BJP: ಕರ್ನಾಟಕದಲ್ಲಿ ಬಿಜೆಪಿ ಅರ್ಧಕ್ಕಿಂತ ಹೆಚ್ಚು ಸ್ಥಾನ ಗೆಲ್ಲಬಹುದು: ಎಸ್.ಎಲ್. ಭೈರಪ್ಪ
Team Udayavani, Mar 29, 2024, 10:34 PM IST
ಮೈಸೂರು: ದೇಶದಲ್ಲಿ ಮತ್ತೂಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದು, ಇದರಲ್ಲಿ ಯಾವುದೇ ಅನುಮಾನ ಬೇಡ. ರಾಜ್ಯದಲ್ಲಿ ಬಿಜೆಪಿ ಅರ್ಧಕ್ಕಿಂತ ಹೆಚ್ಚು ಸ್ಥಾನ ಗೆಲ್ಲಬಹುದು ಎಂದು ಹಿರಿಯ ಸಾಹಿತಿ ಪ್ರೊ| ಎಸ್. ಎಲ್. ಭೈರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಮತ್ತೆ ಪ್ರಧಾನಿ ಆಗಲು ದೇಶದಲ್ಲಿ ಉತ್ತಮ ವಾತಾವರಣವಿದೆ. ಕರ್ನಾಟಕದಲ್ಲಿ ಸ್ವಲ್ಪ ವೋಟು ವಿಭಜನೆಯಾಗುವ ಸಾಧ್ಯತೆಗಳಿದ್ದರೂ, ಬಿಜೆಪಿ ಅರ್ಧಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದರು.
ಗ್ಯಾರಂಟಿ ಯೋಜನೆಗೆ ಹಣವಿಲ್ಲ
ಈ ಹಿಂದೆ ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ನೇತೃತ್ವದ ಸರಕಾರ ಪರಿಣಾಮಕಾರಿಯಾಗಿ ಇರಲಿಲ್ಲ. ಅಧಿಕಾರವನ್ನು ಹಿಡಿತಕ್ಕೆ ತೆಗೆದುಕೊಳ್ಳಲಾಗಲಿಲ್ಲ. ಈಗಿನ ಸರಕಾರ ಅಧಿಕಾರಿಗಳ ಮೇಲೆ ಹಿಡಿತ ಹೊಂದಿದೆ. ಆದರೆ ಅವರು ಹೋಗುತ್ತಿರುವ ದಾರಿ ಸರಿಯಿಲ್ಲ. ಗ್ಯಾರಂಟಿ ಯೋಜನೆಗಳನ್ನು ನೀಡಿ ಅವರು ಜನಪ್ರಿಯ ಆಗಿರಬಹುದು. ಆದರೆ ಅದರಿಂದಾಗಿ ಸರಕಾರದಲ್ಲಿ ಹಣವಿಲ್ಲ. ಹೀಗಾಗಿಯೇ ರಾಜ್ಯ ಸರಕಾರದವರು ಕೇಂದ್ರವನ್ನು ದೂಷಿಸುತ್ತಿದ್ದಾರೆ ಎಂದು ಹೇಳಿದರು.
ಭೈರಪ್ಪನವರ ಆಶೀರ್ವಾದ ಪಡೆದ ಯದುವೀರ್
ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಶುಕ್ರವಾರ ಬೆಳಗ್ಗೆ ಎಸ್.ಎಲ್.ಭೈರಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಪ್ರತಾಪಸಿಂಹ ಡೈನಮಿಕ್ ಮ್ಯಾನ್, ಯದುವೀರ್ ಒಳ್ಳೆಯ ಅಭ್ಯರ್ಥಿ
ಸಂಸದ ಪ್ರತಾಪಸಿಂಹ ಡೈನಮಿಕ್ ಮ್ಯಾನ್. ಕಳೆದ ಹತ್ತು ವರ್ಷಗಳಲ್ಲಿ ತುಂಬಾ ಒಳ್ಳೆಯ ಕೆಲಸ ಮಾಡಿದ್ದಾರೆ. ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆಗೆ ವಿರೋಧಿಸಿದ್ದರು. ಅವರ ಬಳಿ ಹೋರಾಟದ ಕೆಚ್ಚು ಇದೆ. ಈ ಬಾರಿ ಅವರಿಗೆ ಟಿಕೆಟ್ ತಪ್ಪಿದೆ. ಸಂಸದನಾದರೆ ಅಲ್ಲೇ ಕೇಂದ್ರೀಕೃತವಾಗಿರಬೇಕು. ಅದನ್ನು ಬಿಟ್ಟು ಮಾಡಲು ಬಹಳ ಕೆಲಸ ಇದೆ. ಪ್ರತಾಪಸಿಂಹ ಆ ಉತ್ಸಾಹದಲ್ಲೇ ಇದ್ದಾರೆ ಎಂದು ಭೈರಪ್ಪ ಹೇಳಿದರು.
ಬಿಜೆಪಿ ಯದುವೀರ್‌ಗೆ ಟಿಕೆಟ್ ಕೊಟ್ಟಿರುವುದು ಒಳ್ಳೆಯದೇ ಆಗಿದೆ. ಯದುವೀರ್ ಹಿನ್ನೆಲೆ ನೋಡಿದಾಗ, ಅವರು ಒಳ್ಳೆಯ ಅಭ್ಯರ್ಥಿಯಾಗಿದ್ದು, ಇವರಿಗೆ ಸ್ಥಾನಮಾನ ಕೊಟ್ಟರೆ ಉತ್ತಮವಾಗಿ ನಿಭಾಯಿಸುತ್ತಾರೆ ಎಂದನಿಸುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.