Pen drive ನಲ್ಲಿ ಹಾಕಿಕೊಂಡಿರಿ, ಚುನಾವಣೆ ಮುಗಿದ ಮೇಲೆ ಉತ್ತರ!: ಬಿ.ಕೆ.ಹರಿಪ್ರಸಾದ್
ಕುರ್ಚಿಗೆ ನಮ್ಮ ನಿಷ್ಠೆಯಿಲ್ಲ, ನಾನು ಸೇವಾದಳದಿಂದ ಬಂದವನು.... ಮಾರ್ಮಿಕ ಹೇಳಿಕೆ
Team Udayavani, Apr 12, 2024, 7:53 PM IST
ಬೆಳಗಾವಿ: ಈ ಲೋಕಸಭಾ ಚುನಾವಣೆ ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ. ರಾಜ್ಯ ರಾಜಕಾರಣದ ಬಗ್ಗೆ ಏನೇ ಪ್ರಶ್ನೆಗಳಿದ್ದರೂ ಅದನ್ನು ಪೆನ್ ಡ್ರೈವ್‌ದಲ್ಲಿ ಹಾಕಿ ಇಟ್ಟುಕೊಳ್ಳಿ. ಚುನಾವಣೆ ಮುಗಿದ ಮೇಲೆ ಬಂದು ಅದೆಲ್ಲಕ್ಕೂ ಉತ್ತರ ನೀಡುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಮತ್ತು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ ಬಿ.ಕೆ. ಹರಿಪ್ರಸಾದ್ ಮಾರ್ಮಿಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದು ರಾಜ್ಯ ರಾಜಕಾರಣದ ಚುನಾವಣೆಯಲ್ಲ. ನಾನು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ. ಯಾರೂ ನನ್ನನ್ನ ಉಪಯೋಗಿಸಿಕೊಳ್ಳಲು ಆಗುವುದಿಲ್ಲ. ಪಕ್ಷದ ಪರ ಕೆಲಸ ಮಾಡುತ್ತೇನೆ. ನಾನು ಸೇವಾದಳದಿಂದ ಬಂದವನು.ನಾನು ಯಾವಾಗಲೂ ದೆಹಲಿ ನಾಯಕರ ರಾಜಕಾರಣ ಮಾಡುತ್ತ ಬಂದಿದ್ದೇನೆ. ವೈಯಕ್ತಿಕ ರಾಜಕಾರಣ ಬೇರೆ. ಅಂತಹ ಏನೇ ಪ್ರಶ್ನೆಗಳಿದ್ದರೂ ಈಗ ಪೆನ್‌ಡ್ರೈವ್ ನಲ್ಲಿ ಹಾಕಿಕೊಂಡಿರಿ. ಚುನಾವಣೆ ಮುಗಿದ ಮೇಲೆ ಉತ್ತರ ನೀಡುತ್ತೇನೆ ಎಂದರು.
ರಾಜಕಾರಣದಲ್ಲಿ ಹಲವಾರು ಮುಖವಾಡಗಳನ್ನು ನೋಡಬೇಕಾಗುತ್ತದೆ. ಆದರೆ ನನ್ನ ವೈಯಕ್ತಿಕವಾದ ನಿಷ್ಠೆ ಕಾಂಗ್ರೆಸ್ ಪಕ್ಷ. ವೈಯಕ್ತಿಕವಾದ ನಿಷ್ಠೆ ತ್ರಿವರ್ಣ ಧ್ವಜ, ಸಂವಿಧಾನ. ಕುರ್ಚಿಗೆ ನಮ್ಮ ನಿಷ್ಠೆಯಿಲ್ಲ. ಆದರೆ ಅಖಿಲ ಭಾರತ ಮಟ್ಟದಲ್ಲಿ ನಮ್ಮ ಪಕ್ಷದ ಅಧ್ಯಕ್ಷರಾದವರ ಕುರ್ಚಿಯ ಬಗ್ಗೆ ನಿಷ್ಠೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.