Lok Sabha Election: ಏಪ್ರಿಲ್ 14ರಂದು ಪ್ರಧಾನಿ ಮಂಗಳೂರಿಗೆ… ಸಮಾವೇಶದ ಬದಲು ರೋಡ್ ಶೋ…
Team Udayavani, Apr 10, 2024, 3:27 PM IST
ಮಂಗಳೂರು: ಏಪ್ರಿಲ್ 14 ರಂದು ನಗರದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಯೋಜಿತ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ ಎಂದು ಪಕ್ಷ ಹೇಳಿಕೊಂಡಿದೆ. ಈ ಕುರಿತು ಹೇಳಿಕೆ ನೀಡಿದ ಬಿಜೆಪಿ ಏಪ್ರಿಲ್ 14 ರಂದು ನಿಗದಿಪಡಿಸಲಾಗಿದ್ದ ಸಾರ್ವಜನಿಕ ಸಮಾವೇಶವನ್ನು ರದ್ದುಗೊಳಿಸಲಾಗಿದ್ದು ಅದರ ಬದಲಿಗೆ ಅದೇ ದಿನ ನಗರದಲ್ಲಿ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದೆಲ್ಲೆಡೆ ಸಮಾವೇಶ ಹಾಗೂ ರೋಡ್ ಶೋ ಗಳನ್ನು ನಡೆಸುತ್ತಿದ್ದು ಇದೇ ಬರುವ ಏ. 14 ರಂದು ಮಂಗಳೂರಿನಲ್ಲಿ ಪ್ರಧಾನಿ ಸಮಾವೇಶ ನಿಗದಿಯಾಗಿತ್ತು ಆದರೆ ಇದೀಗ ಸಮಾವೇಶ ರದ್ದುಗೊಳಿಸಿ ಅದರ ಬದಲಿಗೆ ರೋಡ್ ಶೋ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಪ್ರಧಾನಿ ದೇಶಾದ್ಯಂತ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದು ಈ ನಡುವೆ ಕರಾವಳಿ ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸುವ ನಿಟ್ಟಿನಲ್ಲಿ ಮುಂಬರುವ ಎಪ್ರಿಲ್ 14 ರಂದು ಮಂಗಳೂರಿನಲ್ಲಿ ಸಮಾವೇಶ ನಡೆಸಲು ತಯಾರಿ ನಡೆಸಲಾಗಿತ್ತು ಆದರೆ ಬಿಗುವಿನ ವೇಳಾಪಟ್ಟಿ ಹಾಗೂ ವೆಚ್ಚ ಕಡಿಮೆ ಮಾಡುವ ನಿಟ್ಟಿನಲ್ಲಿ ಸಮಾವೇಶ ಬದಲು ರೋಡ್ ಶೋ ನಡೆಸಲು ಪಕ್ಷ ನಿರ್ಧರಿಸಿದೆ ಎಂದು ಹೇಳಲಾಗಿದ್ದು ಅದರಂತೆ ಮಂಗಳೂರಿನ ನಾರಾಯಣ ಗುರು ವೃತ್ತದಿಂದ ನವಭಾರತ ವೃತ್ತ ವರೆಗೆ ರೋಡ್ ಶೋ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Suprem court: ಸಂದೇಶ್ ಖಾಲಿಯ ಭೂ ಮಾಫಿಯ ಬಗ್ಗೆ ಸಿಬಿಐ ತನಿಖೆ: ಹೈಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.