Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!
Team Udayavani, May 17, 2024, 6:35 AM IST
ಮಧುಬನಿ (ಬಿಹಾರ): ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದ್ದಾಯಿತು. ಇನ್ನು ಬಿಹಾರದ ಸೀತಾಮಡಿಯಲ್ಲಿ ಸೀತಾ ಮಾತೆಗೆ ಬೃಹತ್ ದೇಗುಲ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಬಿಹಾರದ ಸೀತಾಮಡಿಯಲ್ಲಿ ಗುರುವಾರ ಚುನಾವಣ ಪ್ರಚಾರ ರ್ಯಾಲಿಯನ್ನು ಉದ್ದೇ ಶಿಸಿ ಮಾತನಾಡಿದ ಅವರು, ನಾವು ವೋಟ್ ಬ್ಯಾಂಕ್‌ಗೆ ಹೆದ ರುವುದಿಲ್ಲ. ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಿಸಿದರು. ಈಗ ಸೀತಾಮಾತೆಯ ಜನ್ಮಸ್ಥಳವಾದ ಸೀತಾಮಡಿಯಲ್ಲಿ ಸೀತಾ ದೇಗುಲ ನಿರ್ಮಾಣ ಮಾಡುವ ಕೆಲಸ ಬಾಕಿಯಿದೆ. ರಾಮಮಂದಿರದಿಂದ ದೂರ ಉಳಿದವರಿಂದ ಇದು ಅಸಾಧ್ಯ. ಅದು ಮೋದಿ ಅವರಿಂದ ಮಾತ್ರ ಸಾಧ್ಯ. ಸೀತಾಮಾತೆಯ ಜನ್ಮಸ್ಥಳ ಪುನೌರ ಧಾಮ ವನ್ನು ಅಂತಾರಾಷ್ಟ್ರೀಯ ಯಾತ್ರಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡಲು ಎನ್‌ಡಿಎ ಸರಕಾರ ನಿರ್ಧರಿಸಿದೆ. ಇದಕ್ಕಾಗಿ ನಿತೀಶ್ ಕುಮಾರ್ ಸರಕಾರ 72.47 ಕೋಟಿ ರೂ. ಮೀಸಲಿಟ್ಟಿದೆ ಎಂದರು.
ಬಿಹಾರದ 40 ಲೋಕಸಭೆ ಕ್ಷೇತ್ರಗಳಲ್ಲಿ ಸೀತಾಮಡಿಯೂ ಒಂದಾಗಿದ್ದು, ಮೇ 20ರಂದು 5ನೇ ಹಂತದಲ್ಲಿ ಇಲ್ಲಿ ಮತದಾನ ನಡೆಯಲಿದೆ.
ವಿಪಕ್ಷಗಳಿಗೆ ಪ್ರಧಾನಿ ಅಭ್ಯರ್ಥಿ ಇಲ್ಲ : ಶಾ ವ್ಯಂಗ್ಯ
ಮಧುಬನಿಯಲ್ಲಿ ಮಾತನಾಡಿದ ಅಮಿತ್ ಶಾ, ವಿಪಕ್ಷಗಳ ಒಕ್ಕೂಟವಾದ ಐಎನ್‌ಡಿಐಎ ಕೂಟದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ. ಒಂದು ವೇಳೆ ಅವರು ಅಧಿಕಾರಕ್ಕೆ ಬಂದರೆ ವರ್ಷಕ್ಕೊಬ್ಬರು ಪ್ರಧಾನಿಯಾಗಲಿದ್ದಾರೆ. ಮಮತಾ ಬ್ಯಾನರ್ಜಿ, ಸ್ಟಾಲಿನ್, ಲಾಲು ಪ್ರಸಾದ್ ಇವರಲ್ಲಿ ಯಾರು ಪ್ರಧಾನಿಯಾಗಬಹುದು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ ಎಂದು ಹೇಳಿದ್ದಾರೆ. ಇದರ ಜತೆಗೆ ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು, ಅದನ್ನು ಭಾರತಕ್ಕೆ ಸೇರಿಸಿಯೇ ತೀರುತ್ತೇವೆ ಎಂದು ಸವಾಲು ಹಾಕಿದ್ದಾರೆ. ಸಂವಿಧಾನದ 370ನೇ ವಿಧಿ ರದ್ದು ಮಾಡಿದಾಗ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ರಾಹುಲ್ ಗಾಂಧಿ ಹೇಳಿಕೊಂಡಿದ್ದರು. ಈ 5 ವರ್ಷಗಳ ಅವಧಿಯಲ್ಲಿ ಏನೂ ಆಗಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.