Election ಬಳಿಕವೇ ಪ್ರಧಾನಿ ಅಭ್ಯರ್ಥಿ ಆಯ್ಕೆ: ರಾಹುಲ್
PM candidate, select, after election, Rahul Ghandhi
Team Udayavani, Apr 6, 2024, 6:26 AM IST
ಹೊಸದಿಲ್ಲಿ: ಚುನಾವಣ ಫಲಿತಾಂಶದ ಬಳಿಕವೇ ಇಂಡಿಯಾ ಒಕ್ಕೂಟದ ಪ್ರಧಾನಮಂತ್ರಿ ಅಭ್ಯರ್ಥಿ ಬಗ್ಗೆ ತೀರ್ಮಾನಿಸಲಾಗುತ್ತದೆ. ಹೀಗೆಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫಲಿತಾಂಶದ ಬಳಿಕ ಮೈತ್ರಿಕೂಟದ ಎಲ್ಲ ಪಕ್ಷಗಳ ನಾಯಕರು ಸಮಾಲೋಚನೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಎನ್‌ಡಿಎ ಸದ್ಯ ನಡೆಸುತ್ತಿರುವ ಅದ್ದೂರಿ ಪ್ರಚಾರ 2004ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವಧಿಯಲ್ಲಿ ಕೈಗೊಂಡಿದ್ದ “ಇಂಡಿಯಾ ಶೈನಿಂಗ್’ ಪ್ರಚಾರದಂತೆಯೇ ವಿಫಲಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಚುನಾವಣೆ ಸಾಂವಿಧಾನಿಕ ಸಂಸ್ಥೆಗಳು ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡಲು ಪ್ರಯತ್ನ ಮಾಡುತ್ತಿರುವವರು ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲಿರುವವರ ನಡುವೆ ನಡೆಯಲಿದೆ ಎಂದು ವಿಶ್ಲೇಷಿಸಿದ್ದಾರೆ.
ಇ.ಡಿ., ಸಿಬಿಐ, ಆದಾಯ ತೆರಿಗೆ ಇಲಾಖೆಗಳ ಮೂಲಕ ರಾಜಕೀಯ ಕ್ಷೇತ್ರದ ಹಣಕಾಸು ವ್ಯವಸ್ಥೆ ಯನ್ನು ಪ್ರಧಾನಿ ನರೇಂದ್ರ ಮೋದಿ ನಿಯಂತ್ರಿಸು ತ್ತಿದ್ದಾರೆ. ಕೇಂದ್ರ ಸರಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ರಾಹುಲ್ ಗಾಂಧಿ ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.