Tamil Nadu ಹೇಳಿಕೆ; ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲಿಸಿದ ಆಯೋಗ
Team Udayavani, Mar 21, 2024, 5:55 PM IST
ಬೆಂಗಳೂರು: ತಮಿಳುನಾಡಿನಿಂದ ಬಂದು ಬೆಂಗಳೂರಲ್ಲಿ ಬಾಂಬ್ ಇಡುತ್ತಾರೆ’ ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾದ ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.
ಪ್ರತಿಭಟನಾ ಸಭೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಚುನಾವಣ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದ ಶೋಭಾ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವರದಿಯನ್ನು 48 ಗಂಟೆಯೊಳಗೇ ನೀಡುವಂತೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಕೇಂದ್ರ ಚುನಾವಣ ಆಯೋಗವು ಸೂಚಿಸಿತ್ತು.
ಹೇಳಿಕೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕರಂದ್ಲಾಜೆ ಅವರ ನೀತಿ ಸಂಹಿತೆ ಉಲ್ಲಂಘನೆಯ ಕುರಿತು ಡಿಎಂಕೆ ದೂರಿನ ಕುರಿತು ತತ್ ಕ್ಷಣ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ (ಸಿಇಒ) ಅವರಿಗೆ ಚುನಾವಣ ಆಯೋಗ ನಿರ್ದೇಶನ ನೀಡಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಸಿಇಒ ಪ್ರಕಾರ, ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಕರಂದ್ಲಾಜೆ ವಿರುದ್ಧ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಆರ್‌ಪಿ (ಜನಪ್ರತಿನಿಧಿ) ಕಾಯ್ದೆಯ ಸೆಕ್ಷನ್ 123 (3 ಎ), 125 ಮತ್ತು 123 (3) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.