![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 30, 2024, 9:10 PM IST
ಹೊಸದಿಲ್ಲಿ : ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ 8ನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಪಂಜಾಬ್‌ನ 13 ಲೋಕಸಭಾ ಸ್ಥಾನಗಳ ಪೈಕಿ ಆರಕ್ಕೆ ಪಕ್ಷವು ಅಭ್ಯರ್ಥಿಗಳನ್ನು ಶನಿವಾರ ಪ್ರಕಟಿಸಿದೆ.
ಗಮನಾರ್ಹವೆಂದರೆ ಅಮೃತಸರ ಕ್ಷೇತ್ರದಿಂದ ಮಾಜಿ ರಾಜತಾಂತ್ರಿಕ ತರಂಜಿತ್ ಸಂಧು ಅವರನ್ನು ಕಣಕ್ಕಿಳಿಸಿದೆ. ತರಂಜಿತ್ ಸಂಧು ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಕುತೂಹಲಕಾರಿಯಾಗಿ, ದೆಹಲಿಯ ವಾಯುವ್ಯ ಕ್ಷೇತ್ರದ ಹಾಲಿ ಬಿಜೆಪಿ ಸಂಸದ ಹನ್ಸ್ ರಾಜ್ ಹನ್ಸ್ ಅವರನ್ನು ಪಂಜಾಬ್ ನ ಫರೀದ್‌ಕೋಟ್ ಕ್ಷೇತ್ರದಲ್ಲಿ ಕಣಕ್ಕಿಳಿಸಲಾಗುತ್ತಿದೆ. ಗುರುದಾಸ್‌ಪುರದಿಂದ ಬಾಲಿವುಡ್ ನಟ ಮತ್ತು ಹಾಲಿ ಸಂಸದ ಸನ್ನಿ ಡಿಯೋಲ್ ಅವರನ್ನು ಕೈಬಿಟ್ಟಿದೆ.ಗುರುದಾಸ್‌ಪುರದಿಂದ ದಿನೇಶ್ ಸಿಂಗ್ ಕಣಕ್ಕಿಳಿಯಲಿದ್ದಾರೆ.
ಕಾಂಗ್ರೆಸ್ ನ ಪ್ರಬಲ ಮುಖಗಳಾಗಿದ್ದ ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ ಪಟಿಯಾಲದಿಂದ ಮತ್ತು ರವನೀತ್ ಸಿಂಗ್ ಬಿಟ್ಟು ಲುಧಿಯಾನದಿಂದ ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ.
ಒಡಿಶಾದ ಮೂರು ಮತ್ತು ಪಶ್ಚಿಮ ಬಂಗಾಳದ ಎರಡು ಸ್ಥಾನಗಳಿಗೂ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.