿನದ ಕಾಂಗ್ರೆಸ್ ಇನ್ನೊಂದು ಬೃಹತ್ ಸಭೆ ನಡೆಸುತ್ತಿದೆ.
ಎರಡು ಬಾರಿ ಒಡಿಶಾಗೆ ಚುನಾವಣಾ ಪ್ರಚಾರಕ್ಕಾಗಿ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಮೇ 20 ರಂದು ಮತ್ತೊಮ್ಮೆ ಭೇಟಿ ನೀಡಲಿದ್ದಾರೆ. ಕೇಂದ್ರ ಸಚಿವರಲ್ಲದೆ, ಬಿಜೆಪಿ ಆಡಳಿತವಿರುವ ಅಸ್ಸಾಂ, ಛತ್ತೀಸ್ ಗಢ ಮತ್ತು ರಾಜಸ್ಥಾನದ ಮುಖ್ಯಮಂತ್ರಿಗಳು ಪ್ರಚಾರ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.