Times Now-ETG ರಿಸರ್ಚ್ ಸಮೀಕ್ಷೆ: ಎನ್‌ಡಿಎ 400 ಸೀಟು ಗೆಲ್ಲುವ ಗುರಿ ತಲುಪುವುದು ಕಷ್ಟ
Team Udayavani, Apr 6, 2024, 6:20 AM IST
ಹೊಸದಿಲ್ಲಿ: ಲೋಕಸಭೆ ಚುನಾವಣ ಪ್ರಚಾರ ಕಾವೇರುತ್ತಿರುವ ಹೊತ್ತಿನಲ್ಲೇ ಮತ್ತೂಂದು ಸಮೀಕ್ಷೆ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸ್ಪಷ್ಟ ಜಯ ಸಿಗಲಿದೆ ಎಂದು ಹೇಳಿದೆ. “ಟೈಮ್ಸ್ ನೌ’ -ಇಟಿಜಿ ರಿಸರ್ಚ್ ಸಮೀಕ್ಷೆಯಲ್ಲಿ ಈ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 370 ಸ್ಥಾನ ಗೆಲ್ಲಲಿದೆ ಭವಿಷ್ಯ ನುಡಿದಿದೆ. ಆದರೆ ಬಿಜೆಪಿಯ “400 ಸೀಟು’ ಗೆಲ್ಲುವ ಗುರಿ ತಲುಪುವುದು ಕಷ್ಟ ಸಾಧ್ಯ ಎಂದಿದೆ.
ಬಿಜೆಪಿ 329ರಿಂದ 350, ಕಾಂಗ್ರೆಸ್ 27ರಿಂದ 47, ವೈಎಸ್‌ಆರ್ ಕಾಂಗ್ರೆಸ್ 21ರಿಂದ 22, ಡಿಎಂಕೆ 24ರಿಂದ 28, ಟಿಎಂಸಿ 17ರಿಂದ 21, ಬಿಜೆಡಿ 10ರಿಂದ 12, ಆಪ್ 5ರಿಂದ 7 ಮತ್ತು ಇತರರು 72ರಿಂದ 92 ಕ್ಷೇತ್ರಗಳಲ್ಲಿ ಜಯ ಗಳಿಸಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಸಮೀಕ್ಷೆಯಲ್ಲಿ ಭಾಗಿಯಾದವರ ಪೈಕಿ ಶೇ.91ರಷ್ಟು ಮಂದಿ ಬಿಜೆಪಿ ನೇತೃತ್ವದ ಎನ್‌ಡಿಎ 3ನೇ ಬಾರಿಗೆ ಅಧಿಕಾರಕ್ಕೇರಲಿದೆ ಎಂದು ಹೇಳಿದ್ದಾರೆ. ಶೇ.45ರಷ್ಟು ಮಂದಿ ಎನ್‌ಡಿಎ 300ಕ್ಕೂ ಅಧಿಕ ಹೆಚ್ಚು ಸೀಟು ಗೆಲ್ಲಲಿದೆ ಎಂದಿದ್ದರೆ, ಶೇ.14ಕ್ಕೂ ಹೆಚ್ಚು ಜನ 400ರ ಗಡಿ ದಾಟಬಹುದು ಎಂದು ಊಹಿಸಿದ್ದಾರೆ.
ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗ ಲಿದ್ದಾರೆಂದು ಶೇ.64 ಮಂದಿ ಅಭಿಪ್ರಾಯಪಟ್ಟರೆ, ಶೇ.17ರಷ್ಟು ಜನರು ರಾಹಲ್ ಗಾಂಧಿ ಅವರತ್ತ ಒಲವು ತೋರಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಈ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.