Woman; ಶಾಮನೂರು ಹೇಳಿಕೆ ವಿರುದ್ಧ ಕಿಡಿ ಕಾರಿದ ಸೈನಾ ನೆಹ್ವಾಲ್
ದೇಶಕ್ಕಾಗಿ ಪದಕಗಳನ್ನು ಗೆದ್ದಾಗ ನಾನು ಏನು ಮಾಡಬೇಕೆಂದು ಕಾಂಗ್ರೆಸ್ ಪಕ್ಷ ಆದ್ಯತೆ ನೀಡುತ್ತಿತ್ತು?
Team Udayavani, Mar 30, 2024, 5:42 PM IST
ಬೆಂಗಳೂರು: ದಾವಣಗೆರೆಯ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ನೀಡಿದ ”ಮಾತನಾಡಲು ಬಾರದ ಬಿಜೆಪಿ ಅಭ್ಯರ್ಥಿ ಅಡುಗೆ ಮಾಡಲು ಲಾಯಕ್ಕು” ಹೇಳಿಕೆ ವಿರುದ್ಧ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಆಕ್ರೋಶ ಹೊರ ಹಾಕಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸೈನಾ ”ಮಹಿಳೆಯನ್ನು ಅಡುಗೆ ಕೋಣೆಗೆ ಸೀಮಿತಗೊಳಿಸಬೇಕು’- ಇದು ಕರ್ನಾಟಕದ ಅಗ್ರಮಾನ್ಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಮಾತು. ದಾವಣಗೆರೆಯ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಜೀ ಅವರ ಮೇಲಿನ ಹೇಳಿಕೆ ಲಡಕಿ ಹೂಂ ಲಡ್ ಸಕ್ತಿ ಹೂಂ ಎಂದು ಹೇಳುವ ಪಕ್ಷದಿಂದ ಕನಿಷ್ಠ ನಿರೀಕ್ಷೆಯಿತ್ತು. ನಾನು ಕ್ರೀಡಾಂಗಣದಲ್ಲಿ ದೇಶಕ್ಕಾಗಿ ಪದಕಗಳನ್ನು ಗೆದ್ದಾಗ ನಾನು ಏನು ಮಾಡಬೇಕೆಂದು ಕಾಂಗ್ರೆಸ್ ಪಕ್ಷ ಆದ್ಯತೆ ನೀಡುತ್ತಿತ್ತು? ಎಲ್ಲಾ ಹುಡುಗಿಯರು ಮತ್ತು ಮಹಿಳೆಯರು ತಮಗೆ ಇಷ್ಟವಾದ ಯಾವುದೇ ಕ್ಷೇತ್ರದಲ್ಲಿ ದೊಡ್ಡದನ್ನು ಸಾಧಿಸಬೇಕು ಎಂದು ಕನಸು ಕಾಣುತ್ತಿರುವಾಗ ಹೀಗೆ ಏಕೆ ಹೇಳಬೇಕು ….ಒಂದೆಡೆ ನಾವು ನಾರಿ ಶಕ್ತಿ ಕೋ ವಂದನ್ ಮಾಡುತ್ತಿದ್ದೇವೆ. ನಮ್ಮ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿದೆ ಮತ್ತು ಇನ್ನೊಂದೆಡೆ ನಾರಿ ಶಕ್ತಿ ಕಾ ಅಪಮಾನ ಮತ್ತು ಸ್ತ್ರೀದ್ವೇಷದ ಜನರಿದ್ದಾರೆ.. ನಿಜವಾಗಿಯೂ ಖಂಡನೀಯ” ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಹಿರಿಯ ನಾಯಕ ಶಾಮನೂರು ಅವರ ಟೀಕೆಯಿಂದ ಕುಪಿತಗೊಂಡ ಬಿಜೆಪಿ ಅಭ್ಯರ್ಥಿ ಗಾಯತ್ರಿಯವರು, ನಾವು ಈಗಾಗಲೇ ಗೆದ್ದಿದ್ದೇವೆ. ಚುನಾವಣೆ ಫಲಿತಾಂಶದ ದಿನ ನಾವು ಗೆದ್ದು ಮಹಿಳೆಯರು ಬರೀ ಅಡುಗೆ ಮಾಡುವುದಕ್ಕೆ ಮಾತ್ರವಲ್ಲ, ಅಧಿಕಾರವೂ ಚಲಾಯಿಸುತ್ತೇವೆ ಎಂದು ತೋರಿಸುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.
ನೆಹ್ವಾಲ್ 2020ರಲ್ಲಿ ಸಹೋದರಿ ಅಬು ಚಂದ್ರಾಂಶು ನೆಹ್ವಾಲ್ ಅವರೊಂದಿಗೆ ಬಿಜೆಪಿ ಸೇರಿದ್ದರು. ನರೇಂದ್ರ ಮೋದಿ ಅವರು ದೇಶಕ್ಕಾಗಿ ಶ್ರಮಿಸುತ್ತಿದ್ದಾರೆ ಮತ್ತು ನನಗೆ ಯಾವಾಗಲೂ ಸ್ಫೂರ್ತಿ ನೀಡುತ್ತಿದ್ದಾರೆ” ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.