BJP; ಮಂಗಳೂರಿನಲ್ಲಿ ಮೋದಿ ಮಿಂಚಿನ ಓಟ: ಎಡಬಲದಲ್ಲಿ ಕೋಟ, ಚೌಟ
ಕಮಲ ಪಾಳಯದ ಜಾತ್ರೆಯ ಸಂಭ್ರಮ.. ಕೇಸರಿ ಪಡೆಗಳ ಕಲರವ
Team Udayavani, Apr 14, 2024, 8:22 PM IST
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ ಅದ್ದೂರಿ ರೋಡ್ ಶೋ ನಡೆಸಿ ಕರಾವಳಿಯ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಎರಡು ಕಿ.ಮೀ. ರೋಡ್ ಶೋ ನಲ್ಲಿ ಸಾವಿರಾರು ಜನರು ಭಾಗಿಯಾಗಿ ಪ್ರಧಾನಿ ಮೋದಿ ಅವರಿಗೆ ಜೈಕಾರ ಹಾಕಿದರು.
ಮೈಸೂರಿನಲ್ಲಿ ಅದ್ದೂರಿ ಬಿಜೆಪಿ ಮತ್ತು ಜೆಡಿಎಸ್ ಮಿತ್ರಪಕ್ಷಗಳ ಸಮಾವೇಶದಲ್ಲಿ ಭಾಗಿಯಾಗಿ ವಿಶೇಷ ವಿಮಾನವೇರಿ ಬಂದ ಪ್ರಧಾನಿ ಮೋದಿ ಅವರು ನಾರಾಯಣಗುರು ವೃತ್ತದಿಂದ ಅಲಂಕೃತ ವಿಶೇಷ ವಾಹನವನ್ನೇರಿ ರೋಡ್ ಶೋ ಆರಂಭಿಸಿದರು. ವಾಹನದಲ್ಲಿ ಕರಾವಳಿಯ ಬಿಜೆಪಿ ಅಭ್ಯರ್ಥಿಗಳಾದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಬ್ರಿಜೇಶ್ ಚೌಟ ಅವರು ನಿಂತಿದ್ದರು.
ಕೈಯಲ್ಲಿ ಹೊಳೆಯುವ ಕಮಲದ ಚಿಹ್ನೆ ಹಿಡಿದುಕೊಂಡಿದ್ದ ಮೋದಿ ಅವರು ಹಸನ್ಮುಖರಾಗಿ ಎಲ್ಲರತ್ತ ಕೈ ಬೀಸುತ್ತಾ ಸಾಗಿದರು. ರೋಡ್ ಶೋ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪ್ರಧಾನಿ ಮೋದಿ ಅವರ ಮೇಲೆ ನಿರಂತರ ಪುಷ್ಪ ವೃಷ್ಟಿ ಗೈದರು. ಮೋದಿ ಅವರು ಕೆಲವು ಬಾರಿ ಜನರತ್ತ ಹೂವಿನ ಎಸಳುಗಳನ್ನು ಎಸೆದು ಸಂಭ್ರಮ ಮೂಡಿಸಿದರು.
ಸೈನಿಕನ ಸೇವೆ
ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಬ್ರಿಜೇಶ್ ಚೌಟ ಅವರು ಮೋದಿ ಅವರತ್ತ ಬರುತ್ತಿದ್ದ ಭಾರಿ ಪ್ರಮಾಣದ ಹೂವುಗಳ ರಾಶಿಯನ್ನು ತಡೆದು ತಾನೊಬ್ಬ ಸೈನಿಕ ಎಂದು ನಿರೂಪಿಸಿದರು!.
ರೋಡ್ ಷೋ ವೇಳೆ ಕರಾವಳಿಯ ವಿಶೇಷ ವಾದ್ಯಗಳು, ಯಕ್ಷಗಾನ, ಹುಲಿ ವೇಷ, ಚಂಡೆ ಮೇಳಗಳು ವೈಭವ ಹೆಚ್ಚಿಸಿದವು. ಮಕ್ಕಳು, ವೃದ್ದರು ಮತ್ತು ಮಹಿಳೆಯರು ಭಾರಿ ಸಂಖ್ಯೆಯಲ್ಲಿ ರೋಡ್ ಶೋ ಕಣ್ತುಂಬಿಸಿಕೊಂಡರು.
ಬಿಜೆಪಿ ಕಾರ್ಯಕರ್ತರು ಭಾರತ್ ಮಾತಾ ಕಿ ಜೈ, ವಂದೇ ಮಾತರಂ, ಜೈ ಶ್ರೀರಾಮ್, ನರೇಂದ್ರ ಮೋದಿ ಕಿ ಜೈ, ಬತ್ತೆರ್ ಬತ್ತೆರ್ ಮೋದಿ ಬತ್ತೆರ್ (ಬಂದ್ರು ಬಂದ್ರು ಮೋದಿ ಬಂದ್ರು) ಎನ್ನುವ ತುಳುವಿನಲ್ಲೂ ಘೋಷಣೆಗಳನ್ನು ಮೊಳಗಿಸಿದರು.
#WATCH | People in large numbers gathered to witness the roadshow of Prime Minister Narendra Modi in Karnataka’s Mangaluru.#LokSabhaElections2024 pic.twitter.com/hKllrzV1Sj
— ANI (@ANI) April 14, 2024
ರೋಡ್ ಶೋ ಮುಗಿದ ಕೂಡಲೇ ಕೊಚ್ಚಿಗೆ ಪ್ರಯಾಣ ಬೆಳೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.